ಪ್ರಶಾಂತ್ ನೀಲ್ ಸಿನಿಮಾಗೆ ನಾಯಕಿಯಾದ ಆಲಿಯಾ ಭಟ್ ? ಮತ್ತೆ ದಕ್ಷಿಣಕ್ಕೆ ಎಂಟ್ರಿ

ಬಾಲಿವುಡ್ ಬೆಡಗಿ ಆಲಿಯಾ ಭಟ್ ಟಾಲಿವುಡ್‌ನಲ್ಲಿ ಬೃಹತ್ ಪ್ರಾಜೆಕ್ಟ್‌ಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್‌ಟಿಆರ್ ಜೋಡಿಯ 'ಡ್ರ್ಯಾಗನ್' ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿರುವ ಇವರು, ಪ್ರಭಾಸ್ ನಟನೆಯ 'ಕಲ್ಕಿ 2' ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ .

ಪ್ರಶಾಂತ್ ನೀಲ್ ಸಿನಿಮಾಗೆ ನಾಯಕಿಯಾದ ಆಲಿಯಾ ಭಟ್ ? ಮತ್ತೆ ದಕ್ಷಿಣಕ್ಕೆ ಎಂಟ್ರಿ
ಆಲಿಯಾ-ನೀಲ್

Updated on: Sep 04, 2026 | 8:35 AM

ಮುಖ್ಯಾಂಶಗಳು

  • ಪ್ರಶಾಂತ್ ನೀಲ್-ಎನ್‌ಟಿಆರ್ ಕಾಂಬಿನೇಷನ್‌ಗೆ ಆಲಿಯಾ ಭಟ್ ನಾಯಕಿ
  • 'ಆರ್‌ಆರ್‌ಆರ್' ನಂತರ ಮತ್ತೆ ಒಂದಾದ ಜೂನಿಯರ್ ಎನ್‌ಟಿಆರ್ ಮತ್ತು ಆಲಿಯಾ
  • 'ಕಲ್ಕಿ 2' ಚಿತ್ರದಲ್ಲೂ ಬಾಲಿವುಡ್ ನಟಿಯ ಕಮಾಲ್ 

ಬಾಲಿವುಡ್‌ನ ಬಹುಬೇಡಿಕೆಯ ನಟಿ ಆಲಿಯಾ ಭಟ್ (Alia Bhatt) ಈಗ ಟಾಲಿವುಡ್ ಅಂಗಳದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಸಿನಿಮಾದ ಮೂಲಕ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಆ ಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದರೂ ಅವರ ಅಭಿನಯ ಪ್ರೇಕ್ಷಕರ ಮನ ಗೆದ್ದಿತ್ತು. ಈಗ ಅವರು ಭಾರತೀಯ ಚಿತ್ರರಂಗದ ಬೃಹತ್ ಸಿನಿಮಾಗಳಿಗೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್‌ಟಿಆರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಡ್ರ್ಯಾಗನ್’ ಸಿನಿಮಾಗೆ ಆಲಿಯಾ ಭಟ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಾಕಷ್ಟು ಹೈಲೈಟ್ ಆಗುತ್ತಿದೆ. ಪ್ರಶಾಂತ್ ನೀಲ್ ಅವರ ನಿರ್ದೇಶನದ ಸಿನಿಮಾದಲ್ಲಿ ಆಲಿಯಾ ಪ್ರಮುಖ ಪಾತ್ರ ಪೋಷಿಸಲಿದ್ದಾರೆ. ‘ಆರ್‍ಆರ್‍ಆರ್’ ನಂತರ ಎನ್‌ಟಿಆರ್ ಮತ್ತು ಆಲಿಯಾ ಮತ್ತೆ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಇದಷ್ಟೇ ಅಲ್ಲದೆ ಪ್ರಭಾಸ್ ಅಭಿನಯದ ‘ಕಲ್ಕಿ 2’ ಚಿತ್ರದಲ್ಲೂ ಆಲಿಯಾ ಭಟ್ ನಟಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಮೂಲಗಳ ಪ್ರಕಾರ ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇರಲಿದೆ. ಈ ಸುದ್ದಿ ಕೇಳಿ ಆಲಿಯಾ ಅಭಿಮಾನಿಗಳು ತೀವ್ರ ಕಾತುರದಿಂದ ಕಾಯುತ್ತಿದ್ದಾರೆ.

‘ಆರ್‍ಆರ್‍ಆರ್’ ಸಿನಿಮಾದಲ್ಲಿ ಆಲಿಯಾ ಭಟ್ ಅವರ ಸ್ಕ್ರೀನ್ ಟೈಮ್ ತುಂಬಾ ಕಡಿಮೆಯಿತ್ತು. ಆದರೂ ರಾಮ್ ಚರಣ್ ಮತ್ತು ಎನ್‌ಟಿಆರ್ ಜೊತೆ ನಟಿಸಿ ಸಾಕಷ್ಟು ಸದ್ದು ಮಾಡಿದ್ದರು. ಈಗ ಅವರಿಗೆ ದಕ್ಷಿಣದಲ್ಲಿ ಇನ್ನಷ್ಟು ಒಳ್ಳೆಯ ಪಾತ್ರಗಳು ಸಿಗುತ್ತಿವೆ. ಸದ್ಯದಲ್ಲೇ ಚಿತ್ರತಂಡಗಳಿಂದ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ: ‘ಡ್ರ್ಯಾಗನ್’ ಸಿನಿಮಾದಲ್ಲಿ ಎನ್‌ಟಿಆರ್ ಜೊತೆ ಶಾಹಿದ್ ಕಪೂರ್, ಆಲಿಯಾ ಭಟ್?

ಆಲಿಯಾ ಭಟ್ ಅವರು ಕೊನೆಯಾದಗಿ ನಟಿಸಿದ್ದು ‘ಆಲ್ಫಾ’ ಸಿನಿಮಾದಲ್ಲಿ. ಈ ಚಿತ್ರ ನೆಲಕಚ್ಚಿದೆ. ಯಶ್ ರಾಜ್ ಸ್ಪೈ ಯೂನಿವರ್ಸ್ ಅಡಿಯಲ್ಲಿ ಮೂಡಿ ಬಂದ ಈ ಸಿನಿಮಾ ಹೀನಾಯ ವಿಮರ್ಶೆಗಳನ್ನು ಪಡೆದುಕೊಂಡಿತ್ತು. ಈ ಚಿತ್ರ ನೆಗೆಟಿವ್ ವಿಮರ್ಶೆಯಿಂದ ಸಂಪೂರ್ಣವಾಗಿ ಸೋತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Loading...
Unable to load recommendations.
Follow Us