AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfiee Total Collection: ‘ಸೆಲ್ಫೀ’ ಚಿತ್ರ ಫ್ಲಾಪ್​: 8 ದಿನ ಪ್ರದರ್ಶನ ಕಂಡ ಅಕ್ಷಯ್​ ಕುಮಾರ್​ ಸಿನಿಮಾ ಗಳಿಸಿದ್ದೆಷ್ಟು?

Akshay Kumar | Selfiee Movie: ಅಕ್ಷಯ್​ ಕುಮಾರ್​ ಅವರ ವೃತ್ತಿಜೀವನದ ಬಹು ದೊಡ್ಡ ಫ್ಲಾಪ್​ ಎಂಬ ಕುಖ್ಯಾತಿಗೆ ‘ಸೆಲ್ಫೀ’ ಸಿನಿಮಾ ಒಳಗಾಗಿದೆ. ಇದರಿಂದ ಅವರ ಮಾರ್ಕೆಟ್​ ಕುಸಿಯುವ ಸಾಧ್ಯತೆ ಇದೆ.

Selfiee Total Collection: ‘ಸೆಲ್ಫೀ’ ಚಿತ್ರ ಫ್ಲಾಪ್​: 8 ದಿನ ಪ್ರದರ್ಶನ ಕಂಡ ಅಕ್ಷಯ್​ ಕುಮಾರ್​ ಸಿನಿಮಾ ಗಳಿಸಿದ್ದೆಷ್ಟು?
ಸೆಲ್ಫೀ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Mar 04, 2023 | 7:35 AM

Share

ಒಂದೆಡೆ ನಟ ಶಾರುಖ್​ ಖಾನ್​ ಅವರು ಗೆದ್ದು ಬೀಗುತ್ತಿದ್ದಾರೆ. ಇನ್ನೊಂದೆಡೆ ಅಕ್ಷಯ್​ ಕುಮಾರ್​ (Akshay Kumar) ಅವರ ಸೋತು ಸುಣ್ಣವಾಗಿದ್ದಾರೆ. ಸತತ ಸೋಲಿನ ಸುಳಿಗೆ ಸಿಲುಕಿರುವ ಅವರಿಗೆ 2022ರ ವರ್ಷ ತುಂಬ ನಿರಾಶಾದಾಯಕವಾಗಿತ್ತು. 2023ರಲ್ಲಿ ಗೆಲುವಿಗಾಗಿ ಹಂಬಲಿಸಿದ್ದ ಅವರು ‘ಸೆಲ್ಫೀ’ ಸಿನಿಮಾ (Selfiee Movie) ಮೇಲೆ ಸಖತ್​ ಭರವಸೆ ಇಟ್ಟುಕೊಂಡಿದ್ದರು. ಆದರೆ ಈ ಚಿತ್ರ ಹೀನಾಯವಾಗಿ ಸೋತಿದೆ. ಫೆಬ್ರವರಿ 24ರಂದು ‘ಸೆಲ್ಫೀ’ ತೆರೆಕಂಡಿತು. ಇಮ್ರಾನ್​ ಹಷ್ಮಿ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇಬ್ಬರು ಸ್ಟಾರ್​ ಕಲಾವಿದರು ಇದ್ದರೂ ಕೂಡ ಜನರಿಗೆ ಈ ಚಿತ್ರ ಹಿಡಿಸಿಲ್ಲ. ಸತತ 8 ದಿನ ಪ್ರದರ್ಶನ ಕಂಡ ‘ಸೆಲ್ಫೀ’ ಗಳಿಸಿದ್ದು (Selfiee Total Box Office Collection) ಕೇವಲ 14.25 ಕೋಟಿ ರೂಪಾಯಿ ಮಾತ್ರ.

ಒಂದು ಕಾಲದಲ್ಲಿ ಅಕ್ಷಯ್​ ಕುಮಾರ್​ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಅದೃಷ್ಟ ಕೈ ಕೊಟ್ಟಿದೆ. ಬ್ಯಾಕ್​ ಟು ಬ್ಯಾಕ್​ ಸೋಲು ಅವರ ಬೆನ್ನು ಹತ್ತಿದೆ. ‘ಸೆಲ್ಫೀ’ ಸಿನಿಮಾ ಮೊದಲ ದಿನ ಗಳಿಸಿದ್ದು ಕೇವಲ 2.33 ಕೋಟಿ ರೂಪಾಯಿ ಮಾತ್ರ. ಅಕ್ಷಯ್​ ಕುಮಾರ್​ ಅವರಂತಹ ಸ್ಟಾರ್​ ನಟನ ಚಿತ್ರಕ್ಕೆ ಈ ಕಲೆಕ್ಷನ್​ ಏನೇನೂ ಸಾಲದು. ಎರಡನೇ ದಿನ 3.80 ಕೋಟಿ ರೂಪಾಯಿ ಗಳಿಸುವ ಮೂಲಕ ಕೊಂಚ ಚೇತರಿಕೆ ಕಂಡಿತು. ಆದರೆ ಮೂರನೇ ದಿನ ಹೇಳಿಕೊಳ್ಳುವಂತಹ ಏರಿಕೆ ಆಗಲಿಲ್ಲ.

ಇದನ್ನೂ ಓದಿ: Akshay Kumar: ‘ಸೆಲ್ಫೀ’ ಹೀನಾಯ ಸೋಲು; ‘ಎಲ್ಲ ತಪ್ಪು ನನ್ನದೇ’ ಎಂದು ಹೊಣೆ ಹೊತ್ತುಕೊಂಡ ಅಕ್ಷಯ್​ ಕುಮಾರ್​

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಮೂರನೇ ದಿನ ‘ಸೆಲ್ಫೀ’ ಸಿನಿಮಾ 3.95 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಬಳಿಕ ದಿಢೀರ್​ ಅಂತ ಕಲೆಕ್ಷನ್​ ಕುಸಿಯಿತು. ನಾಲ್ಕನೇ ದಿನ 1.10 ಕೋಟಿ ರೂಪಾಯಿ ಮಾತ್ರ ಸಂಗ್ರಹ ಆಯಿತು. ಹಂಗೂ ಹಿಂಗೂ 8 ದಿನಗಳ ಕಾಲ ಪ್ರದರ್ಶನ ಕಂಡಿರುವ ಈ ಸಿನಿಮಾ ಕೇವಲ 14.25 ಕೋಟಿ ರೂಪಾಯಿ ಗಳಿಸುವಷ್ಟರಲ್ಲಿ ಸುಸ್ತಾಗಿದೆ. ಅಲ್ಲಿಗೆ, ಇದರ ಬಿಸ್ನೆಸ್​ ಬಹುತೇಕ ಅಂತ್ಯವಾದಂತೆ ಆಗಿದೆ.

ಇದನ್ನೂ ಓದಿ: Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ

ಅಕ್ಷಯ್​ ಕುಮಾರ್​ ಅವರ ವೃತ್ತಿಜೀವನದ ಬಹು ದೊಡ್ಡ ಫ್ಲಾಪ್​ ಎಂಬ ಕುಖ್ಯಾತಿಗೆ ‘ಸೆಲ್ಫೀ’ ಸಿನಿಮಾ ಒಳಗಾಗಿದೆ. ಇದರಿಂದ ಅವರ ಮಾರ್ಕೆಟ್​ ಕುಸಿಯುವ ಸಾಧ್ಯತೆ ಇದೆ. ಮುಂಬರುವ ದಿನಗಳಲ್ಲಿ ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ತುಂಬ ಎಚ್ಚರಿಕೆ ವಹಿಸಬೇಕಾಗಿದೆ.

ತುಂಬ ವೇಗವಾಗಿ ಅಕ್ಷಯ್​ ಕುಮಾರ್​ ಅವರು ಸಿನಿಮಾದ ಕೆಲಸಗಳನ್ನು ಮುಗಿಸುತ್ತಾರೆ. ಇದರಿಂದ ಚಿತ್ರದ ಗುಣಮಟ್ಟ ಕುಸಿಯುತ್ತಿದೆ ಎಂಬುದು ಹಲವರ ಅಭಿಪ್ರಾಯ. ಅವರು ರಿಮೇಕ್​ ಮಾಡಬಾರದು ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್