ಅಕ್ಷಯ್ ಕುಮಾರ್ ನಟನೆಯ ‘ಓಎಂಜಿ 2’ಗೆ ಸಂಕಷ್ಟ: ಪ್ರಮಾಣ ಪತ್ರ ನೀಡಲು ನಿರಾಕರಣೆ

Akshay Kumar: ನಟ ಅಕ್ಷಯ್ ಕುಮಾರ್ ನಟನೆಯ 'ಓಎಂಜಿ 2' ಸಿನಿಮಾ ಸಂಕಷ್ಟಕ್ಕೆ ಸಿಲುಕಿದೆ. ಸಿಬಿಎಫ್​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿದೆ.

ಅಕ್ಷಯ್ ಕುಮಾರ್ ನಟನೆಯ 'ಓಎಂಜಿ 2'ಗೆ ಸಂಕಷ್ಟ: ಪ್ರಮಾಣ ಪತ್ರ ನೀಡಲು ನಿರಾಕರಣೆ
ಓಎಂಜಿ 2
Follow us
ಮಂಜುನಾಥ ಸಿ.
|

Updated on: Jul 12, 2023 | 10:35 PM

ಸಾಲು-ಸಾಲು ಫ್ಲಾಪ್ ಸಿನಿಮಾಗಳನ್ನು ನೀಡಿ ಗೆಲುವಿಗಾಗಿ ಹಾತೊರೆಯುತ್ತಿರುವ ಅಕ್ಷಯ್ ಕುಮಾರ್​ಗೆ (Akshay Kumar) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕೆಲ ವರ್ಷಗಳ ಹಿಂದೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದ್ದ ತಮ್ಮದೇ ನಟನೆಯ ‘ಓಎಂಜಿ’ ಸಿನಿಮಾದ ಸೀಕ್ವೆಲ್ ‘ಓಎಂಜಿ 2‘ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಸೆನ್ಸಾರ್ (Censor) ಮಂಡಳಿಯವರು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದ್ದು, ಸಿನಿಮಾವನ್ನು ಪರಿಶೀಲನಾ ಸಮಿತಿಗೆ ಕಳುಹಿಸಿದ್ದಾರೆ.

ಓಎಂಜಿ 2 ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಭಗವಂತ ಶಿವನ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಭಕ್ತ ಕಷ್ಟದಲ್ಲಿರುವಾಗ ಆತನ ಸಹಾಯಕ್ಕೆ ಧಾವಿಸುವ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿ ಮೆಚ್ಚುಗೆ ಪಡೆದುಕೊಂಡಿತ್ತು. ಸಿನಿಮಾದ ಬಿಡುಗಡೆಯನ್ನು ಆಗಸ್ಟ್ 11 ರಂದು ಮಾಡುವುದಾಗಿ ಘೋಷಣೆಯೂ ಮಾಡಿ ಆಗಿತ್ತು. ಆದರೆ ಈಗ ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿದೆ ಇದರಿಂದ ಚಿತ್ರತಂಡ ಆತಂಕಕ್ಕೆ ಒಳಗಾಗಿದೆ.

ಈ ಸಿನಿಮಾವು ಲೈಂಗಿಕ ಶಿಕ್ಷಣದ ಕುರಿತಾದ ಕತೆಯನ್ನು ಹೊಂದಿದೆ. ಇದೇ ಕಾರಣಕ್ಕೆ ಈ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಸಿಬಿಎಫ್​ಸಿ ಹಿಂದೇಟು ಹಾಕಿದೆ ಎನ್ನಲಾಗುತ್ತಿದೆ. ಲೈಂಗಿಕ ಶಿಕ್ಷಣದಂಥಹಾ ವಿಷಯದಲ್ಲಿ ಭಗವಂತ ಶಿವ ಪಾತ್ರವನ್ನು ಎಳೆದು ತಂದಿರುವುದರಿಂದ ಸಿಬಿಎಫ್​ಸಿ ಇಕ್ಕಟ್ಟಿಗೆ ಸಿಲುಕಿದೆ. ಸಿನಿಮಾದ ಕೆಲವು ದೃಶ್ಯಗಳು, ಸಂಭಾಷಣೆಗಳು ಲೈಂಗಿಕತೆಗೆ ಸಂಬಂಧಿಸಿದ್ದಾಗಿದ್ದು ಹಾಗಾಗಿಯೇ ಈ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಸಿಬಿಎಫ್​ಸಿ ಯೋಚನೆ ಮಾಡುತ್ತಿದೆ. ಸಿನಿಮಾವನ್ನು ಪರಿಶೀಲನಾ ಸಮಿತಿಗೆ ರವಾನಿಸಲಾಗಿದ್ದು, ಸಮಿತಿಯ ನಿರ್ಣಯದ ಮೇಲೆ ಸಿನಿಮಾದ ಭವಿಷ್ಯ ನಿಂತಿದೆ.

ಇದನ್ನೂ ಓದಿ:ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್; ‘OMG 2’ ರಿಲೀಸ್ ದಿನಾಂಕ ಘೋಷಣೆ ಹಿಂದೆ ದೊಡ್ಡ ಲೆಕ್ಕಾಚಾರ

ಈ ಹಿಂದೆ ಬಿಡುಗಡೆ ಆಗಿದ್ದ ‘ಓಎಂಜಿ’ ಸಿನಿಮಾದಲ್ಲಿ ಭಗವಂತ ಶ್ರೀಕೃಷ್ಣ ಭೂಮಿಗೆ ಬಂದು ದೇವರ ಹೆಸರು ಹೇಳಿಕೊಂಡು ಮೋಸ ಮಾಡುವವರ ವಿರುದ್ಧ ಹೋರಾಡುತ್ತಿರುವ ನಾಸ್ತಿಕನಿಗೆ ಬೆಂಬಲವಾಗಿ ನಿಲ್ಲುವ ಕತೆ ಹೊಂದಿತ್ತು. ಆ ಸಿನಿಮಾ ಸೂಪರ್ ಹಿಟ್ ಆಗಿದ್ದಲ್ಲದೆ ಕನ್ನಡ ಸೇರಿದಂತೆ ಹಲವು ಭಾಷೆಗಳಿಗೆ ರೀಮೇಕ್ ಸಹ ಆಯ್ತು. ಕನ್ನಡದಲ್ಲಿ ಮುರಾರಿ ಹೆಸರಿನಲ್ಲಿ ಸಿನಿಮಾ ರೀಮೇಕ್ ಆಗಿದ್ದು ಉಪೇಂದ್ರ ಹಾಗೂ ಸುದೀಪ್ ಒಟ್ಟಿಗೆ ನಟಿಸಿದ್ದರು.

ಇದೀಗ ಬಿಡುಗಡೆ ಸಜ್ಜಾಗಿರುವ ‘ಓಎಂಜಿ 2’ ಸಿನಿಮಾದಲ್ಲಿ ಪಂಕಜ್ ತ್ರಿಪಾಠಿ ಶಿವ ಭಕ್ತನ ಪಾತ್ರದಲ್ಲಿ ನಟಿಸಿದ್ದು ಆತನ ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕಾಪಾಡುವ ಸಾಕ್ಷಾತ್ ಶಿವನೇ ಬರುವ ಕತೆಯನ್ನು ಒಳಗೊಂಡಿದೆ. ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಸಿನಿಮಾದಲ್ಲಿ ಯಾಮಿ ಗೌತಮ್, ಅರುಣ್ ಗೋವಿಲ್ ಇನ್ನೂ ಹಲವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್