ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್; ‘OMG 2’ ರಿಲೀಸ್ ದಿನಾಂಕ ಘೋಷಣೆ ಹಿಂದೆ ದೊಡ್ಡ ಲೆಕ್ಕಾಚಾರ

Akshay Kumar: ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಆಗಸ್ಟ್ 11ಕ್ಕೆ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ, ಆ ಸಿನಿಮಾ ರೇಸ್​ನಿಂದ ಹಿಂದೆ ಸರಿದಿದೆ. ಈ ಕಾರಣದಿಂದಲೇ ‘ಓಎಂಜಿ 2’ ಸಿನಿಮಾ ಈ ಸಂದರ್ಭದಲ್ಲಿ ರಿಲೀಸ್ ಆಗುತ್ತಿದೆ.

ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್; ‘OMG 2’ ರಿಲೀಸ್ ದಿನಾಂಕ ಘೋಷಣೆ ಹಿಂದೆ ದೊಡ್ಡ ಲೆಕ್ಕಾಚಾರ
ಅಕ್ಷಯ್ ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on:Jul 11, 2023 | 12:28 PM

ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಓಹ್ ಮೈ ಗಾಡ್’ (Oh My God) ಸಿನಿಮಾ 2012ರಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಚಿತ್ರ ತೆಲುಗು, ಕನ್ನಡದಲ್ಲೂ ರಿಮೇಕ್​ ಆಗಿ ಸದ್ದು ಮಾಡಿತ್ತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ. ಆಗಸ್ಟ್ 11ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಕ್ಷಯ್ ಕುಮಾರ್ ಅವರು ಶಿವನ ಅವತಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪೋಸ್ಟರ್​ಗಳು ಎಲ್ಲ ಕಡೆ ವೈರಲ್ ಆಗಿದೆ. ಸಿನಿಮಾದ ಟೀಸರ್ ಶೀಘ್ರವೇ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿದೆ.

ಅಕ್ಷಯ್ ಕುಮಾರ್ ಅವರು ಬ್ಯಾಕ್ ಟು ಬ್ಯಾಕ್ ಸೋಲು ಕಾಣುತ್ತಿದ್ದಾರೆ. 2021ರಲ್ಲಿ ರಿಲೀಸ್ ಆದ ‘ಸೂರ್ಯವಂಶಿ’ ಚಿತ್ರವೇ ಕೊನೆ. ಇದಾದ ಬಳಿಕ ಅವರ ಸಿನಿಮಾಗಳು ಫ್ಲಾಪ್ ಆದವು. ‘ಬಚ್ಚನ್ ಪಾಂಡೆ’, ‘ಸಾಮ್ರಾಟ್ ಪೃಥ್ವಿರಾಜ್’, ‘ರಕ್ಷಾ ಬಂಧನ್’, ‘ರಾಮ್ ಸೇತು’ ಸೇರಿ ಇನ್ನೂ ಅನೇಕ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಲು ವಿಫಲ ಆದವು. ಈ ವರ್ಷ ತೆರೆಗೆ ಬಂದ ‘ಸೆಲ್ಫೀ’ ಚಿತ್ರದ ಕಥೆ ಕೂಡ ಅಷ್ಟೇ. ಈಗ ಅವರು ‘ಓಎಂಜಿ 2’ ಮೂಲಕ ಅದೃಷ್ಟಪರೀಕ್ಷೆಗೆ ಮುಂದಾಗಿದ್ದಾರೆ.

ಈ ಮೊದಲು ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಆಗಸ್ಟ್ 11ಕ್ಕೆ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ, ಆ ಸಿನಿಮಾ ರೇಸ್​ನಿಂದ ಹಿಂದೆ ಸರಿದಿದೆ. ಈ ಕಾರಣದಿಂದಲೇ ‘ಓಎಂಜಿ 2’ ಸಿನಿಮಾ ಈ ಸಂದರ್ಭದಲ್ಲಿ ರಿಲೀಸ್ ಆಗುತ್ತಿದೆ. ಆಗಸ್ಟ್​ 15ರಂದು ಹಾಲಿಡೇ ಇರುವುದರಿಂದ ಸಿನಿಮಾದ ಕಲೆಕ್ಷನ್ ಹೆಚ್ಚಲು ಸಹಕಾರಿ ಆಗಲಿದೆ.

ಅಮಿತ್ ರಾಯ್ ಅವರು ‘ಓಎಂಜಿ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಕ್ಷಯ್ ಕುಮಾರ್ ಅವರು ಶಿವನ ಪಾತ್ರ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಪೋಸ್ಟರ್ ಮೂಡಿ ಬಂದಿದೆ. ಪಂಕಜ್ ತ್ರಿಪಾಠಿ, ಅರುಣ್ ಗೋವಿಲ್ ಮೊದಲಾದವರು ನಟಿಸಿದ್ದಾರೆ. 1987ರ ‘ರಾಮಾಯಣ’ ಧಾರಾವಾಹಿಯಲ್ಲಿ ಅರುಣ್ ಅವರು ರಾಮನ ಪಾತ್ರ ಮಾಡಿದ್ದರು. ‘ಓಎಂಜಿ 2’ ಚಿತ್ರದಲ್ಲೂ ಅವರಿಗೆ ರಾಮನ ಪಾತ್ರವನ್ನೇ ನೀಡಲಾಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ: Housefull 5: ‘ಹೌಸ್​ಫುಲ್ 5’ ಘೋಷಿಸಿದ ನಟ ಅಕ್ಷಯ್ ಕುಮಾರ್; ರಿಲೀಸ್ ದಿನಾಂಕವನ್ನೂ ಪ್ರಕಟಿಸಿದ ನಟ

ಅಕ್ಷಯ್ ಕುಮಾರ್​ಗೆ ಈ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಅವರು ಸಿನಿಮಾಗೆ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಸದ್ಯ ಅವರ ಕೈಯಲ್ಲಿ 8ಕ್ಕೂ ಅಧಿಕ ಸಿನಿಮಾಗಳಿವೆ. ಪ್ರತಿ ಚಿತ್ರಕ್ಕೆ ಅಕ್ಷಯ್ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:26 pm, Mon, 3 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್