ಅಕ್ಷಯ್​ ಕುಮಾರ್​ ಸಿನಿಮಾದ 14 ಸೆಕೆಂಡ್​ ದೃಶ್ಯ ಬ್ಲರ್​ ಮಾಡಲು ಸೂಚಿಸಿದ ಸೆನ್ಸಾರ್​ ಮಂಡಳಿ

ಏ.10ರಂದು ‘ಬಡೆ ಮಿಯಾ ಚೋಟೆ ಮಿಯಾ’ ಚಿತ್ರ ರಿಲೀಸ್​ ಆಗಲಿದೆ. ಈದ್​ ಹಬ್ಬದ ರಜೆಯ ಲಾಭ ಪಡೆಯಲು ಅಕ್ಷಯ್​ ಕುಮಾರ್ ಹಾಗೂ ಟೈಗರ್​ ಶ್ರಾಫ್​ ತಯಾರಾಗಿದ್ದಾರೆ. ಈ ಸಿನಿಮಾಗೆ ಮೊದಲ ದಿನ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈಗಾಗಲೇ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ.

ಅಕ್ಷಯ್​ ಕುಮಾರ್​ ಸಿನಿಮಾದ 14 ಸೆಕೆಂಡ್​ ದೃಶ್ಯ ಬ್ಲರ್​ ಮಾಡಲು ಸೂಚಿಸಿದ ಸೆನ್ಸಾರ್​ ಮಂಡಳಿ
ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​
Follow us
ಮದನ್​ ಕುಮಾರ್​
|

Updated on: Apr 04, 2024 | 4:06 PM

ಬಾಲಿವುಡ್​ನ ಆ್ಯಕ್ಷನ್​ ಹೀರೋಗಳಾದ ಅಕ್ಷಯ್​ ಕುಮಾರ್​ (Akshay Kumar) ಮತ್ತು ಟೈಗರ್​ ಶ್ರಾಫ್​ ಅವರು ಜೊತೆಯಾಗಿ ನಟಿಸಿರುವ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಈಗ ಸೆನ್ಸಾರ್​ ಪ್ರಕ್ರಿಯೆ ಕೂಡ ಮುಗಿದಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಿದ್ದಾರೆ. ‘ಬಡೆ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇರಲಿವೆ. ಒಟ್ಟಾರೆ ಸಿನಿಮಾದಲ್ಲಿ ಬರುವ 14 ಸೆಕೆಂಡ್​ನ ದೃಶ್ಯವನ್ನು ಬ್ಲರ್​ ಮಾಡುವಂತೆ ಸೆನ್ಸಾರ್​ ಮಂಡಳಿ (Censor Board) ಸದಸ್ಯರು ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ.

ಏಪ್ರಿಲ್ 10ರಂದು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆ ಆಗಲಿದೆ. ಈದ್​ ಹಬ್ಬದ ರಜೆಯ ಲಾಭ ಪಡೆಯಲು ಅಕ್ಷಯ್​ ಕುಮಾರ್ ಮತ್ತು ಟೈಗರ್​ ಶ್ರಾಫ್​ ತಯಾರಾಗಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಅಲಿ ಅಬ್ಬಾಸ್​ ಜಫರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ.

ಇದನ್ನೂ ಓದಿ: ಕೌಟುಂಬಿಕ ಚಿತ್ರದಲ್ಲೂ ಕೆಟ್ಟ ಬೈಗುಳ? ‘ಫ್ಯಾಮಿಲಿ ಸ್ಟಾರ್​’ಗೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ

ಸೆನ್ಸಾರ್​ ಮಂಡಳಿ ಸೂಚಿಸಿದ ಕಡೆ ಕತ್ತರಿ ಹಾಕಿದ ಬಳಿಕ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಒಟ್ಟು ಅವಧಿ 2 ಗಂಟೆ 44 ನಿಮಿಷ ಆಗಿದೆ. ಸೆನ್ಸಾರ್ ಅಧಿಕಾರಿಗಳ ಸೂಚನೆ ಮೇರೆಗೆ ಸಿನಿಮಾದಲ್ಲಿ ಬರುವ ಕೆಲವು ಬ್ರ್ಯಾಂಡ್​ ಹೆಸರುಗಳನ್ನು ಬದಲಾಯಿಸಲಾಗಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಅಕ್ಷಯ್​ ಕುಮಾರ್​ ಅವರಿಗೆ ಈ ಚಿತ್ರದಿಂದ ಗೆಲ್ಲಬೇಕಾದ ಅನಿವಾರ್ಯತೆ ಇದೆ.

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ವಿಲನ್​ ಆಗಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ನಟಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ, ವಿವಿಧ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಸೈನ್ಸ್​ ಫಿಕ್ಷನ್​ ಅಂಶಗಳು ಕೂಡ ಈ ಚಿತ್ರದ ಕಥೆಯಲ್ಲಿ ಇರಲಿವೆ. ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್​ ಮೊದಲಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ