Raha: ಮೊದಲ ಬಾರಿ ಮಗಳ ಮುಖ ತೋರಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ರಹಾ ಫೋಟೋ ವೈರಲ್​

ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಮುಂಬೈನ ಜುಹೂನಲ್ಲಿ ಕಪೂರ್​ ಕುಟುಂಬದವರು ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಭಾಗಿಯಾದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ಮಗಳನ್ನು ಕೂಡ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಅವರು ಪುತ್ರಿಯ ಮುಖವನ್ನು ತೋರಿಸಿದ್ದಾರೆ.

Raha: ಮೊದಲ ಬಾರಿ ಮಗಳ ಮುಖ ತೋರಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ರಹಾ ಫೋಟೋ ವೈರಲ್​
ರಣಬೀರ್​ ಕಪೂರ್​, ರಹಾ, ಆಲಿಯಾ ಭಟ್

Updated on: Dec 25, 2023 | 4:14 PM

ನಟಿ ಆಲಿಯಾ ಭಟ್​ ಮತ್ತು ನಟ ರಣಬೀರ್​ ಕಪೂರ್​ (Ranbir Kapoor) ದಂಪತಿಯ ಅಭಿಮಾನಿಗಳಿಗೆ ಈ ವರ್ಷದ ಕ್ರಿಸ್​ಮಸ್​ ತುಂಬ ಸ್ಪೆಷಲ್​ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳು ಇವೆ. ಇದೇ ಮೊದಲ ಬಾರಿಗೆ ಆಲಿಯಾ ಭಟ್​ (Alia Bhatt) ಮತ್ತು ರಣಬೀರ್​ ಕಪೂರ್​ ಅವರು ಮಗಳ ಮುಖವನ್ನು ಜಗತ್ತಿಗೆ ತೋರಿಸಿದ್ದಾರೆ. ಪುತ್ರಿಗೆ ರಹಾ ಎಂದು ಹೆಸರು ಇಟ್ಟಿರುವ ಈ ದಂಪತಿ, ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮೆರಾ ಎದುರು ಮಗಳ ಜೊತೆ ಪೋಸ್​ ನೀಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿವೆ. ಸಖತ್​ ಕ್ಯೂಟ್​ ಆಗಿರುವ ರಹಾ (Raha) ಮುಖವನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.

ಬಾಲಿವುಡ್​ ಮಂದಿ ಎಲ್ಲ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷದ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಮುಂಬೈನ ಜುಹೂನಲ್ಲಿ ಕಪೂರ್​ ಕುಟುಂಬದವರು ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಭಾಗಿಯಾದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ಮಗಳನ್ನು ಕೂಡ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಅವರು ಪುತ್ರಿಯ ಮುಖವನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಪರಸ್ಪರ ಪ್ರೀತಿಸಿ, 2022ರ ಏಪ್ರಿಲ್​ 14ರಂದು ಮದುವೆಯಾದರು. ಅದೇ ವರ್ಷ ನವೆಂಬರ್​ 6ರಂದು ಹೆಣ್ಣು ಮಗುವಿಗೆ ಆಲಿಯಾ ಭಟ್​ ಜನ್ಮ ನೀಡಿದರು. ಅವರು ಮನೆಯಲ್ಲಿ ಮಗಳನ್ನು ಹಲವು ಹೆಸರುಗಳಿಂದ ಕರೆಯುತ್ತಿದ್ದಾರೆ. ರಹು, ರಾರಾ, ಲಾಲಿಪಾಪ್ ಅಂತ ಮಗಳನ್ನು ಮುದ್ದಾಗಿ ಕರೆಯುತ್ತೇವೆ ಎಂದು ಇತ್ತೀಚಿಗೆ ಆಲಿಯಾ ಭಟ್​ ಹೇಳಿದ್ದರು.

ರಣಬೀರ್​ ಕಪೂರ್​ ಅವರು ಈ ವರ್ಷ ಭರ್ಜರಿ ಯಶಸ್ಸು ಕಂಡಿದ್ದಾರೆ. ಅವರು ನಟಿಸಿದ ‘ಅನಿಮಲ್​’ ಸಿನಿಮಾ ಡಿಸೆಂಬರ್​ 1ರಂದು ಬಿಡುಗಡೆಯಾಗಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಇನ್ನೂ ಹಲವು ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕೆಲವರು ಈ ಚಿತ್ರವನ್ನು ಟೀಕಿಸಿದ್ದರೂ ಕೂಡ ಬಾಕ್ಸ್​ ಆಫೀಸ್​ ಕಲೆಕ್ಷನ್​ ಚೆನ್ನಾಗಿಯೇ ಆಗಿದೆ. ಈ ಖುಷಿಯಲ್ಲಿ ಅವರು ಕ್ರಿಸ್​ಮಸ್​ ಆಚರಿಸಿದ್ದಾರೆ. ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us