ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?

Laal Singh Chaddha Vs Raksha Bandhan: ಈ ಕ್ಲ್ಯಾಶ್​ ಬಗ್ಗೆ ಅಕ್ಷಯ್​ ಕುಮಾರ್​ ಅವರು ಮೌನ ಮುರಿದಿದ್ದಾರೆ. ಇದನ್ನು ಕ್ಲ್ಯಾಶ್​ ಎಂದು ಕರೆಯಲು ಅವರು ಸಿದ್ಧರಿಲ್ಲ.

ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?
ಅಕ್ಷಯ್ ಕುಮಾರ್, ಆಮಿರ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 22, 2022 | 8:28 AM

ಬಾಲಿವುಡ್​ನ ಬಹುಬೇಡಿಕೆಯ ನಟರಲ್ಲಿ ಅಕ್ಷಯ್​ ಕುಮಾರ್​ (Akshay Kumar) ಮತ್ತು ಆಮಿರ್​ ಖಾನ್​ ಕೂಡ ಮುಂಚೂಣಿಯಲ್ಲಿದ್ದಾರೆ. ಈ ಸ್ಟಾರ್​ ನಟರಿಬ್ಬರು ಈಗ ಬಾಕ್ಸ್​ ಆಫೀಸ್​ನಲ್ಲಿ ಮುಖಾಮುಖಿ ಆಗಲಿದ್ದಾರೆ. ಇಬ್ಬರ ಸಿನಿಮಾಗಳು ಒಂದೇ ದಿನ ರಿಲೀಸ್​ ಆಗುತ್ತಿವೆ. ಹೌದು, ಆಗಸ್ಟ್​ 11ರಂದು ‘ಲಾಲ್​ ಸಿಂಗ್​ ಚಡ್ಡಾ’ ಮತ್ತು ‘ರಕ್ಷಾ ಬಂಧನ್​’ ಚಿತ್ರಗಳು ಬಿಡುಗಡೆ ಆಗುತ್ತಿವೆ. ‘ರಕ್ಷಾ ಬಂಧನ್​’ (Raksha Bandhan) ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ನಟಿಸಿದ್ದರೆ, ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಆಮಿರ್​ ಖಾನ್​ (Aamir Khan) ಅಭಿನಯಿಸಿದ್ದಾರೆ. ಸಿನಿಪ್ರಿಯರಿಗೆ ಎರಡೂ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ. ಆದರೆ ಯಾವ ಚಿತ್ರಕ್ಕೆ ಹೆಚ್ಚು ಕಲೆಕ್ಷನ್​ ಆಗಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ. ಈ ಕ್ಲ್ಯಾಶ್​ ಬಗ್ಗೆ ಸಿನಿಪ್ರಿಯರ ವಲಯದಲ್ಲಿ ಚರ್ಚೆ ಆಗುತ್ತಿದೆ.

ಈ ಎರಡೂ ಸಿನಿಮಾಗಳು ಟ್ರೇಲರ್​ ಮೂಲಕ ಗಮನ ಸೆಳೆದಿವೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್ ನಟಿಸಿದ್ದಾರೆ. ವಿವಿಧ ಗೆಟಪ್​ಗಳಲ್ಲಿ ಆಮಿರ್​ ಖಾನ್​ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಟಾಲಿವುಡ್​ ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಲಾಲ್​ ಸಿಂಗ್​ ಚಡ್ಡಾ’ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

‘ರಕ್ಷಾ ಬಂಧನ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ಪಕ್ಕಾ ಫ್ಯಾಮಿಲಿ ಕಥೆಯನ್ನು ಹೇಳಲಿದ್ದಾರೆ. ನಾಲ್ಕು ತಂಗಿಯರ ಮದುವೆ ಮಾಡಿಸಲು ಕಷ್ಟಪಡುವ ಅಣ್ಣನಾಗಿ ಅಕ್ಷಯ್​ ಕುಮಾರ್​ ನಟಿಸಿದ್ದಾರೆ. ಟ್ರೇಲರ್​ ನೋಡಿ ಅಭಿಮಾನಿಗಳು ಎಮೋಷನಲ್​ ಆಗಿದ್ದಾರೆ. ಕೌಟುಂಬಿಕ ಪ್ರೇಕ್ಷಕರನ್ನು ಈ ಸಿನಿಮಾ ಹೆಚ್ಚಾಗಿ ಸೆಳೆದುಕೊಳ್ಳಲಿದೆ. ಜನರ ಪ್ರತಿಕ್ರಿಯೆಗಾಗಿ ಚಿತ್ರತಂಡ ಕಾದಿದೆ.

ಈ ಕ್ಲ್ಯಾಶ್​ ಬಗ್ಗೆ ಅಕ್ಷಯ್​ ಕುಮಾರ್​ ಅವರು ಮೌನ ಮುರಿದಿದ್ದಾರೆ. ಇದನ್ನು ಕ್ಲ್ಯಾಶ್​ ಎಂದು ಕರೆಯಲು ಅವರು ಸಿದ್ಧರಿಲ್ಲ. ‘ಇದೊಂದು ದೊಡ್ಡ ದಿನ. ಎರಡು ದೊಡ್ಡ ಸಿನಿಮಾಗಳು ಒಟ್ಟಿಗೆ ರಿಲೀಸ್​ ಆಗುತ್ತಿವೆ. ಅದು ಕ್ಲ್ಯಾಶ್ ಅಲ್ಲ. ಕೊವಿಡ್​ನಿಂದಾಗಿ ಅನೇಕ ಸಿನಿಮಾಗಳು ರಿಲೀಸ್​ ಆಗಿಲ್ಲ. ಇನ್ನೂ ಹಲವು ಸಿನಿಮಾಗಳು ರಿಲೀಸ್​ ಡೇಟ್​ಗಾಗಿ ಕಾಯುತ್ತಿವೆ. ಹಾಗಾಗಿ ಒಂದೇ ದಿನಾಂಕದಲ್ಲಿ ಹಲವು ಸಿನಿಮಾಗಳು ಬಿಡುಗಡೆ ಆಗುವುದು ಸಹಜ. ಎರಡೂ ಚಿತ್ರಗಳು ಚೆನ್ನಾಗಿ ಕಲೆಕ್ಷನ್​ ಮಾಡುತ್ತವೆ ಎಂಬ ಭರವಸೆ ನನಗಿದೆ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Wed, 22 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ