ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು
ರಣಬೀರ್-ರಹಾ-ಆಲಿಯಾ
Follow us
ರಾಜೇಶ್ ದುಗ್ಗುಮನೆ
|

Updated on: Mar 28, 2024 | 8:54 AM

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಗಳು ರಹಾ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ಈ ಸ್ಟಾರ್ ದಂಪತಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಮಗಳ ಜೊತೆ ಪೋಸ್ ಕೊಡುತ್ತಾರೆ. ರಹಾ ಫೋಟೋ ಎಲ್ಲ ಕಡೆ ವೈರಲ್ ಆಗಿದೆ. ಈಗ ಆಕೆ ಬಾಲಿವುಡ್​ನ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನ್ನುವ ಖ್ಯಾತಿಗೆ ರಹಾ ಪಾತ್ರಳಾಗಲಿದ್ದಾಳೆ. ಇದಕ್ಕೆ ಕಾರಣ ಆಗಿರೋದು ಆಲಿಯಾ ಹಾಗೂ ರಣಬೀರ್ ಕಪೂರ್ ಅವರ ನಿರ್ಧಾರ.

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಬಾಂದ್ರಾದಲ್ಲಿ ಈ ದಂಪತಿ ಹೊಸ ಮನೆ ಕಟ್ಟಿಸುತ್ತಿದ್ದಾರೆ. ಈ ಮನೆಯನ್ನು ಮಗಳು ರಹಾ ಹೆಸರಲ್ಲಿ ನೋಂದಣಿ ಮಾಡಿಸಲು ದಂಪತಿ ನಿರ್ಧರಿಸಿದ್ದಾರೆ.

ಬಾಂದ್ರಾದಲ್ಲಿ ಜಾಗದ ಬೆಲೆ ಗಗನಕ್ಕೇರಿದೆ. ಇಂಥ ಜಾಗದಲ್ಲಿ ಆಲಿಯಾ-ರಣಬೀರ್ ಮನೆ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಎಂದರೆ, ಈ ಮನೆಯನ್ನು ಸಾಕಷ್ಟು ಐಷಾರಾಮಿ ಆಗಿ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಕನಿಷ್ಠ 250 ಕೋಟಿ ರೂಪಾಯಿ ವೆಚ್ಛ ತಗುಲಿದೆ ಎನ್ನಲಾಗುತ್ತಿದೆ. ಈ ಮನೆ ಶಾರುಖ್ ಖಾನ್ ಅವರ ಮನ್ನತ್ ಹಾಗೂ ಅಮಿತಾಭ್ ಬಚ್ಚನ್ ಅವರ ‘ಜಲ್ಸಾ’ ಸಮೀಪವೇ ಇದೆ.

ಒಂದೊಮ್ಮೆ ಈ ಮನೆ ರಹಾ ಹೆಸರಲ್ಲಿ ನೋಂದಣಿ ಆಗಿದ್ದೇ ಹೌದಾದಲ್ಲಿ ಆಕೆ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನಿಸಿಕೊಳ್ಳಲಿದ್ದಾಳೆ. ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್ ಇತ್ತೀಚೆಗೆ ಬಾಂದ್ರಾದಲ್ಲಿ 15 ಕೋಟಿ ರೂಪಾಯಿ ಮನೆ ಖರೀದಿಸಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್ ಒಳ್ಳೆಯ ನಟಿ ಮಾತ್ರವಲ್ಲ, ಒಳ್ಳೆಯ ಉದ್ಯಮಿ ಸಹ ಹೌದು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅವರು ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಾಣುತ್ತಿದ್ದಾರೆ. ರಣಬೀರ್ ಕಪೂರ್ ಅವರು ಸದ್ಯ ‘ರಾಮಾಯಣ’ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ