Alia Bhatt: ಪ್ರೆಗ್ನೆನ್ಸಿ ಬೆನ್ನಲ್ಲೇ ಆಲಿಯಾಗೆ ವಿಪರೀತ ಕೋಪ; ಅದಕ್ಕೆ ಕಾರಣ ಗಂಡನ ಕುರಿತ ಒಂದೇ ಒಂದು ಗಾಸಿಪ್​

Alia Bhatt Pregnant: ತಮ್ಮ ಬಗ್ಗೆ ಮತ್ತು ರಣಬೀರ್​ ಕಪೂರ್​ ಬಗ್ಗೆ ಹರಡಿರುವ ಗಾಸಿಪ್ ನೋಡಿ ಆಲಿಯಾ ಭಟ್​ ಸಿಟ್ಟು ಮಾಡಿಕೊಂಡಿದ್ದಾರೆ. ಕೆಲವು ವರದಿ ಬಗ್ಗೆ ಅವರು​ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Alia Bhatt: ಪ್ರೆಗ್ನೆನ್ಸಿ ಬೆನ್ನಲ್ಲೇ ಆಲಿಯಾಗೆ ವಿಪರೀತ ಕೋಪ; ಅದಕ್ಕೆ ಕಾರಣ ಗಂಡನ ಕುರಿತ ಒಂದೇ ಒಂದು ಗಾಸಿಪ್​
ಆಲಿಯಾ ಭಟ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 29, 2022 | 8:32 AM

ನಟಿ ಆಲಿಯಾ ಭಟ್​ (Alia Bhatt) ಅವರು ಸಖತ್​ ಖುಷಿಯಲ್ಲಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಈ ನಡುವೆ ಆಲಿಯಾಗೆ ವಿಪರೀತ ಕೋಪ ಬಂದಿದೆ. ಅದಕ್ಕೆ ಕಾರಣ ಆಗಿರುವುದು ಪತಿ ರಣಬೀರ್​ ಕಪೂರ್ (Ranbir Kapoor)​ ಬಗ್ಗೆ ಕೇಳಿಬಂದ ಗಾಸಿಪ್​. ಸೆಲೆಬ್ರಿಟಿಗಳು ಎಂದಮೇಲೆ ಗಾಸಿಪ್ ಸಹಜ. ಅದು ಆಲಿಯಾಗೂ ಹೊಸದಲ್ಲ. ಆದರೆ ಈ ಬಾರಿ ಅವರು ಕೊಂಚ ಸೀರಿಯಸ್​ ಆಗಿದ್ದಾರೆ. ತಮ್ಮನ್ನು ಕೇವಲವಾಗಿ ನೋಡುತ್ತಿರುವ ಜನರಿಗೆ ಅವರು ಖಡಕ್​ ತಿರುಗೇಟು ನೀಡಿದ್ದಾರೆ. ಆಲಿಯಾ ಭಟ್​ ಗರ್ಭಿಣಿ (Alia Bhatt Pregnant) ಆಗಿರುವುದರಿಂದ ಅವರ ಸಿನಿಮಾ ಕೆಲಸಗಳು ತಡ ಆಗುತ್ತಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅದೂ ಅಲ್ಲದೇ, ಸದ್ಯ ವಿದೇಶದಲ್ಲಿ ಶೂಟಿಂಗ್​ ಮಾಡುತ್ತಿರುವ ಆಲಿಯಾರನ್ನು ವಾಪಸ್​ ಭಾರತಕ್ಕೆ ಕರೆತರಲು ರಣಬೀರ್​ ಕಪೂರ್​ ಹೋಗುತ್ತಿದ್ದಾರೆ ಎಂದು ಬರೆಯಲಾಗಿದೆ. ಇದನ್ನು ಕಂಡು ಆಲಿಯಾ ಭಟ್​ ಗರಂ ಆಗಿದ್ದಾರೆ.

ತಮ್ಮ ಬಗ್ಗೆ ಹರಡಿರುವ ಇಂಥ ಗಾಸಿಪ್​ನ ವರದಿಯನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಆಲಿಯಾ ಶೇರ್​ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ‘ನನ್ನಿಂದ ಯಾವುದೇ ಸಿನಿಮಾದ ಕೆಲಸ ವಿಳಂಬವಾಗಿಲ್ಲ. ನಾನು ಮಹಿಳೆಯೇ ಹೊರತು ಪಾರ್ಸೆಲ್​ ಅಲ್ಲ. ಹಾಗಾಗಿ ನನ್ನನ್ನು ಯಾರೂ ಪಿಕ್​ ಮಾಡುವ ಅನಿವಾರ್ಯತೆ ಇಲ್ಲ. ನನಗೆ ವಿಶ್ರಾಂತಿಯ ಅವಶ್ಯಕತೆ ಇಲ್ಲ. ಆದರೆ ನಿಮಗೆ ಖಂಡಿತವಾಗಿ ವೈದ್ಯರ ಸರ್ಟಿಫಿಕೇಟ್​ ಬೇಕು’ ಎಂದು ಆಲಿಯಾ ಭಟ್​ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ನಾವಿನ್ನೂ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇದು 2022. ನಾವು ಹಳೇ ಕಾಲದ ಆಲೋಚನೆಯಿಂದ ಹೊರಬರಬಹುದೇ?’ ಎಂದು ಆಲಿಯಾ ಭಟ್​ ಅವರು ಗುಡುಗಿದ್ದಾರೆ. ಇದರ ಜೊತೆಗೆ, ತಮಗೆ ಅಭಿನಂದನೆ ತಿಳಿಸಿದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ಸದ್ಯ ಆಲಿಯಾ ಭಟ್ ಅವರು ಲಂಡನ್​ನಲ್ಲಿ ಇದ್ದಾರೆ. ತಮ್ಮ ಮೊದಲ ಹಾಲಿವುಡ್​ ಸಿನಿಮಾ ‘ಹಾರ್ಟ್​ ಆಫ್​ ಸ್ಟೋನ್​’ ಚಿತ್ರೀಕರಣದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?
Image
ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

ಕೆಲವು ವರ್ಷಗಳಿಂದ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಪರಸ್ಪರ ಪ್ರೀತಿಸುತ್ತಿದ್ದರು. ಈ ವರ್ಷ ಏಪ್ರಿಲ್​ 14ರಂದು ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಆಗಿ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂಬುದನ್ನು ಆಲಿಯಾ ಭಟ್​ ತಿಳಿಸಿದ್ದಾರೆ. ಈ ಸುದ್ದಿ ಕೇಳಿ ಅವರ ಫ್ಯಾನ್ಸ್​ ಖುಷಿ ಆಗಿದ್ದಾರೆ.

ಇದನ್ನೂ ಓದಿ: Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

ಪ್ರೆಗ್ನೆನ್ಸಿ ಘೋಷಣೆಗೂ ಮೊದಲು ಆಲಿಯಾ ಭಟ್ ತೆಗೆದುಕೊಂಡಿದ್ರು ಒಂದು ಮಹತ್ವದ ನಿರ್ಧಾರ

Published On - 8:32 am, Wed, 29 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ