AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರವೇರಿತು ಆಲಿಯಾ ಭಟ್​-ರಣಬೀರ್ ಕಪೂರ್ ಮದುವೆ; ಕ್ಯೂಟ್​ ದಂಪತಿಯ ಫೋಟೋಗಳು ಇಲ್ಲಿವೆ

‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಜತೆಯಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಆ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳೆತಿದೆ. ಈಗ ಇಬ್ಬರೂ ಮದುವೆ ಆಗುವ ಮೂಲಕ ಹೊಸ ಬದುಕು ಆರಂಭಿಸಿದ್ದಾರೆ.

ನೆರವೇರಿತು ಆಲಿಯಾ ಭಟ್​-ರಣಬೀರ್ ಕಪೂರ್ ಮದುವೆ; ಕ್ಯೂಟ್​ ದಂಪತಿಯ ಫೋಟೋಗಳು ಇಲ್ಲಿವೆ
ಆಲಿಯಾ-ರಣಬೀರ್
TV9 Web
| Edited By: |

Updated on:Apr 15, 2022 | 7:13 AM

Share

ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮದುವೆ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಿದ್ದ ವಿಚಾರ. ಇವರು ಪ್ರೀತಿಯಲ್ಲಿ ಬಿದ್ದು ಹಲವು ವರ್ಷಗಳೇ ಕಳೆದಿವೆ. 2019ರಿಂದ ಈಚೆಗೆ ಇವರ ಮದುವೆ ವಿಚಾರ ಹೆಚ್ಚು ಚರ್ಚೆ ಆಗುತ್ತಿತ್ತು. ವಿವಾಹ ವಿಚಾರದಲ್ಲಿ ಈ ದಂಪತಿ ಗುಟ್ಟು ಕಾಯ್ದುಕೊಂಡಿದ್ದರು. ಇನ್​ಸ್ಟಾಗ್ರಾಮ್​ನಲ್ಲಿ(Alia Bhatt Instagram)  ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ (Alia Bhatt Wedding Photos) ಅಧಿಕೃತ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ದಂಪತಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಸೆಟ್ಟೇರಿ ಹಲವು ವರ್ಷಗಳೇ ಕಳೆದಿವೆ. ಈ ಸಿನಿಮಾದ ಸೆಟ್​ನಲ್ಲಿ ಇಬ್ಬರಿಗೂ ಪ್ರೀತಿ ಮೂಡಿದೆ ಎನ್ನಲಾಗಿದೆ. ವಿಶೇಷ ಎಂದರೆ, ಆಲಿಯಾಗೆ ಚಿಕ್ಕ ವಯಸ್ಸಿನಿಂದಲೇ ರಣಬೀರ್ ಕಪೂರ್ ಅವರ ಮೇಲೆ ಕ್ರಶ್ ಇತ್ತು. ಹೀಗಿರುವಾಗಲೇ ಇಬ್ಬರೂ ಜತೆಯಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಆ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳೆತಿದೆ. ಈಗ ಇಬ್ಬರೂ ಮದುವೆ ಆಗುವ ಹೊಸ ಬದುಕು ಆರಂಭಿಸಿದ್ದಾರೆ.

ಬಾಲಿವುಡ್ ಜೋಡಿಯ ಈ ಮದುವೆ ರಣಬೀರ್ ಕಪೂರ್ ಅವರ ಮುಂಬೈ ನಿವಾಸದಲ್ಲಿ ನಡೆದಿದೆ. ಆಪ್ತರು ಮಾತ್ರ ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ನೀತು ಕಪೂರ್, ಕರೀನಾ ಕಪೂರ್, ಕರಿಶ್ಮಾ ಕಪೂರ್​, ಆಲಿಯಾ ಮೆಂಟರ್, ನಿರ್ಮಾಪಕ ಕರಣ್ ಜೋಹರ್ ಸೇರಿ ಕೆಲವೇ ಕೆಲವು ಮಂದಿ ಈ ಮದುವೆಗೆ ಸಾಕ್ಷಿ ಆದರು. ಆಲಿಯಾ ಮದುವೆಯಲ್ಲಿ ಕರಣ್ ಜೋಹರ್ ಅವರು ಕಣ್ಣೀರು ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

ವಿವಾಹ ಕಾರ್ಯದ 8 ಫೋಟೋಗಳನ್ನು ಆಲಿಯಾ ಹಂಚಿಕೊಂಡಿದ್ದಾರೆ. ಇದಕ್ಕೆ ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ‘ಕುಟುಂಬದವರು, ಗೆಳಯರ ಸಮ್ಮುಖದಲ್ಲಿ, ನಮ್ಮದೇ ಮನೆಯಲ್ಲಿ, ನಮ್ಮ ನೆಚ್ಚಿನ ಸ್ಥಳದಲ್ಲಿ, ನಮ್ಮ ಸಂಬಂಧವನ್ನು ಐದು ವರ್ಷ ಕಳೆದ ಬಾಲ್ಕನಿಯಲ್ಲಿ, ನಾವು ಮದುವೆ ಆದೆವು’ ಎಂದು ಆಲಿಯಾ ಬರೆದುಕೊಂಡಿದ್ದಾರೆ.

ಕಳೆದ ವರ್ಷಾಂತ್ಯಕ್ಕೆ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ನೆರವೇರಿತ್ತು. ಈ ಮದುವೆಯಲ್ಲಿ ಮೊಬೈಲ್​ನಲ್ಲಿ ಫೋಟೋ ತೆಗೆಯಲು ಅವಕಾಶ ಇರಲಿಲ್ಲ. ಆದರೆ, ಆಲಿಯಾ ಮದುವೆಯಲ್ಲಿ ಆ ರೀತಿ ಇರಲಿಲ್ಲ ಎನ್ನಲಾಗುತ್ತಿದೆ. ಇವರು ಮದುವೆ ಆಗುತ್ತಿರುವ ವಿಡಿಯೋಗಳು ಅವರ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಮದುವೆ ವಿಚಾರ ಖಚಿತಪಡಿಸಿದ ಆಲಿಯಾ ಭಟ್​; ಒಂದೇ ಕಮೆಂಟ್ ಮೂಲಕ ಎಲ್ಲವೂ ಬಹಿರಂಗ

ಮದುಮಗಳ ಲುಕ್​ನಲ್ಲಿ ಕಂಗೊಳಿಸಿದ ನಟಿ ಆಲಿಯಾ ಭಟ್

Published On - 7:37 pm, Thu, 14 April 22

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?