Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು

Akshay Kumar Troll: ಅಕ್ಷಯ್​ ಕುಮಾರ್​ ಏನೇ ಮಾಡಿದರೂ ನೆಟ್ಟಿಗರು ವಿಮಲ್​ ಜಾಹೀರಾತನ್ನು ನೆನಪಿಸಿಕೊಳ್ಳುತ್ತಾರೆ. ಆ ಮೂಲಕ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಾರೆ.

Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು
ಅಕ್ಷಯ್ ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 20, 2022 | 8:08 AM

ಖ್ಯಾತ ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ 54 ವರ್ಷ ವಯಸ್ಸು. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಫಿಟ್ನೆಸ್​ ಬಗ್ಗೆ ಅವರಿಗೆ ಹೆಚ್ಚು ಕಾಳಜಿ ಇದೆ. ಪ್ರತಿ ದಿನ ಮುಂಜಾನೆ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಶಿಸ್ತಿನ ಜೀವನಕ್ಕೆ ಅವರು ಹೆಸರಾಗಿದ್ದಾರೆ. ಇತ್ತೀಚೆಗೆ ಅವರು ಮುಂಬೈ ಪೊಲೀಸರ ಜೊತೆ ಸೇರಿ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಬೆಳ್ಳಂಬೆಳಗ್ಗೆ ರನ್ನಿಂಗ್​ ಮಾಡಿದರು. ಸೈಕ್ಲಿಂಗ್​ ಮಾಡಿಯೂ ಗಮನ ಸೆಳೆದರು. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಕ್ಷಯ್​ ಕುಮಾರ್​ ಅವರ ಫಿಟ್ನೆಸ್ (Fitness)​ ಕಂಡು ಅನೇಕ ಅಭಿಮಾನಿಗಳು ಭೇಷ್​ ಎಂದಿದ್ದಾರೆ. ಅದರ ಜೊತೆಗೆ ಒಂದಷ್ಟು ಮಂದಿ ಟ್ರೋಲ್​ ಮಾಡಿದ್ದಾರೆ ಕೂಡ. ಹೌದು, ವಿಮಲ್​ ಜಾಹೀರಾತಿನಲ್ಲಿ ಕಾಣಿಸಿಕೊಂಡ ಕಾರಣಕ್ಕಾಗಿ ಅಕ್ಷಯ್​ ಕುಮಾರ್​​ ಅವರ ಬಗ್ಗೆ ವ್ಯಂಗ್ಯ ಮಾಡಲಾಗಿದೆ. ‘ಗುಟ್ಕಾ (Gutka) ತಿಂದರೂ ಇಷ್ಟೊಂದು ಫಿಟ್​ ಆಗಿದ್ದಾರೆ’ ಎಂಬ ಕಮೆಂಟ್​ಗಳು ಬಂದಿವೆ.

ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಸೆಲೆಬ್ರಿಟಿಗಳು ಹೆಚ್ಚು ಎಚ್ಚರಿಕೆ ವಹಿಸಬೇಕು. ಈಗಾಗಲೇ ಶಾರುಖ್​ ಖಾನ್​ ಮತ್ತು ಅಜಯ್​ ದೇವಗನ್​ ಅವರು ವಿಮಲ್​ ಜಾಹೀರಾತಿನಲ್ಲಿ ನಟಿಸಿ ಟೀಕೆಗೆ ಗುರಿ ಆಗಿದ್ದಾರೆ. ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುವಂತಹ ಅಕ್ಷಯ್​ ಕುಮಾರ್ ಅವರು ಕೂಡ ಈ ಜಾಹೀರಾತಿನಲ್ಲಿ ನಟಿಸಿದ್ದು ಅನೇಕರಿಗೆ ಸಹಿಸಲು ಸಾಧ್ಯವಾಗಿಲ್ಲ. ಹಾಗಾಗಿ ಪ್ರತಿ ಬಾರಿಯೂ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

ಇದನ್ನೂ ಓದಿ: Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

ಇನ್ಮುಂದೆ ಇಂಥ ಜಾಹೀರಾತುಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಅಕ್ಷಯ್​ ಕುಮಾರ್​ ಈಗಾಗಲೇ ಭರವಸೆ ನೀಡಿದ್ದಾರೆ. ಹಾಗಿದ್ದರೂ ಕೂಡ ಅವರಿಗೆ ಟ್ರೋಲ್​ ಕಾಟ ತಪ್ಪುತ್ತಿಲ್ಲ. ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಅಕ್ಷಯ್​ ಕುಮಾರ್​ ಅವರಿಗೆ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಗುತ್ತಿಲ್ಲ. ಅವರು ನಟಿಸಿದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡಿಲ್ಲ. ಅದಕ್ಕೂ ಮುನ್ನ ತೆರೆಕಂಡಿದ್ದ ‘ಬಚ್ಚನ್​ ಪಾಂಡೆ’ ಸಿನಿಮಾ ಕೂಡ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಿಲ್ಲ.

ಇದನ್ನೂ ಓದಿ: ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ನಟಿಸುತ್ತಿದ್ದಾರೆ. ಆಗಸ್ಟ್​ 11ರಂದು ‘ರಕ್ಷಾ ಬಂಧನ್​’ ಚಿತ್ರ ತೆರೆ ಕಾಣಲಿದೆ. ಆ ಬಳಿಕ ‘ರಾಮ್​ ಸೇತು’ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:08 am, Mon, 20 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ