AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬದ ಮದುವೆಗೆ ಮೊದಲ ಬಾರಿಗೆ ತಮ್ಮ ನಿಯಮ ಮುರಿದ ಅಕ್ಷಯ್ ಕುಮಾರ್

ಅಕ್ಷಯ್‌ಗೆ ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳುವ ಅಭ್ಯಾಸವಿದೆ. ಎಷ್ಟೇ ಬಿಗ್ ಬಜೆಟ್ ಸಿನಿಮಾ ಆದರೂ ಯಾವುದೇ ಸಂದರ್ಭಗಳಲ್ಲಿ ಅವರು ಈ ದಿನಚರಿಯನ್ನು ಬದಲಾಯಿಸುವುದಿಲ್ಲ. ಆದರೆ ಅಂಬಾನಿ ಮನೆಯ ಕಾರ್ಯಕ್ರಮದಲ್ಲಿ ಅವರು ಬೆಳಗಿನ ಜಾವ 3 ಗಂಟೆಯವರೆಗೂ ಜಾಗರಣೆ ಮಾಡಬೇಕಾಯಿತು.

ಅಂಬಾನಿ ಕುಟುಂಬದ ಮದುವೆಗೆ ಮೊದಲ ಬಾರಿಗೆ ತಮ್ಮ ನಿಯಮ ಮುರಿದ ಅಕ್ಷಯ್ ಕುಮಾರ್
ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Mar 08, 2024 | 1:17 PM

Share

ನಟ ಅಕ್ಷಯ್ ಕುಮಾರ್ (Akshay Kumar) ತಮ್ಮ ಫಿಟ್ನೆಸ್‌ ಮೂಲಕ ಹೆಸರು ಮಾಡಿದ್ದಾರೆ. ಅಕ್ಷಯ್ ತಮ್ಮದೇ ಆದ ದಿನಚರಿ ನಿಗದಿಪಡಿಸಿಕೊಂಡಿದ್ದಾರೆ. ಅದನ್ನು ಅವರು ನಿಖರವಾಗಿ ಅನುಸರಿಸುತ್ತಾರೆ. ಶೂಟಿಂಗ್ ಸಮಯದಲ್ಲಿಯೂ ಅವರು ಊಟ ಮಾಡಲು ಹಾಗೂ ನಿದ್ರಿಸಲು ಸಮಯ ನಿಗದಿಪಡಿಸಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡುವ ನಿರ್ದೇಶಕರು, ನಿರ್ಮಾಪಕರಿಗೆ ಇದು ಗೊತ್ತಿದೆ. ಅವರ ಟೈಮಿಂಗ್ಸ್​ಗೆ ತಕ್ಕಂತೆ ಶೂಟಿಂಗ್ ಶೆಡ್ಯೂಲ್ ಮಾಡುತ್ತಾರೆ. ಆದರೆ ಮುಖೇಶ್ ಅಂಬಾನಿ ಅವರ ಕಾರ್ಯಕ್ರಮಕ್ಕಾಗಿ ಅಕ್ಷಯ್ ಕುಮಾರ್ ಈ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದರು. ಮುಖೇಶ್ ಮತ್ತು ನೀತಾ ಅಂಬಾನಿ ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆಯ ಪೂರ್ವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಿದ್ದಾರೆ. ಈ ಸಮಾರಂಭದಲ್ಲಿ ಬಾಲಿವುಡ್‌ನ ಹಲವು ಗಣ್ಯರು ಭಾಗವಹಿಸಿದ್ದರು. ಅಂಬಾನಿ ಅವರ ಕಾರ್ಯಕ್ರಮದಲ್ಲಿ ಅಕ್ಷಯ್ ಡ್ಯಾನ್ಸ್ ಮಾಡಿದ್ದಾರೆ. ಅದೂ ಮುಂಜಾನೆ 3 ಗಂಟೆಗೆ.

ಗುಜರಾತ್​ನ ಜಾಮ್‌ನಗರದಲ್ಲಿ ನಡೆದ ಈ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅಂಬಾನಿ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಈವೆಂಟ್ ಮೂರು ದಿನಗಳ ಕಾಲ ನಡೆದಿದೆ. ಒಂದು ದಿನ ಕಾರ್ಯಕ್ರಮವನ್ನು ಮಧ್ಯರಾತ್ರಿ 3ರವರೆಗೆ ವಿಸ್ತರಿಸಲಾಗಿತ್ತು. ಅಕ್ಷಯ್‌ಗೆ ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳುವ ಅಭ್ಯಾಸವಿದೆ. ಎಷ್ಟೇ ಬಿಗ್ ಬಜೆಟ್ ಸಿನಿಮಾ ಆದರೂ ಯಾವುದೇ ಸಂದರ್ಭಗಳಲ್ಲಿ ಅವರು ಈ ದಿನಚರಿಯನ್ನು ಬದಲಾಯಿಸುವುದಿಲ್ಲ. ಆದರೆ ಅಂಬಾನಿ ಮನೆಯ ಕಾರ್ಯಕ್ರಮದಲ್ಲಿ ಅವರು ಬೆಳಗಿನ ಜಾವ 3 ಗಂಟೆಯವರೆಗೂ ಜಾಗರಣೆ ಮಾಡಬೇಕಾಯಿತು.

ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ‘ನನ್ನ ಕಾರ್ಯಕ್ರಮ ಮುಂಜಾನೆ 3 ಗಂಟೆಗೆ ಇತ್ತು. ಇಡೀ ಕಾರ್ಯಕ್ರಮವು ತುಂಬಾ ಅದ್ದೂರಿಯಾಗಿತ್ತು. ಅದರ ಹೊರತಾಗಿ ಅಂಬಾನಿ ಕುಟುಂಬವು ತುಂಬಾ ಪ್ರೀತಿ ಮತ್ತು ಕಾಳಜಿಯನ್ನು ಹೊಂದಿತ್ತು. ಆ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗುವಂತೆ ನೋಡಿಕೊಂಡಿದ್ದರು. ಅನಂತ್ ಮತ್ತು ರಾಧಿಕಾ ತುಂಬಾ ಸತ್ಕಾರ ಮಾಡಿದರು. ಅವರಿಬ್ಬರಿಗೂ ಮಹಾಕಾಳನಿಂದ ಆಶೀರ್ವಾದ ಸಿಗಲಿ’ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.

ಅಕ್ಷಯ್ ಸಂಜೆಯೇ ಆಹಾರ ಸೇವನೆ ಮಾಡುತ್ತಾರೆ. ರಾತ್ರಿ ಅವರು ಊಟ ಮಾಡುವುದಿಲ್ಲ. 9 ಗಂಟೆಗೆ ಮಲಗುವ ಅವರು ಬೆಳಿಗ್ಗೆ 4 ಗಂಟೆಗೆ ಎದ್ದೇಳುತ್ತಾರೆ. ಈ ಕಾರಣಕ್ಕೆ ಅವರು ಯಾವುದೇ ಪಾರ್ಟಿಗಳಲ್ಲಿ ಭಾಗಿ ಆಗುವುದಿಲ್ಲ. ಸಂದರ್ಶನವೊಂದರಲ್ಲಿ ದಿನಚರಿ ಬಗ್ಗೆ ಹೇಳಿಕೊಂಡಿದ್ದರು. ‘ನನ್ನ ದಿನವು ಬೆಳಿಗ್ಗೆ 4 ಅಥವಾ 4:30ಕ್ಕೆ ಪ್ರಾರಂಭವಾಗುತ್ತದೆ. ನಾನು ರಾತ್ರಿ 9ಕ್ಕೆ ಮಲಗುತ್ತೇನೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಅಂಬಾನಿ ಪ್ರೀ ವೆಡ್ಡಿಂಗ್​ಗೆ ಕರಣ್ ಜೋಹರ್ ಗೈರಾಗಿದ್ದೇಕೆ? ಇಲ್ಲಿದೆ ಕಾರಣ

ಅಂಬಾನಿ ಕಾರ್ಯಕ್ರಮದಲ್ಲಿ ಅಕ್ಷಯ್ ಮಾತ್ರವಲ್ಲ, ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಕೂಡ ಡ್ಯಾನ್ಸ್ ಮಾಡಿದ್ದಾರೆ. ಈ ಸಮಯದಲ್ಲಿ ಸೌತ್ ಸೂಪರ್ ಸ್ಟಾರ್ ರಾಮ್ ಚರಣ್ ಕೂಡ ವೇದಿಕೆ ಮೇಲೆ ಬಂದು ಮೂವರು ಖಾನ್​ಗಳ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳು ಮಾತ್ರವಲ್ಲದೆ ವಿದೇಶಿ ಸೆಲೆಬ್ರಿಟಿಗಳೂ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಪ್ರಸಿದ್ಧ ಪಾಪ್ ಗಾಯಕಿ ರಿಯಾನಾ ಹಾಗೂ ಪಾಪ್ ಗಾಯಕ ಏಕಾನ್ ಆಗಮಿಸಿ ಶೋ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:13 pm, Fri, 8 March 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ