‘ತಪ್ಪಿತಸ್ಥರಿಗೆ ಘೋರ ಶಿಕ್ಷೆಯಾಗಲಿ’; ಮಹಿಳೆಯರ ಬೆತ್ತಲು ಮೆರವಣಿಗೆ ಮಾಡಿದವರ ವಿರುದ್ಧ ಸಿಡಿದೆದ್ದ ಬಾಲಿವುಡ್ ಮಂದಿ

ಬಾಲಿವುಡ್​​ ನಟ ಅಕ್ಷಯ್ ಕುಮಾರ್, ರಿತೇಶ್ ದೇಶ್​ಮುಖ್​. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಟ್ವೀಟ್ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಎಂದು ಅವರು ಆಗ್ರಹಿಸಿದ್ದಾರೆ.

‘ತಪ್ಪಿತಸ್ಥರಿಗೆ ಘೋರ ಶಿಕ್ಷೆಯಾಗಲಿ’; ಮಹಿಳೆಯರ ಬೆತ್ತಲು ಮೆರವಣಿಗೆ ಮಾಡಿದವರ ವಿರುದ್ಧ ಸಿಡಿದೆದ್ದ ಬಾಲಿವುಡ್ ಮಂದಿ
ಅಕ್ಷಯ್-ರಿತೇಶ್-ವಿವೇಕ್
Follow us
ರಾಜೇಶ್ ದುಗ್ಗುಮನೆ
|

Updated on:Jul 20, 2023 | 3:08 PM

ಮಣಿಪುರ (Manipur Vilene) ಹೊತ್ತಿ ಉರಿಯುತ್ತಿದೆ. ಅನೇಕ ಹಿಂಸಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಇತ್ತೀಚೆಗೆ ಮಹಿಳೆಯರನ್ನು ಬೆತ್ತಲು ಮೆರವಣಿಗೆ ಮಾಡಿ, ಅವರ ಮೇಲೆ ಅತ್ಯಾಚಾರ ಮಾಡಲಾಗಿತ್ತು. ಈ ವಿಡಿಯೋ ಈಗ ವೈರಲ್ ಆಗಿದೆ. ಈ ವಿಚಾರವಾಗಿ ಬಾಲಿವುಡ್​​ ನಟ ಅಕ್ಷಯ್ ಕುಮಾರ್ (Akshay Kumar), ರಿತೇಶ್ ದೇಶ್​ಮುಖ್​. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಟ್ವೀಟ್ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಎಂದು ಅವರು ಆಗ್ರಹಿಸಿದ್ದಾರೆ. ಸೆಲೆಬ್ರಿಟಿಗಳು ಈ ಬಗ್ಗೆ ಮಾತನಾಡಿದ್ದಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಏನಿದು ವಿಡಿಯೋ?

ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡ ಮಾಡಲಾಗಿದೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ಅನೇಕರು ಧ್ವನಿ ಎತ್ತಿದ್ದಾರೆ.

ಅಕ್ಷಯ್ ಕುಮಾರ್ ಬೇಸರ

ಮಣಿಪುರ ಹಿಂಸಾಚಾರ ವಿಚಾರದಲ್ಲಿ ಅಕ್ಷಯ್ ಕುಮಾರ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವೀಡಿಯೋ ನೋಡಿ ಬೆಚ್ಚಿಬಿದ್ದೆ, ಜಿಗುಪ್ಸೆ ಉಂಟಾಯಿತು. ತಪ್ಪಿತಸ್ಥರಿಗೆ ಘೋರ ಶಿಕ್ಷೆ ಸಿಗಲಿ. ಆ ಶಿಕ್ಷೆ ಹೇಗಿರಬೇಕು ಎಂದರೆ ಅದನ್ನು ನೋಡಿ ಮುಂದೆ ಯಾರೂ ಇಂಥ ತಪ್ಪು ಮಾಡುವ ಬಗ್ಗೆ ಆಲೋಚನೆಯನ್ನೂ ಮಾಡಬಾರದು’ ಎಂದು ಅವರು ಬರೆದುಕೊಂಡಿದ್ದಾರೆ.

ರಿತೇಶ್ ದೇಶ್​ಮುಖ್ ಆಕ್ರೋಶ

ಬಾಲಿವುಡ್ ಹೀರೋ ರಿತೇಶ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋದಿಂದ ಆಳವಾಗಿ ವಿಚಲಿತನಾಗಿದ್ದೇನೆ. ಕೋಪ ಬರುತ್ತಿದೆ. ಇಂತಹ ಅಪರಾಧಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಮಹಿಳೆಯ ಘನತೆಯ ಮೇಲಿನ ದಾಳಿಯು ಮಾನವೀಯತೆಯ ಮೇಲಿನ ದಾಳಿಯೇ ಆಗಿದೆ’ ಎಂದು ರಿತೇಶ್ ಹೇಳಿದ್ದಾರೆ.

ಕಿಯಾರಾ ಅಡ್ವಾಣಿ ಬೇಸರ

‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ಭಯಾನಕವಾಗಿದೆ. ಇದು ನನ್ನನ್ನು ಬೆಚ್ಚಿಬೀಳಿಸಿದೆ. ಮಹಿಳೆಯರಿಗೆ ಆದಷ್ಟು ಬೇಗ ನ್ಯಾಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಲಿ’ ಎಂದು ಕಿಯಾರಾ ಟ್ವೀಟ್ ಮಾಡಿದ್ದಾರೆ.  ಇಷ್ಟೇ ಅಲ್ಲದೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮೊದಲಾದವರು ಕೂಡ ಟ್ವೀಟ್ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್-ಕಿಯಾರಾ ಹೊಸ ಸಿನಿಮಾದ ನಿರ್ದೇಶಕ ಬದಲು? ಮತ್ತೆ ಕೈಕೊಟ್ಟರಾ ಶಂಕರ್

ಮಣಿಪುರದಲ್ಲಿ ಹಿಂಸಾಚಾರ ಏಕೆ?

ಮೈತಿ ಸಮುದಾಯದವರು ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ ಇದನ್ನು ಕುಕಿ ಸಮುದಾಯದವರು ವಿರೋಧಿಸಿದ್ದರು. ಮೇ 3ರಂದು ಇಬ್ಬರ ಮಧ್ಯೆ ಇದಕ್ಕಾಗಿ ಸಂಘರ್ಷ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೆ ಅನೇಕ ಹಿಂಸಾಚಾರಗಳು ಮಣಿಪುರದಲ್ಲಿ ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:40 pm, Thu, 20 July 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ