AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ

Ram Setu: ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರಮಂದಿರದಲ್ಲೇ ‘ರಾಮ್​ ಸೇತು’ ಸಿನಿಮಾ ಬಿಡುಗಡೆ ಆಗಲಿದೆ. ಯಾವುದೇ ಕಾರಣಕ್ಕೂ ಒಟಿಟಿಯಲ್ಲಿ ನೇರವಾಗಿ ರಿಲೀಸ್​ ಮಾಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ
ಅಕ್ಷಯ್ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on:Jun 18, 2022 | 4:03 PM

Share

ನಟ ಅಕ್ಷಯ್​ ಕುಮಾರ್ (Akshay Kumar)​ ಅವರಿಗೆ ಇತ್ತೀಚಿಗೆ ನಿರೀಕ್ಷಿತ ಮಟ್ಟದ ಗೆಲುವು ಸಿಗುತ್ತಿಲ್ಲ. ‘ಬಚ್ಚನ್​ ಪಾಂಡೆ’ ಸಿನಿಮಾ ಹೇಳ ಹೆಸರಿಲ್ಲದಂತೆ ಸೋತಿತು. ಬಹಳ ನಿರೀಕ್ಷೆ ಮೂಡಿಸಿದ್ದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಕೂಡ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಅಮಿತ್​ ಶಾ, ಯೋಗಿ ಆದಿತ್ಯನಾಥ್​ ಮುಂತಾದವರು ಬೆಂಬಲ ನೀಡಿದರೂ ಕೂಡ ಆ ಸಿನಿಮಾ ಗೆಲ್ಲಲಿಲ್ಲ. ಆ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಅಭಿಮಾನಿಗಳಿಗೆ ಭಾರಿ ಬೇಸರ ಇದೆ. ಹಾಗಂತ ಹಳೇ ಸೋಲನ್ನೇ ನೆನಪಿಸಿಕೊಂಡು, ಕೊರಗುತ್ತಾ ಕೂರಲು ಸಾಧ್ಯವಿಲ್ಲ. ಅವರ ಮುಂದಿನ ಸಿನಿಮಾ ಬಗ್ಗೆ ಗಮನ ಹರಿಸಬೇಕಿದೆ. ಅಕ್ಷಯ್​ ಕುಮಾರ್​ ನಟಿಸಿರುವ ‘ರಾಮ್​ ಸೇತು’ (Ram Setu) ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರ ಒಟಿಟಿಯಲ್ಲಿ (OTT) ರಿಲೀಸ್​ ಆಗಲಿದೆ ಎಂದು ಗಾಸಿಪ್​ ಹಬ್ಬಿಸಲಾಗಿತ್ತು. ಆದರೆ ಅದನ್ನು ನಿರ್ಮಾಪಕರು ಅಲ್ಲಗಳೆದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಿರುವುದರಿಂದ ಈ ರೀತಿಯ ಗಾಸಿಪ್​ ಹಬ್ಬಿತ್ತು. ಚಿತ್ರಮಂದಿರದಲ್ಲಿ ಒಳ್ಳೆಯ ಕಲೆಕ್ಷನ್​ ಆಗದಿದ್ದರೆ ನಿರ್ಮಾಪಕರಿಗೆ ನಷ್ಟ ಆಗುತ್ತದೆ. ಹಾಗಾಗಿ ಅವರು ನೇರವಾಗಿ ಒಟಿಟಿ ರಿಲೀಸ್​ಗೆ ಆಲೋಚಿಸುತ್ತಿದ್ದಾರೆ ಎಂದೆಲ್ಲ ಗಾಳಿ ಸುದ್ದಿ ಹರಡಿಸಲಾಗಿತ್ತು. ಆದರೆ ಆ ಸುದ್ದಿಯನ್ನು ನಿರ್ಮಾಪಕರು ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರಮಂದಿರದಲ್ಲೇ ‘ರಾಮ್​ ಸೇತು’ ಸಿನಿಮಾ ಬಿಡುಗಡೆ ಆಗಲಿದೆ. ಯಾವುದೇ ಕಾರಣಕ್ಕೂ ಒಟಿಟಿಯಲ್ಲಿ ನೇರವಾಗಿ ರಿಲೀಸ್​ ಮಾಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ಈ ಸುದ್ದಿ ಕೇಳಿ ಅಕ್ಷಯ್​ ಕುಮಾರ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ತಮ್ಮ ನೆಚ್ಚಿನ ನಟನ ಸಿನಿಮಾವನ್ನು ಥಿಯೇಟರ್​ನಲ್ಲೇ ನೋಡಿ ಎಂಜಾಯ್​ ಮಾಡಲು ಅಭಿಮಾನಿಗಳು ಬಯಸುತ್ತಾರೆ. ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಮಾಡುವುದಿಲ್ಲ ಎಂದು ನಿ​ರ್ಮಾಪಕರು ಹೇಳಿರುವುದು ಅಕ್ಕಿ ಫ್ಯಾನ್ಸ್​ಗೆ ಸಂತಸ ತಂದಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ರಕ್ಷಾ ಬಂಧನ್​’ ಚಿತ್ರ ಕೂಡ ಬಿಡುಗಡೆಗೆ ರೆಡಿ ಇದೆ. ಆಗಸ್ಟ್​ 11ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅದೇ ಸಮಯಕ್ಕೆ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ ಕೂಡ ಬಿಡುಗಡೆ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:03 pm, Sat, 18 June 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ