AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

Akshay Kumar New Movie: ಈ ಸಿನಿಮಾ ಬಗ್ಗೆ ಅಕ್ಷಯ್​ ಕುಮಾರ್​ ಅವರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಾಮಾಜಿಕ ಸಂದೇಶ ಇರುವ ಇಂಥ ಸಿನಿಮಾಗಳನ್ನು ಮಾಡುವುದು ಎಂದರೆ ಅವರಿಗೆ ಹೆಚ್ಚು ಆಸಕ್ತಿ.

Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​
ಅಕ್ಷಯ್ ಕುಮಾರ್
TV9 Web
| Edited By: |

Updated on: Dec 05, 2022 | 7:00 AM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ 2022ರ ವರ್ಷದಲ್ಲಿ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿಲ್ಲ. ನಟಿಸಿದ ಬಹುತೇಕ ಸಿನಿಮಾಗಳು ಕೈ ಕೊಟ್ಟಿವೆ. ‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’, ‘ರಕ್ಷಾ ಬಂಧನ್​’, ‘ರಾಮ್​ ಸೇತು’ ಸಿನಿಮಾಗಳು ಈ ವರ್ಷ ರಿಲೀಸ್​ ಆಗಿವೆ. ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡುವಲ್ಲಿ ಈ ಚಿತ್ರಗಳು (Akshay Kumar Movies) ವಿಫಲವಾಗಿವೆ. ಅಕ್ಷಯ್​ ಕುಮಾರ್​ ಅವರು ಹೊಸದೇನಾದರೂ ಪ್ರಯತ್ನಿಸುವ ಅನಿವಾರ್ಯತೆ ಇದೆ. ಈಗ ಅವರು ಲೈಂಗಿಕ ಶಿಕ್ಷಣದ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಅಕ್ಷಯ್​ ಕುಮಾರ್​ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ಅವರ ಮುಂದಿನ ಸಿನಿಮಾ (Akshay Kumar New Movie) ಬಗ್ಗೆ ಸಖತ್​ ನಿರೀಕ್ಷೆ ಮೂಡುವಂತಾಗಿದೆ.

‘ರೆಡ್​ ಸೀ ಇಂಟರ್​ ನ್ಯಾಷನಲ್​ ಫಿಲ್ಮ್​ ಫೆಸ್ಟಿವಲ್​’ನಲ್ಲಿ ಅಕ್ಷಯ್​ ಕುಮಾರ್​ ಭಾಗಿ ಆಗಿದ್ದಾರೆ. ಈ ವೇಳೆ ಅವರು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ. ‘ಲೈಂಗಿಕ ಶಿಕ್ಷಣದ ಕುರಿತು ನಾನು ಸಿನಿಮಾ ಮಾಡುತ್ತಿದ್ದೇನೆ. ಇದು ಮುಖ್ಯವಾದ ವಿಷಯ. ಆದರೆ ಹೆಚ್ಚಿನ ಕಡೆಗಳಲ್ಲಿ ಇದು ಇಲ್ಲ. ಶಾಲೆಯಲ್ಲಿ ನಾವು ಎಲ್ಲ ವಿಷಯ ಕಲಿಯುತ್ತೇವೆ. ಅದೇ ರೀತಿ ಲೈಂಗಿಕ ಶಿಕ್ಷಣ ಕೂಡ ಜಗತ್ತಿನ ಎಲ್ಲ ಶಾಲೆಯಲ್ಲಿ ಇರಬೇಕು’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಈ ಸಿನಿಮಾ ಬಗ್ಗೆ ಅಕ್ಷಯ್​ ಕುಮಾರ್​ ಅವರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ರೀತಿಯ ಸಾಮಾಜಿಕ ಸಂದೇಶ ಸಾರುವ ಸಿನಿಮಾಗಳನ್ನು ಮಾಡುವುದು ಎಂದರೆ ಅವರಿಗೆ ಹೆಚ್ಚು ಆಸಕ್ತಿ. ಈ ಹಿಂದೆ ‘ಟಾಯ್ಲೆಟ್​: ಏಕ್​ ಪ್ರೇಮ್​ ಕಥಾ’, ‘ಪ್ಯಾಡ್​ ಮ್ಯಾನ್​’ ಸಿನಿಮಾಗಳಲ್ಲಿ ಅವರು ಸಾಮಾಜಿಕ ಸಂದೇಶ ನೀಡಿದ್ದರು. ಲೈಂಗಿಕ ಶಿಕ್ಷಣದ ಕುರಿತಾದ ಸಿನಿಮಾ 2023ರ ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ರಿಲೀಸ್​ ಆಗಲಿದೆ.

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

‘ಕಮರ್ಷಿಯಲ್​ ದೃಷ್ಟಿಯಿಂದ ಈ ರೀತಿಯ ಸಿನಿಮಾಗಳು ದೊಡ್ಡದು ಎನಿಸುವುದಿಲ್ಲ. ಆದರೆ ನನಗೆ ತೃಪ್ತಿ ನೀಡುತ್ತವೆ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ. ಈ ಹೊಸ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗ ಆಗಬೇಕಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಹೇರಾ ಫೇರಿ 3’ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ನಟಿಸಬೇಕಿತ್ತು. ಆದರೆ ಆ ಸಿನಿಮಾದಲ್ಲಿ ಅವರು ಬಣ್ಣ ಹಚ್ಚುತ್ತಿಲ್ಲ. ಸ್ಕ್ರಿಪ್ಟ್​ ಇಷ್ಟ ಆಗಿಲ್ಲ ಎಂಬ ಕಾರಣಕ್ಕೆ ಅವರು ಸಿನಿಮಾ ಒಪ್ಪಿಕೊಂಡಿಲ್ಲ. ಬಳಿಕ ಆ ಅವಕಾಶ ಕಾರ್ತಿಕ್​ ಆರ್ಯನ್ ಪಾಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ