ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

Alia Bhatt Ranbir Kapoor Wedding Gifts: ಆಲಿಯಾ ಭಟ್​-ರಣಬೀರ್​ ಕಪೂರ್​ ಮದುವೆಗೆ ಸಂಬಂಧಿಕರು ಮತ್ತು ಸ್ನೇಹಿತರು ದುಬಾರಿ ಉಡುಗೊರೆ ನೀಡಿದ್ದಾರೆ. ರಣಬೀರ್​ ಮಾಜಿ ಪ್ರೇಯಸಿಯರ ಕಡೆಯಿಂದಲೂ ಗಿಫ್ಟ್​ ಬಂದಿದೆ.

ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
ಆಲಿಯಾ ಭಟ್​, ರಣಬೀರ್​ ಕಪೂರ್​, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 18, 2022 | 9:08 AM

ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಇತ್ತೀಚೆಗೆ ಹಸೆಮಣೆ ಏರಿದರು. ಏ.14ರಂದು ಅದ್ದೂರಿಯಾಗಿ ಅವರ ವಿವಾಹ (Alia Bhatt Ranbir Kapoor Wedding) ಸಮಾರಂಭ ನೆರವೇರಿತು. ಬಾಲಿವುಡ್​ನ ಕ್ಯೂಟ್​ ಜೋಡಿ ಎಂದು ಕರೆಸಿಕೊಳ್ಳುವ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ತಮ್ಮ ಮದುವೆಗೆ ಕೆಲವೇ ಕೆಲವು ಮಂದಿಯನ್ನು ಮಾತ್ರ ಆಹ್ವಾನಿಸಿದ್ದರು. ಸಂಬಂಧಿಕರು, ಆಪ್ತ ಸ್ನೇಹಿತರು ಮಾತ್ರವೇ ಈ ಮದುವೆಯಲ್ಲಿ ಭಾಗಿ ಆಗಿದ್ದರು. ಬಾಲಿವುಡ್​ ಸೆಲೆಬ್ರಿಟಿಗಳ ವಿವಾಹ ಎಂದರೆ ಅದ್ದೂರಿಯಾಗಿರಲೇ ಬೇಕು. ಅದಕ್ಕೆ ತಕ್ಕಂತೆಯೇ ನವದಂಪತಿಗೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಗಳು ಬಂದಿವೆ. ಕರೀನಾ ಕಪೂರ್​, ರಣವೀರ್​ ಸಿಂಗ್​, ಕತ್ರಿನಾ ಕೈಫ್​ (Katrina Kaif), ವರುಣ್​ ಧವನ್​, ಸಿದ್ದಾರ್ಥ್​ ಮಲ್ಹೋತ್ರ, ದೀಪಿಕಾ ಪಡುಕೋಣೆ (Deepika Padukone) ಮುಂತಾದವರು ಲಕ್ಷಾಂತರ ರೂಪಾಯಿ ಮೌಲ್ಯದ ಗಿಫ್ಟ್​ ನೀಡಿದ್ದಾರೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅದರ ಅನುಸಾರ ಯಾರು ಯಾವ ಉಡುಗೊರೆ ಕೊಟ್ಟಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ರಣಬೀರ್​ ಕಪೂರ್​ ಅವರ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ ಅವರು ತಲಾ 15 ಲಕ್ಷ ಬೆಲೆಬಾಳುವ ಎರಡು ವಾಚ್​ಗಳನ್ನು ನವದಂಪತಿಗೆ ನೀಡಿದ್ದಾರೆ. ರಣವೀರ್​ ಸಿಂಗ್​​ ಅವರು 80 ಲಕ್ಷ ರೂಪಾಯಿ ಬೆಲೆಯ ಬೈಕ್​ ಉಡುಗೊರೆಯಾಗಿ ಕೊಟ್ಟಿದ್ದಾರೆ. ಕರೀನಾ ಕಪೂರ್​ ಅವರು ಡೈಮಂಡ್​ ನೆಕ್ಲೆಸ್​ ನೀಡಿದ್ದು, ಅದರ ಬೆಲೆ 3.1 ಲಕ್ಷ ರೂಪಾಯಿ ಎಂದು ಹೇಳಲಾಗಿದೆ. ಸಿದ್ದಾರ್ಥ್​ ಮಲ್ಹೋತ್ರ ಅವರು 3 ಲಕ್ಷ ರೂಪಾಯಿ ಬೆಲೆ ಬಾಳುವ ಹ್ಯಾಂಡ್​ಬ್ಯಾಗ್​ ಅನ್ನು ಆಲಿಯಾಗೆ ಗಿಫ್ಟ್​ ಮಾಡಿದ್ದಾರೆ ಎಂದು ವರದಿ ಆಗಿದೆ.

ಹಿಂದಿ ಚಿತ್ರರಂಗದಲ್ಲಿ ಅನೇಕ ಸ್ನೇಹಿತರನ್ನು ಹೊಂದಿದ್ದಾರೆ ಆಲಿಯಾ ಮತ್ತು ರಣಬೀರ್​. ಎಲ್ಲರೂ ಕೂಡ ದುಬಾರಿ ಉಡುಗೊರೆಯನ್ನೇ ನೀಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು 9 ಲಕ್ಷ ರೂಪಾಯಿ ಬೆಲೆಯ ವಜ್ರದ ನೆಕ್ಲೆಸ್​ ಅನ್ನು ಆಲಿಯಾಗೆ ನೀಡಿದ್ದಾರೆ. ರಣಬೀರ್​ ಕಪೂರ್​ ಅವರ ತಾಯಿ ನೀತು ಕಪೂರ್​ ಅವರು ಮಗ ಮತ್ತು ಸೊಸೆಗೆ 6 ಬೆಡ್​ ರೂಮ್​ಗಳ ಫ್ಲಾಟ್​ ನೀಡಿದ್ದು ಅದರ ಬೆಲೆ 26 ಕೋಟಿ ರೂಪಾಯಿ ಎನ್ನಲಾಗಿದೆ. ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಜೊತೆಯಾಗಿ ನಟಿಸುತ್ತಿದ್ದಾರೆ. ಅದರ ನಿರ್ದೇಶಕ ಅಯಾನ್​ ಮುಖರ್ಜಿ ಅವರು ಆಡಿ 8 ಕ್ಯೂ ಕಾರನ್ನು ಉಡುಗೊರೆಯಾಗಿ ನೀಡಿದ್ದಾರಂತೆ. ಅರ್ಜುನ್​ ಕಪೂರ್​ ಅವರು 1.5 ಲಕ್ಷ ರೂ. ಬೆಲೆಯ ಜಾಕೆಟ್​ ಅನ್ನು ರಣಬೀರ್​ ಕಪೂರ್​ಗೆ ಗಿಫ್ಟ್​ ಮಾಡಿದ್ದಾರೆ. ಅನುಷ್ಕಾ ಶರ್ಮಾ ಅವರು 1.6 ರೂಪಾಯಿ ಬೆಲೆಯ ಬಟ್ಟೆಯನ್ನು ಆಲಿಯಾಗೆ ನೀಡಿದ್ದಾರೆ ಎಂದು ‘ಬಾಲಿವುಡ್​ ಲೈಫ್​’ ವರದಿ ಮಾಡಿದೆ. ಈ ಉಡುಗೊರೆಗಳ ಕುರಿತಾಗಿ ರಣಬೀರ್​-ಆಲಿಯಾ ಕುಟುಂಬದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ರಣಬೀರ್​ ಕಪೂರ್​ ಅವರ ಮುಂಬೈನ ನಿವಾಸದಲ್ಲಿ ಈ ಮದುವೆ ನಡೆಯಿತು. ಹೈ-ಪ್ರೊಫೈಲ್​ ವಿವಾಹ ಆದ್ದರಿಂದ ಅವರ ಮನೆಗೆ ಪೊಲೀಸ್​ ಬಿಗಿ ಭದ್ರತೆ ಒದಗಿಸಲಾಗಿತ್ತು. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್ ಅವರದ್ದು ಫಿಲ್ಮಿ ಕುಟುಂಬ. ಹಾಗಾಗಿ ಈ ಮದುವೆಗೆ ಅನೇಕ ಆಪ್ತರು ಸಾಕ್ಷಿಯಾದರು. ಇಬ್ಬರೂ ಕೂಡ ಬಾಲಿವುಡ್​ನಲ್ಲಿ ಬಹುಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಇಬ್ಬರ ನೆಟ್​ ವರ್ತ್​ ಬರೋಬ್ಬರಿ 840 ಕೋಟಿ ರೂಪಾಯಿ ಎಂದು ಹೇಳಲಾಗಿದೆ.

ಇದನ್ನೂ ಓದಿ:

ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?

ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ