Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ

Raksha Bandhan | Laal Singh Chaddha: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾಗೆ ಉತ್ತಮ ವಿಮರ್ಶೆ ಸಿಕ್ಕಿಲ್ಲ. ಹಾಗಿದ್ದರೂ ‘ರಕ್ಷಾ ಬಂಧನ್​’ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್​ ಮಾಡಿದೆ.

Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ
ರಕ್ಷಾ ಬಂಧನ್, ಲಾಲ್ ಸಿಂಗ್ ಚಡ್ಡಾ
Follow us
TV9 Web
| Updated By: ಮದನ್​ ಕುಮಾರ್​

Updated on:Aug 12, 2022 | 4:41 PM

ಈ ವಾರ ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಸ್ಟಾರ್​ ನಟರ ಮುಖಾಮುಖಿ ಆಗಿದೆ. ಎರಡು ಬಹುನಿರೀಕ್ಷಿತ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಪೈಪೋಟಿ ನಡೆಸುತ್ತಿವೆ. ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ‘ರಕ್ಷಾ ಬಂಧನ್​’ ಸಿನಿಮಾ ಹಾಗೂ ಆಮಿರ್ ಖಾನ್​ (Aamir Khan) ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಗಳು ಆಗಸ್ಟ್​ 11ರಂದು ಬಿಡುಗಡೆ ಆದವು. ಸ್ಟಾರ್​ ಸಿನಿಮಾಗಳಿಗೆ ಮೊದಲ ದಿನ ಭರ್ಜರಿ ಓಪನಿಂಗ್​ ಸಿಗಲಿ ಎಂಬ ಹಂಬಲ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಾಲಿವುಡ್​ ಸಿನಿಮಾಗಳು ಆ ನಿರೀಕ್ಷೆಯ ಮಟ್ಟ ತಲುಪಲು ವಿಫಲ ಆಗುತ್ತಿವೆ. ‘ರಕ್ಷಾ ಬಂಧನ್​’ ಚಿತ್ರ ಕೇವಲ 8.20 ಕೋಟಿ ರೂಪಾಯಿ ಗಳಿಸಿದೆ. ಅದರ ಎದುರು ಬಿಡುಗಡೆ ಆಗಿರುವ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ 12 ಕೋಟಿ ರೂಪಾಯಿ ಕಲೆಕ್ಷನ್​ (Box Office Collection) ಮಾಡಿದೆ.

ಆಮಿರ್​ ಖಾನ್​ ಅವರ ಸಿನಿಮಾಗಳಿಗೆ ಬಹಿಷ್ಕಾರದ ಬಿಸಿ ತಟ್ಟುತ್ತಿದೆ. ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರವನ್ನೂ ಬಹಿಷ್ಕಾರ ಮಾಡಬೇಕು ಎಂದು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಈ ಚಿತ್ರವನ್ನು ಮೊದಲ ದಿನವೇ ನೋಡಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಚಿತ್ರಕ್ಕಿಂತಲೂ ‘ಲಾಲ್​ ಸಿಂಗ್​ ಚಡ್ಡಾ’ ಹೆಚ್ಚು ಕಲೆಕ್ಷನ್​ ಮಾಡಿರುವುದು ವಿಶೇಷ. ಮುಂದಿನ ದಿನಗಳಲ್ಲಿ ಈ ಎರಡು ಚಿತ್ರಗಳಲ್ಲಿ ಯಾವುದಕ್ಕೆ ಹೆಚ್ಚು ಆದಾಯ ಹರಿದುಬರಲಿದೆ ಎಂಬ ಕೌತುಕ ಮೂಡಿದೆ.

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾಗೆ ಉತ್ತಮ ವಿಮರ್ಶೆ ಸಿಕ್ಕಿಲ್ಲ. ಹಾಗಾಗಿ ಅನೇಕ ಕಡೆಗಳಲ್ಲಿ ಶೋ ಸಂಖ್ಯೆ ಕಡಿಮೆ ಮಾಡಲಾಗುತ್ತಿದೆ ಎಂದು ಮಾಹಿತಿ ಕೇಳಿಬಂದಿದೆ. ಇದರ ಪರಿಣಾಮವಾಗಿ ವೀಕೆಂಡ್​ನಲ್ಲಿ ಈ ಚಿತ್ರದ ಕಲೆಕ್ಷನ್​ ಗಣನೀಯವಾಗಿ ಕುಸಿದರೂ ಅಚ್ಚರಿ ಏನಿಲ್ಲ. ‘ರಕ್ಷಾ ಬಂಧನ್​’ ಚಿತ್ರಕ್ಕೆ ಫ್ಯಾಮಿಲಿ ಪ್ರೇಕ್ಷಕರನ್ನು ಸೆಳೆಯುವ ಗುಣ ಇದೆ. ಹಾಗಾಗಿ ಈ ಚಿತ್ರ ನಿಧಾನವಾಗಿ ಉತ್ತಮ ಕಲೆಕ್ಷನ್​ ಮಾಡಲಿದೆ ಎಂದು ಅಂದಾಜಿಸಲಾಗುತ್ತಿದೆ.

ಇದನ್ನೂ ಓದಿ
Image
Aamir Khan: ದೇಶದ ಜನರ ಕ್ಷಮೆ ಕೇಳಿದ ಆಮಿರ್ ಖಾನ್​; ‘ಲಾಲ್​ ಸಿಂಗ್ ಚಡ್ಡಾ’ ರಿಲೀಸ್​ ವೇಳೆ ಹೊಸ ಹೇಳಿಕೆ
Image
Ek Villain Returns: ಕಷ್ಟದಲ್ಲಿದೆ ‘ಏಕ್​ ವಿಲನ್​ ರಿಟರ್ನ್ಸ್​’ ಭವಿಷ್ಯ; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಆಗಿಲ್ಲ ಮ್ಯಾಜಿಕ್​
Image
Aamir Khan: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಹಿಷ್ಕಾರಕ್ಕೆ ನೆಟ್ಟಿಗರ ಒತ್ತಾಯ; ಆಮಿರ್​ ಖಾನ್​ ಮಾಡಿದ ತಪ್ಪೇನು?
Image
‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್​ ನಟಿಸಿದ್ದಾರೆ. ಟಾಲಿವುಡ್​ ನಟ ನಾಗ ಚೈತನ್ಯ ಅವರು ಒಂದು ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದು ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​. ಅದ್ವೈತ್​ ಚಂದನ್​ ಅವರು ನಿರ್ದೇಶನ ಮಾಡಿದ್ದಾರೆ.

‘ಬಚ್ಚನ್​ ಪಾಂಡೆ’, ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಗಳ ಸೋಲಿನಿಂದ ಕಂಗೆಟ್ಟಿರುವ ಅಕ್ಷಯ್​ ಕುಮಾರ್​ ಅವರು ‘ರಕ್ಷಾ ಬಂಧನ್​’ ಚಿತ್ರದ ಮೂಲಕ ಗೆಲ್ಲಬೇಕು ಎಂಬ ಆಶಯ ಅವರ ಅಭಿಮಾನಿಗಳದ್ದು. ನಿರೀಕ್ಷೆಯಂತೆ ವೀಕೆಂಡ್​ನಲ್ಲಿ ಈ ಚಿತ್ರದ ಕಲೆಕ್ಷನ್​ ಹೆಚ್ಚಿದರೆ ಅಕ್ಷಯ್​ ಕುಮಾರ್​ಗೆ ಯಶಸ್ಸು ಸಿಗುತ್ತದೆ. ಈ ಚಿತ್ರದಲ್ಲಿ ಭೂಮಿ ಪೆಡ್ನೇಕರ್​ ಅವರು ನಾಯಕಿಯಾಗಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:27 pm, Fri, 12 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ