‘ಆಲಿಯಾ ಮಗು ನೇರವಾಗಿ ಕರಣ್​ ಜೋಹರ್​ ಕಚೇರಿಗೆ​ ಹೋಗುತ್ತೆ ಅಂದ್ಕೊಂಡಿದ್ವಿ’:​ ಟ್ರೋಲ್​ ಮಾಡಿದ ನೆಟ್ಟಿಗರು

Alia Bhatt | Ranbir Kapoor: ಆಲಿಯಾ ಭಟ್​ ಅವರಿಗೆ ಟ್ರೋಲ್​ ಕಾಟ ಹೊಸದೇನೂ ಅಲ್ಲ. ವೃತ್ತಿಜೀವನದ ಆರಂಭದ ದಿನಗಳಿಂದಲೂ ಅನೇಕ ಕಾರಣಕ್ಕಾಗಿ ಅವರನ್ನು ಟ್ರೋಲ್​ ಮಾಡುತ್ತಾ ಬರಲಾಗಿದೆ.

‘ಆಲಿಯಾ ಮಗು ನೇರವಾಗಿ ಕರಣ್​ ಜೋಹರ್​ ಕಚೇರಿಗೆ​ ಹೋಗುತ್ತೆ ಅಂದ್ಕೊಂಡಿದ್ವಿ’:​ ಟ್ರೋಲ್​ ಮಾಡಿದ ನೆಟ್ಟಿಗರು
ಕರಣ್​ ಜೋಹರ್​, ರಣಬೀರ್ ಕಪೂರ್, ಆಲಿಯಾ ಭಟ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 11, 2022 | 3:46 PM

ಆಲಿಯಾ ಭಟ್​ ಮತ್ತು ರಣಬೀರ್ ಕಪೂರ್​ (Ranbir Kapoor) ಜೀವನದಲ್ಲಿ ಸಂತಸ ಮನೆ ಮಾಡಿದೆ. ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಈ ದಂಪತಿಗೆ ಹೆಣ್ಣು ಮಗು ಜನಿಸಿದೆ. ನವೆಂಬರ್​ 6ರಂದು ಆಲಿಯಾ ಭಟ್​ (Alia Bhatt) ಅವರು ಮುದ್ದಾದ ಮಗುವಿಗೆ ಜನ್ಮ ನೀಡಿದರು. ಈಗ ಆಸ್ಪತ್ರೆಯಿಂದ ಮಗುವನ್ನು (Alia Bhat Baby) ಮನೆಗೆ ಕರೆದುಕೊಂಡು ಬರಲಾಗಿದೆ. ಕಪೂರ್​ ಕುಟುಂಬಕ್ಕೆ ಇದು ಸಂತಸದ ಸುದ್ದಿ. ಆದರೆ ಬೇರೊಂದು ಕಾರಣಕ್ಕಾಗಿ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಮಗುವನ್ನು ಮನೆಗೆ ಕರೆದುಕೊಂಡು ಬಂದಿದ್ದರ ಬಗ್ಗೆ ಸುದ್ದಿ ಹಂಚಿಕೊಂಡ ನ್ಯೂಸ್​ ಏಜೆನ್ಸಿ ಕುರಿತು ನೆಟ್ಟಿಗರು ಹಾಸ್ಯ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಏನು? ಇಲ್ಲಿದೆ ಉತ್ತರ..

‘ಆಸ್ಪತ್ರೆಯಿಂದ ಮಗುವನ್ನು ಮನೆಗೆ ಕರೆದುಕೊಂಡು ಹೊರಟ ಆಲಿಯಾ ಭಟ್​-ರಣಬೀರ್​ ಕಪೂರ್​’ ಎಂಬ ಕ್ಯಾಪ್ಷನ್​ನೊಂದಿಗೆ ಸೋಶಿಯಲ್​ ಮೀಡಿಯಾದಲ್ಲಿ ಸುದ್ದಿ ಹಂಚಿಕೊಳ್ಳಲಾಗಿದೆ. ಇದನ್ನು ನೋಡಿ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಓಹ್ ಇದು ಶಾಕಿಂಗ್​ ಸುದ್ದಿ.. ಮಗುವನ್ನು ನೇರವಾಗಿ ಕರಣ್​ ಜೋಹರ್​ ಅವರ ಆಫೀಸ್​ಗೆ ಕರೆದುಕೊಂಡು ಹೋಗ್ತಾರೆ ಅಂತ ನಾವು ಅಂದುಕೊಂಡಿದ್ವಿ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?
Image
ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

‘ನಾವೆಲ್ಲರೂ ಮಕ್ಕಳನ್ನು ಆಸ್ಪತ್ರೆಯಿಂದ ನೇರವಾಗಿ ಶಾಲೆಗೆ ಕರೆದುಕೊಂಡು ಹೋಗುತ್ತೇವೆ’ ಎಂದು ನೆಟ್ಟಿಗರೊಬ್ಬರು ಲೇವಡಿ ಮಾಡಿದ್ದಾರೆ. ‘ನ್ಯೂಸ್​ ಏಜೆನ್ಸಿ ಈ ರೀತಿ ಕ್ಯಾಪ್ಷನ್​ ನೀಡಿದ್ದು ಸರಿಯಿದೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮಗುವನ್ನು ಆಸ್ಪತ್ರೆಯಿಂದ ನೇರವಾಗಿ ಕರಣ್​ ಜೋಹರ್​ ಅವರ ಮುಂದಿನ ಸಿನಿಮಾ ಸೆಟ್​ಗೆ ಕರೆದುಕೊಂಡು ಹೋಗ್ತಾರೆ ಅಂತ ಅನೇಕರು ಭಾವಿಸಿದ್ದರು’ ಎಂದು ಕೂಡ ಕಾಲೆಳೆಯಲಾಗಿದೆ.

ಆಲಿಯಾ ಭಟ್​ ಅವರಿಗೆ ಟ್ರೋಲ್​ ಕಾಟ ಹೊಸದೇನೂ ಅಲ್ಲ. ವೃತ್ತಿಜೀವನದ ಆರಂಭದ ದಿನಗಳಿಂದಲೂ ಒಂದಿಲ್ಲೊಂದು ಕಾರಣಕ್ಕಾಗಿ ಅವರನ್ನು ಟ್ರೋಲ್​ ಮಾಡುತ್ತಾ ಬರಲಾಗಿದೆ. ಈಗ ಅವರು ಮಗುವಿನ ಮುಖ ತೋರಿಸದೇ ಇರಲು ನಿರ್ಧರಿಸಿದ್ದಾರೆ. ಹಾಗಾಗಿ ಮಗುವಿನ ಯಾವುದೇ ಫೋಟೋ ಬಹಿರಂಗ ಆಗಿಲ್ಲ. ನಟಿ ಅನುಷ್ಕಾ ಶರ್ಮಾ ಕೂಡ ತಮ್ಮ ಮಗಳ ವಿಚಾರದಲ್ಲಿ ಇದೇ ನಿಯಮ ಪಾಲಿಸುತ್ತಿದ್ದಾರೆ.

ಮಗು ಜನಿಸಿ ಇನ್ನೂ ವಾರವೂ ಕಳೆದಿಲ್ಲ. ಅಷ್ಟರಲ್ಲಾಗಲೇ ರಣಬೀರ್​ ಕಪೂರ್​ ಅವರು ಶೂಟಿಂಗ್​ ಸೆಟ್​ಗೆ ಮರಳಿದ್ದಾರೆ. ಈ ವಿಚಾರಕ್ಕೂ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ಹೆಂಡತಿ ಮತ್ತು ಮಗುವಿನ ಜೊತೆ ಇದ್ದು ಆರೈಕೆ ಮಾಡೋದು ಬಿಟ್ಟು ಕೆಲಸಕ್ಕೆ ಬಂದಿದ್ದು ಸರಿಯಲ್ಲ ಅಂತ ಅನೇಕರು ಟೀಕೆ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಲವು ಮೀಮ್ಸ್​ ಹರಿದಾಡುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:46 pm, Fri, 11 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ