AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲುಗಳ ನಂತರ ಅಕ್ಷಯ್ ಕುಮಾರ್‌ಗೆ ಬಿಗ್ ರಿಲೀಫ್; ಬಾಕ್ಸ್ ಆಫೀಸ್‌ನಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಅಬ್ಬರ

ಕಳೆದ ಕೆಲವು ವರ್ಷಗಳಿಂದ ನಿರಂತರ ಸೋಲುಗಳಿಂದ ಕಂಗೆಟ್ಟಿದ್ದ ನಟ ಅಕ್ಷಯ್ ಕುಮಾರ್‌ಗೆ 'ವೆಲ್ಕಮ್ ಟು ದಿ ಜಂಗಲ್' ದೊಡ್ಡ ಗೆಲುವು ತಂದುಕೊಟ್ಟಿದೆ. ಮೊದಲ ದಿನವೇ 29 ಕೋಟಿ ರೂಪಾಯಿ ವಿಶ್ವಾದ್ಯಂತ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. ಮಲ್ಟಿಸ್ಟಾರರ್ ತಾರಾಗಣದ ಈ ಸಿನಿಮಾ ಅಕ್ಷಯ್‌ರನ್ನು ಮತ್ತೆ ಸಕ್ಸಸ್ ಟ್ರ್ಯಾಕ್‌ಗೆ ಮರಳಿಸಿದೆ ಎನ್ನಲಾಗುತ್ತಿದೆ.

ಸತತ ಸೋಲುಗಳ ನಂತರ ಅಕ್ಷಯ್ ಕುಮಾರ್‌ಗೆ ಬಿಗ್ ರಿಲೀಫ್; ಬಾಕ್ಸ್ ಆಫೀಸ್‌ನಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಅಬ್ಬರ
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Jun 27, 2026 | 11:05 AM

Share

ಮುಖ್ಯಾಂಶಗಳು

  • ಬಾಲಿವುಡ್​ ಗೆಲುವಿನ ಓಟದಲ್ಲಿ ಅಕ್ಷಯ್ ಕುಮಾರ್ ಕಂಬ್ಯಾಕ್
  • ಅಕ್ಷಯ್ ನಟನೆಯ 'ವೆಲ್ಕಮ್ ಟು ದಿ ಜಂಗಲ್' ಯಶಸ್ಸಿನ ಹಾದಿ
  • ಮೊದಲ ದಿನವೇ ‘ವೆಲ್ಕಮ್ 3' ಭರ್ಜರಿ ಕಲೆಕ್ಷನ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಳೆದ ಕೆಲವು ವರ್ಷಗಳಿಂದ ಕಂಗಾಲಾಗಿದ್ದರು. ಅವರು ನಟಿಸಿದ ಸಿನಿಮಾಗಳು ಬ್ಯಾಕ್-ಟು-ಬ್ಯಾಕ್ ಬಾಕ್ಸ್ ಆಫೀಸ್‌ನಲ್ಲಿ ಧೂಳೀಪಟವಾಗಿದ್ದವು. ಈ ನಿರಂತರ ಸೋಲುಗಳಿಂದ ಕಂಗೆಟ್ಟಿದ್ದ ಅಕ್ಷಯ್ ಕುಮಾರ್‌ಗೆ ಈಗ ಬಿಡುಗಡೆಯಾಗಿರುವ ‘ವೆಲ್ಕಮ್ ಟು ದಿ ಜಂಗಲ್’ (ವೆಲ್ಕಮ್ 3) ಸಿನಿಮಾ ದೊಡ್ಡ ಮಟ್ಟದ ಗೆಲುವನ್ನು ತಂದುಕೊಟ್ಟಿದೆ. ಈ ಭರ್ಜರಿ ಓಪನಿಂಗ್ ನೋಡಿದರೆ ಅಕ್ಷಯ್ ಕುಮಾರ್ ಕೊನೆಗೂ ಸಕ್ಸಸ್ ಟ್ರ್ಯಾಕ್‌ಗೆ ಮರಳಿದ್ದಾರೆ ಎನ್ನಲಾಗುತ್ತಿದೆ.

ಚಿತ್ರದ ಮೊದಲ ದಿನದ ಕಲೆಕ್ಷನ್ ವಿವರಗಳು ಹೊರಬಿದ್ದಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಈ ಚಿತ್ರ ಬರೋಬ್ಬರಿ 10,892 ಶೋಗಳಿಂದ 15.00 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ 22.50 ಕೋಟಿ ರೂಪಾಯಿ ದಾಟಿದ್ದು, ಒಟ್ಟು ನೆಟ್ ಕಲೆಕ್ಷನ್ ಸದ್ಯಕ್ಕೆ 18.75 ಕೋಟಿ ರೂಪಾಯಿ ಆಗಿದೆ.

ವಿದೇಶದಲ್ಲೂ ‘ವೆಲ್​ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಒಟ್ಟು 6.50 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇವೆಲ್ಲವನ್ನೂ ಸೇರಿಸಿ ‘ವೆಲ್ಕಮ್ ಟು ದಿ ಜಂಗಲ್’ ಚಿತ್ರದ ವಿಶ್ವಾದ್ಯಂತ ಮೊದಲ ದಿನದ ಒಟ್ಟು ಗಳಿಕೆ 29.00 ಕೋಟಿ ರೂಪಾಯಿ ತಲುಪಿದೆ.

ಇದನ್ನೂ ಓದಿ: ಅಜಯ್ ದೇವಗನ್​ಗಿಂತ ಅಕ್ಷಯ್ ಕುಮಾರ್ ಸಂಬಳ ಹೆಚ್ಚು? ಸ್ಪಷ್ಟನೆ ನೀಡಿದ ಚಿತ್ರತಂಡ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರೊಂದಿಗೆ ಬಾಲಿವುಡ್‌ನ ದೊಡ್ಡ ಸ್ಟಾರ್ ದಂಡೇ ನಟಿಸಿದೆ. ಚಿತ್ರದ ಮಲ್ಟಿಸ್ಟಾರರ್ ಪಾತ್ರವರ್ಗವೇ ಸಿನಿಮಾದ ಪ್ರಮುಖ ಆಕರ್ಷಣೆಯಾಗಿದೆ. ಚಿತ್ರದಲ್ಲಿ ಸಂಜಯ್ ದತ್, ಸುನೀಲ್ ಶೆಟ್ಟಿ, ಅರ್ಷದ್ ವಾರ್ಸಿ, ರವೀನಾ ಟಂಡನ್, ಜ್ಯಾಕ್ವೆಲಿನ್ ಫರ್ನಾಂಡಿಸ್ ಮತ್ತು ದಿಶಾ ಪಟಾನಿ ಸೇರಿದಂತೆ ಹಲವು ಪ್ರಮುಖ ನಟರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಿಗೆ ಪಕ್ಕಾ ಕಾಮಿಡಿ ಹಾಗೂ ಎಂಟರ್‌ಟೈನ್‌ಮೆಂಟ್ ಉಣಬಡಿಸುತ್ತಿದ್ದಾರೆ. ಹೀಗಾಗಿ ಈ ಗೆಲುವು ಕೇವಲ ಅಕ್ಷಯ್​ ಕುಮಾರ್ ಅವರದ್ದು ಮಾತ್ರವಲ್ಲ ಎಂಬುದು ಅನೇಕರ ವಾದ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ