AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್

Ranbir Kapoor | Shamshera: ‘ಇದನ್ನೆಲ್ಲ ಆಲಿಯಾ ಭಟ್​ ನೋಡಿದರೆ ನಿಮ್ಮ ಕಥೆ ಮುಗಿಯಿತು’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ. ಈ ರೀತಿ ಹಲವು ಮೀಮ್ಸ್​ ವೈರಲ್​ ಆಗಿವೆ.

Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್
ಆಲಿಯಾ ಭಟ್​, ರಣಬೀರ್​ ಕಪೂರ್​, ವಾಣಿ ಕಪೂರ್​
TV9 Web
| Edited By: |

Updated on:Jul 07, 2022 | 7:15 AM

Share

ಬಾಲಿವುಡ್​ನ ಕ್ಯೂಟ್​ ಕಪಲ್​ ಎನಿಸಿಕೊಂಡಿರುವ ಆಲಿಯಾ ಭಟ್ (Alia Bhatt)​ ಮತ್ತು ರಣಬೀರ್​ ಕಪೂರ್​ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ಜೋಡಿ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದೆ. ಆಲಿಯಾ ಭಟ್​ ತಾಯಿ ಆಗುತ್ತಿರುವ ವಿಷಯ ತಿಳಿದು ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಪತ್ನಿ ಗರ್ಭಿಣಿ ಆಗಿರುವ ಈ ಸಂದರ್ಭದಲ್ಲಿ ರಣಬೀರ್​ ಕಪೂರ್​  (Ranbir Kapoor) ಅವರು ಬೇರೆ ನಟಿಯ ಜೊತೆ ಸಿಕ್ಕಾಪಟ್ಟೆ ಆಪ್ತವಾಗಿ ಪೋಸ್​ ನೀಡಿದ್ದಾರೆ. ಹಾಗಂತ ಇದೇನೂ ಅವರ ವೈಯಕ್ತಿಕ ವಿಚಾರ ಅಲ್ಲ. ಏನಿದ್ದರೂ ಪಕ್ಕಾ ಪ್ರೊಫೆಷನಲ್​. ಹೌದು, ‘ಶಂಷೇರಾ’ ಚಿತ್ರಕ್ಕಾಗಿ ನಟಿ ವಾಣಿ ಕಪೂರ್​ (Vaani Kapoor) ಜೊತೆ ರಣಬೀರ್​ ಕಪೂರ್​ ಅವರು ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

ಹಲವು ನಟಿಯರ ಜೊತೆಗೆ ಲವ್ವಿ-ಡವ್ವಿ ನಡೆಸಿದ ಕಾರಣದಿಂದಲೇ ರಣಬೀರ್​ ಕಪೂರ್​ ಅವರು ಹೆಚ್ಚು ಸುದ್ದಿ ಆಗಿದ್ದರು. ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್​, ಮಹಿರಾ ಖಾನ್​ ಮುಂತಾದ ನಟಿಯರ ಜೊತೆ ಅವರು ಪ್ರೀತಿಯಲ್ಲಿ ಮುಳುಗಿದ್ದರು ಎಂಬ ವಿಷಯ ಜಗತ್ತಿಗೇ ತಿಳಿದಿದೆ. ನಂತರ ಅವರು ಆಲಿಯಾ ಜೊತೆ ಡೇಟಿಂಗ್ ಶುರು​ ಮಾಡಿಕೊಂಡರು. ಅಂತೂ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಅಭಿಮಾನಿಗಳಿಗೆ ಸಮಾಧಾನ ನೀಡಿತು.

ಸಾಮಾನ್ಯವಾಗಿ ಮದುವೆ ಆದ ಬಳಿಕ ಸಿನಿಮಾದಲ್ಲಿ ಹಾಟ್​ ದೃಶ್ಯಗಳಲ್ಲಿ ನಟಿಸಲು ಕೆಲವು ಕಲಾವಿದರು ಹಿಂದೇಟು ಹಾಕುತ್ತಾರೆ. ಆದರೆ ರಣಬೀರ್ ಕಪೂರ್​ ಹಾಗಲ್ಲ. ನಟಿ ವಾಣಿ ಕಪೂರ್​ ಜೊತೆ ಅವರು ಬೋಲ್ಡ್​ ಫೋಟೋಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಿಕ್ಕಾಪಟ್ಟೆ ಕಾಲೆಳೆದಿದ್ದಾರೆ. ‘ಇದನ್ನೆಲ್ಲ ಆಲಿಯಾ ಭಟ್​ ನೋಡಿದರೆ ನಿಮ್ಮ ಕಥೆ ಮುಗಿಯಿತು’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?
Image
ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

‘ಗಲ್ಲಿ ಬಾಯ್​’ ಚಿತ್ರದಲ್ಲಿ ಆಲಿಯಾ ಮಾಡಿದ ಪಾತ್ರ ಗಮನ ಸೆಳೆದಿತ್ತು. ತನ್ನ ಪ್ರಿಯಕರನ ಜೊತೆ ಫ್ಲರ್ಟ್​ ಮಾಡಲು ಬಂದ ಬೇರೆ ಯುವತಿಗೆ ಬಿಯರ್​ ಬಾಟಲ್​ನಿಂದ ಹೊಡೆಯುವ ದೃಶ್ಯದಲ್ಲಿ ಆಲಿಯಾ ಸಖತ್​ ಉಗ್ರವಾಗಿ ನಟಿಸಿದ್ದರು. ಈಗ ಅಭಿಮಾನಿಗಳು ಅದೇ ಸೀನ್​ ನೆನಪಿಸಿಕೊಳ್ಳುತ್ತಿದ್ದಾರೆ. ‘ಆಲಿಯಾ ಬಾಟಲ್​ ತಗೊಂಡು ಬರ್ತಾರೆ, ಹುಷಾರ್​..’ ಎಂದು ವಾಣಿ ಕಪೂರ್​ಗೆ ನೆಟ್ಟಿಗರು ಎಚ್ಚರಿಗೆ ನೀಡುತ್ತಿದ್ದಾರೆ. ಈ ರೀತಿ ಅನೇಕ ಮೀಮ್ಸ್​ ಹರಿದಾಡುತ್ತಿದೆ.

ಇದನ್ನೂ ಓದಿ: Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​

Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

Published On - 7:15 am, Thu, 7 July 22

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!