AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?

Ranbir Kapoor Alia Bhatt Remuneration: ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡುತ್ತಿದ್ದಾರೆ. ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರಿಗೆ ಬಹುಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ.

ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?
ರಣಬೀರ್ ಕಪೂರ್, ಆಲಿಯಾ ಭಟ್, ಅಯಾನ್​ ಮುಖರ್ಜಿ
TV9 Web
| Edited By: |

Updated on: Apr 17, 2022 | 7:49 AM

Share

ಬಾಲಿವುಡ್​ನಲ್ಲಿ ನಟ ರಣಬೀರ್​ ಕಪೂರ್​ (Ranbir Kapoor)  ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕಪೂರ್​ ಮನೆತನದ ಹೀರೋ ಆಗಿರುವ ಅವರು ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ಆಲಿಯಾ ಭಟ್​ (Alia Bhatt) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಲಿಯಾ ಕೂಡ ಬಾಲಿವುಡ್​ ಸಿನಿಮಾಗಳಲ್ಲಿ ಭರ್ಜರಿಯಾಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲ, ದಕ್ಷಿಣ ಭಾರತದಲ್ಲಿಯೂ ಅವರಿಗೆ ಸಖತ್​ ಬೇಡಿಕೆ ಇದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ನಟಿಸಿದ ಬಳಿಕ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಆಲಿಯಾ ಭಟ್​ ಮತ್ತು ರಣಬೀರ್ ಕಪೂರ್​ ಅವರು ಜೊತೆಯಾಗಿ ‘ಬ್ರಹ್ಮಾಸ್ತ್ರ’ (Brahmastra Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾಗಾಗಿ ಅವರಿಬ್ಬರೂ ಸೇರಿ ಬರೋಬ್ಬರಿ 42 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಅಯಾನ್​ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಟ್ರಿಲಜಿಯಲ್ಲಿ ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಎಂದು ಹೆಸರು ಇಡಲಾಗಿದೆ. ವಾರಾಣಸಿ ಸೇರಿದಂತೆ ಅನೇಕ ಕಡೆಗಳಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಮಾಡಲಾಗಿದೆ. ಈ ಪಾರ್ಟ್​ನಲ್ಲಿ ರಣಬೀರ್​ ಕಪೂರ್​ ಅವರು ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ 25ರಿಂದ 30 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ ಎಂದು ಹೇಳಲಾಗಿದೆ.

ಆಲಿಯಾ ಭಟ್​ ಅವರು ಪ್ರತಿಭಾವಂತ ನಟಿ. ಈಗಾಗಲೇ ‘ಗಂಗೂಬಾಯಿ ಕಾಠಿಯಾವಾಡಿ’, ‘ರಾಜಿ’, ‘ಗಲ್ಲಿ ಬಾಯ್​’ ರೀತಿಯ ಸಿನಿಮಾಗಳ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರಿಗೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಸಿನಿಮಾದಲ್ಲಿನ ನಟನೆಗಾಗಿ 10ರಿಂದ 12 ಕೋಟಿ ರೂಪಾಯಿ ನೀಡಲಾಗುತ್ತಿದೆ. ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಸಂಭಾವನೆ ಒಟ್ಟು ಸೇರಿಸಿದರೆ 40ರಿಂದ 42 ಕೋಟಿ ರೂಪಾಯಿ ಆಗಲಿದೆ.

ರಣಬೀರ್​-ಆಲಿಯಾ ಆಸ್ತಿ ಎಷ್ಟಿದೆ?

ಬಾಲಿವುಡ್​ನಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಇಬ್ಬರೂ ಬ್ಯುಸಿ ಆಗಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವ ಅವರು ಈಗಾಗಲೇ ಬಹುಕೋಟಿ ರೂಪಾಯಿ ಸಂಪಾದನೆ ಮಾಡಿದ್ದಾರೆ. ಈಗ ಇಬ್ಬರ ಆಸ್ತಿಯನ್ನು ಒಟ್ಟು ಸೇರಿದರೆ ಬರೋಬ್ಬರಿ 840 ಕೋಟಿ ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ. ರಣಬೀರ್​ ಕಪೂರ್​ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಅನೇಕ ಉದ್ಯಮಗಳ ಮೇಲೂ ಅವರು ಹೂಡಿಕೆ ಮಾಡಿದ್ದಾರೆ. ಜಾಹೀರಾತುಗಳಲ್ಲಿ ನಟಿಸುವ ಮೂಲಕವೂ ಅವರು ಹಣ ಗಳಿಸುತ್ತಾರೆ. ಅವರ ಒಟ್ಟು ಆಸ್ತಿ ಮೌಲ್ಯ 330 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ‘ಸ್ಟೂಡೆಂಟ್​ ಆಫ್​ ದಿ ಇಯರ್​’ ಸಿನಿಮಾದ ಮೂಲಕ ಬಾಲಿವುಡ್​ಗೆ ಕಾಲಿಟ್ಟ ಆಲಿಯಾ ಭಟ್​ ಈಗಲೂ ಬಹುಬೇಡಿಕೆಯ ನಟಿ ಆಗಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 510 ಕೋಟಿ ಕೋಟಿ ರೂಪಾಯಿಗಿಂತಲೂ ಹೆಚ್ಚು ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ:

ಮದುವೆ ಆದ ಖುಷಿಗೆ ಹೆಂಡತಿಯನ್ನು ಎತ್ತಿಕೊಂಡು ಓಡಾಡಿದ​ ರಣಬೀರ್​ ಕಪೂರ್​: ವಿಡಿಯೋ ವೈರಲ್​

ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?