OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?

Akshay Kumar: ಅಕ್ಷಯ್​ ಕುಮಾರ್​ ಅವರು ನಟಿಸಿದ ಯಾವ ಚಿತ್ರಗಳೂ ಇತ್ತೀಚೆಗೆ ಚಿತ್ರಮಂದಿರಲ್ಲಿ ಗೆಲ್ಲುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೋಡಿದರೆ ಒಟಿಟಿ ಸೂಕ್ತ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ನಿರ್ಮಾಪಕರ ಆಲೋಚನೆ ಬೇರೆ ಇದೆ.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?
ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on: May 28, 2023 | 1:38 PM

ನಟ ಅಕ್ಷಯ್​ ಕುಮಾರ್ (Akshay Kumar) ಅವರು ಎಲ್ಲ ಬಗೆಯ ಪಾತ್ರಗಳಿಗೂ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ್ದ ‘ಓಹ್​ ಮೈ ಗಾಡ್​’ ಸಿನಿಮಾ 2012ರಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿತ್ತು. ಪರೇಶ್​ ರಾವಲ್​ ಮತ್ತು ಅಕ್ಷಯ್​ ಕುಮಾರ್​ ಅವರ ಕಾಂಬಿನೇಷನ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು. ಈ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿರುವ ವಿಚಾರ ಗೊತ್ತೇ ಇದೆ. ಈಗಾಗಲೇ ‘ಓಹ್​ ಮೈ ಗಾಡ್​ 2’ (Oh My God 2) ಸಿನಿಮಾದ ಬಹುತೇಕ ಕೆಲಸಗಳು ಮುಗಿದಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬಿಡುಗಡೆ ಬಗ್ಗೆ ಚಿತ್ರತಂಡದಲ್ಲಿ ಮಾತುಕಥೆ ನಡೆಯುತ್ತಿದೆ. ಇದು ಒಟಿಟಿ (OTT) ಜಮಾನಾ. ಹಾಗಾಗಿ ಅನೇಕ ಸಿನಿಮಾಗಳು ನೇರವಾಗಿ ಒಟಿಟಿಯಲ್ಲಿ ತೆರೆ ಕಾಣುತ್ತಿದೆ. ‘ಓಹ್​ ಮೈ ಗಾಡ್​’ ಸಿನಿಮಾವನ್ನು ಒಟಿಟಿಯಲ್ಲಿ ತೆರೆ ಕಾಣಿಸಬೇಕೋ ಅಥವಾ ಚಿತ್ರಮಂದಿರಲ್ಲಿ ಬಿಡುಗಡೆ ಮಾಡಬೇಕೋ ಎಂಬ ಬಗ್ಗೆ ಚಿತ್ರತಂಡದಲ್ಲೇ ಚರ್ಚೆ ನಡೆಯುತ್ತಿದೆ. ಒಟಿಟಿಗಿಂತಲೂ ಥಿಯೇಟರ್​ನಲ್ಲಿ ಬಿಡುಗಡೆ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಅಕ್ಷಯ್​ ಕುಮಾರ್​ ಅವರು ನಟಿಸಿದ ಯಾವ ಚಿತ್ರಗಳೂ ಇತ್ತೀಚೆಗೆ ಚಿತ್ರಮಂದಿರಲ್ಲಿ ಗೆಲ್ಲುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೋಡಿದರೆ ‘ಓಹ್​ ಮೈ ಗಾಡ್​ 2’ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುವುದೇ ಸೂಕ್ತ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ನಿರ್ಮಾಪಕರು ಥಿಯೇಟರ್​ನಲ್ಲಿ ರಿಲೀಸ್​ ಮಾಡಲು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Akshay Kumar: ಗಣಿಗಾರಿಕೆ ಕುರಿತು ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಗೆಲುವಿಗಾಗಿ ಟೈಟಲ್​ ಬದಲಾವಣೆ ಮಾಡಿದ ಚಿತ್ರತಂಡ?

ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ಶಂಕರ’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಇದರಲ್ಲಿ ನಾಯಕಿಯಾಗಿ ಅನನ್ಯಾ ಪಾಂಡೆ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಅವರು ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಾಕಷ್ಟು ಗೌಪ್ಯವಾಗಿಯೇ ಎಲ್ಲ ಕೆಲಸಗಳನ್ನು ಮುಗಿಸಲಾಗುತ್ತಿದೆ. ಇದಲ್ಲದೇ ಹಲವು ಚಿತ್ರಗಳು ಅವರ ಕೈಯಲ್ಲಿವೆ. ‘ಸೂರರೈ ಪೋಟ್ರು’ ಹಿಂದಿ ರಿಮೇಕ್​, ‘ಬಡೆಮಿಯಾ ಚೋಟೆ ಮಿಯಾ’, ‘ಓಹ್​ ಮೈ ಗಾಡ್​ 2’, ‘ವೇಡಾತ್​ ಮರಾಠೆ ವೀರ್​ ದೌಡಲೇ ಸಾಥ್​’, ‘ದ ಗ್ರೇಡ್​ ಇಂಡಿಯನ್​ ರೆಸ್ಕ್ಯೂ’ ಮುಂತಾದ ಸಿನಿಮಾಗಳು ಒಂದರಹಿಂದೊಂದು ಬಿಡುಗಡೆ ಆಗಲಿವೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

2022ರ ವರ್ಷ ಅಕ್ಷಯ್​ ಕುಮಾರ್​ ಪಾಲಿಗೆ ನೀರಸವಾಗಿತ್ತು. ಅವರು ನಟಿಸಿದ ಯಾವ ಚಿತ್ರಗಳೂ ಗೆಲ್ಲಲಿಲ್ಲ. ಕೊನೇ ಪಕ್ಷ 2023ರಲ್ಲಾದರೂ ಅವರು ಗೆಲುವಿನ ಖಾತೆ ತೆರೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಲಿಲ್ಲ. ಅವರು ನಟಿಸಿದ ‘ಸೆಲ್ಫೀ’ ಸಿನಿಮಾ ಫೆಬ್ರವರಿಯಲ್ಲಿ ತೆರೆಕಂಡು ಸೋತಿತು. ಮುಂಬರುವ ಚಿತ್ರಗಳ ಮೂಲಕವಾದರೂ ಅವರಿಗೆ ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಬರೀ ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಅಕ್ಷಯ್​ ಕುಮಾರ್​ ಅವರು ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಪ್ರತಿದಿನ ಅವರು ವ್ಯಾಯಾಮ ತಪ್ಪಿಸುವುದಿಲ್ಲ. ಕ್ರೀಡೆ ಬಗ್ಗೆಯೂ ಅವರಿಗೆ ಸಖತ್​ ಆಸಕ್ತಿ ಇದೆ. ಇತ್ತೀಚೆಗೆ ಅವರು ಪೊಲೀಸರ ಜೊತೆ ವಾಲಿಬಾಲ್​ ಆಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಶೂಟಿಂಗ್​ ಸಲುವಾಗಿ ಡೆಹರಾಡೂನ್​ಗೆ ತೆರಳಿರುವ ಅಕ್ಷಯ್​ ಕುಮಾರ್​ ಅವರು ಬಿಡುವಿನ ವೇಳೆ ವಾಲಿಬಾಲ್​ ಆಡಿದ್ದಾರೆ. ಅವರ ಪಂದ್ಯವನ್ನು ನೋಡಲು ಸ್ಟೇಡಿಯಂನಲ್ಲಿ ಜನರು ನೆರೆದಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ