ಬಾಲಿವುಡ್ನಲ್ಲಿ ನಟ ರಣಬೀರ್ ಕಪೂರ್ (Ranbir Kapoor) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕಪೂರ್ ಮನೆತನದ ಹೀರೋ ಆಗಿರುವ ಅವರು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ಆಲಿಯಾ ಭಟ್ (Alia Bhatt) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಲಿಯಾ ಕೂಡ ಬಾಲಿವುಡ್ ಸಿನಿಮಾಗಳಲ್ಲಿ ಭರ್ಜರಿಯಾಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲ, ದಕ್ಷಿಣ ಭಾರತದಲ್ಲಿಯೂ ಅವರಿಗೆ ಸಖತ್ ಬೇಡಿಕೆ ಇದೆ. ‘ಆರ್ಆರ್ಆರ್’ ಚಿತ್ರದಲ್ಲಿ ನಟಿಸಿದ ಬಳಿಕ ಅವರು ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಗುರುತಿಸಿಕೊಂಡಿದ್ದಾರೆ. ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಜೊತೆಯಾಗಿ ‘ಬ್ರಹ್ಮಾಸ್ತ್ರ’ (Brahmastra Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾಗಾಗಿ ಅವರಿಬ್ಬರೂ ಸೇರಿ ಬರೋಬ್ಬರಿ 42 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಅಯಾನ್ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಮೂರು ಪಾರ್ಟ್ಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಟ್ರಿಲಜಿಯಲ್ಲಿ ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್ 1: ಶಿವ’ ಎಂದು ಹೆಸರು ಇಡಲಾಗಿದೆ. ವಾರಾಣಸಿ ಸೇರಿದಂತೆ ಅನೇಕ ಕಡೆಗಳಲ್ಲಿ ಈ ಚಿತ್ರಕ್ಕೆ ಶೂಟಿಂಗ್ ಮಾಡಲಾಗಿದೆ. ಈ ಪಾರ್ಟ್ನಲ್ಲಿ ರಣಬೀರ್ ಕಪೂರ್ ಅವರು ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ 25ರಿಂದ 30 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ ಎಂದು ಹೇಳಲಾಗಿದೆ.
ಆಲಿಯಾ ಭಟ್ ಅವರು ಪ್ರತಿಭಾವಂತ ನಟಿ. ಈಗಾಗಲೇ ‘ಗಂಗೂಬಾಯಿ ಕಾಠಿಯಾವಾಡಿ’, ‘ರಾಜಿ’, ‘ಗಲ್ಲಿ ಬಾಯ್’ ರೀತಿಯ ಸಿನಿಮಾಗಳ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರಿಗೆ ‘ಬ್ರಹ್ಮಾಸ್ತ್ರ ಪಾರ್ಟ್ 1: ಶಿವ’ ಸಿನಿಮಾದಲ್ಲಿನ ನಟನೆಗಾಗಿ 10ರಿಂದ 12 ಕೋಟಿ ರೂಪಾಯಿ ನೀಡಲಾಗುತ್ತಿದೆ. ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಸಂಭಾವನೆ ಒಟ್ಟು ಸೇರಿಸಿದರೆ 40ರಿಂದ 42 ಕೋಟಿ ರೂಪಾಯಿ ಆಗಲಿದೆ.
ರಣಬೀರ್-ಆಲಿಯಾ ಆಸ್ತಿ ಎಷ್ಟಿದೆ?
ಬಾಲಿವುಡ್ನಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಇಬ್ಬರೂ ಬ್ಯುಸಿ ಆಗಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವ ಅವರು ಈಗಾಗಲೇ ಬಹುಕೋಟಿ ರೂಪಾಯಿ ಸಂಪಾದನೆ ಮಾಡಿದ್ದಾರೆ. ಈಗ ಇಬ್ಬರ ಆಸ್ತಿಯನ್ನು ಒಟ್ಟು ಸೇರಿದರೆ ಬರೋಬ್ಬರಿ 840 ಕೋಟಿ ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ. ರಣಬೀರ್ ಕಪೂರ್ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಅನೇಕ ಉದ್ಯಮಗಳ ಮೇಲೂ ಅವರು ಹೂಡಿಕೆ ಮಾಡಿದ್ದಾರೆ. ಜಾಹೀರಾತುಗಳಲ್ಲಿ ನಟಿಸುವ ಮೂಲಕವೂ ಅವರು ಹಣ ಗಳಿಸುತ್ತಾರೆ. ಅವರ ಒಟ್ಟು ಆಸ್ತಿ ಮೌಲ್ಯ 330 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ‘ಸ್ಟೂಡೆಂಟ್ ಆಫ್ ದಿ ಇಯರ್’ ಸಿನಿಮಾದ ಮೂಲಕ ಬಾಲಿವುಡ್ಗೆ ಕಾಲಿಟ್ಟ ಆಲಿಯಾ ಭಟ್ ಈಗಲೂ ಬಹುಬೇಡಿಕೆಯ ನಟಿ ಆಗಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 510 ಕೋಟಿ ಕೋಟಿ ರೂಪಾಯಿಗಿಂತಲೂ ಹೆಚ್ಚು ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.
ಇದನ್ನೂ ಓದಿ:
ಮದುವೆ ಆದ ಖುಷಿಗೆ ಹೆಂಡತಿಯನ್ನು ಎತ್ತಿಕೊಂಡು ಓಡಾಡಿದ ರಣಬೀರ್ ಕಪೂರ್: ವಿಡಿಯೋ ವೈರಲ್
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್ಸೈಡ್ ವಿಷಯ