ಪ್ರೆಗ್ನೆನ್ಸಿ ಘೋಷಣೆಗೂ ಮೊದಲು ಆಲಿಯಾ ಭಟ್ ತೆಗೆದುಕೊಂಡಿದ್ರು ಒಂದು ಮಹತ್ವದ ನಿರ್ಧಾರ

ಪ್ರೆಗ್ನೆಂಟ್ ಆದ ನಂತರ ನಟನೆ ಸಾಧ್ಯವಿಲ್ಲ. ಮಗು ಜನಿಸಿದ ನಂತರ ಒಂದಷ್ಟು ಕಾಲ ಅದರ ಆರೈಕೆಯಲ್ಲಿ ತೊಡಗಿಕೊಳ್ಳಬೇಕಾಗುತ್ತದೆ. ಹೀಗಾಗಿ, ಒಂದಷ್ಟು ವರ್ಷ ಚಿತ್ರರಂಗದಿಂದ ಗ್ಯಾಪ್ ಆಗೋದು ಪಕ್ಕಾ.

ಪ್ರೆಗ್ನೆನ್ಸಿ ಘೋಷಣೆಗೂ ಮೊದಲು ಆಲಿಯಾ ಭಟ್ ತೆಗೆದುಕೊಂಡಿದ್ರು ಒಂದು ಮಹತ್ವದ ನಿರ್ಧಾರ
ರಣಬೀರ್-ಆಲಿಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 28, 2022 | 2:35 PM

ನಟ ರಣಬೀರ್ ಕಪೂರ್ (Ranbir Kapoor) ಹಾಗೂ ನಟಿ ಆಲಿಯಾ ಭಟ್ (Alia Bhatt) ದಂಪತಿ ಶೀಘ್ರವೇ ತಂದೆ-ತಾಯಿ ಆಗುತ್ತಿದ್ದಾರೆ. ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗುತ್ತಿರುವ ವಿಚಾರ ಸಾಕಷ್ಟು ಜನರಿಗೆ ಖುಷಿ ನೀಡಿದೆ. ಆದರೆ, ಆಲಿಯಾ ಭಟ್ ಇಷ್ಟು ಬೇಗ ಮಗು ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಆಲಿಯಾ ಪ್ರೆಗ್ನೆಂಟ್ ಎಂದು ಘೋಷಣೆ ಮಾಡುವುದಕ್ಕೂ ಮೊದಲು ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು.

ಆಲಿಯಾ ಭಟ್ ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಅನಾಯಾಸವಾಗಿ ಅವರಿಗೆ ಅವಕಾಶ ಸಿಕ್ಕಿತು. ಆದರೆ, ತಮ್ಮನ್ನು ತಾವು ಸಾಬೀತುಪಡಿಸಿಕೊಳ್ಳದಿದ್ದರೆ ಸ್ಟಾರ್​ ಕಿಡ್ ಆದರೂ ಸರಿ, ಸಾಮಾನ್ಯರಾದರೂ ಸರಿ ಚಿತ್ರರಂಗದಲ್ಲಿ ಅವರಿಗೆ ಅವಕಾಶಗಳು ಬರುವುದಿಲ್ಲ. ಸ್ಟಾರ್​ ಕಿಡ್ ಆದ ಹೊರತಾಗಿಯೂ ಆಲಿಯಾ ನಟನೆ ಮೂಲಕ ಗಮನ ಸೆಳೆದರು. ಕೇವಲ ಪಕ್ಕದ ಮನೆ ಹುಡುಗಿ ಪಾತ್ರ ಮಾಡದೆ, ‘ರಾಜಿ’, ‘ಗಂಗೂಬಾಯಿ ಕಾಠಿಯಾವಾಡಿ’ ಅಂತಹ ಮಹಿಳಾ ಪ್ರಧಾನ ಸಿನಿಮಾ ಮಾಡಿ ಸೈ ಎನಿಸಿಕೊಂಡರು. ಚಿತ್ರರಂಗದಲ್ಲಿ ಅವರಿಗೆ ಸಾಕಷ್ಟು ಆಫರ್​ಗಳು ಬರುತ್ತಿವೆ. ಆದರೆ, ಈಗ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡೋಕೆ ನಿರ್ಧರಿಸಿದ್ದಾರೆ. ಹೀಗಾಗಿ, ಕೆಲ ವರ್ಷ ನಟನೆಯಿಂದ ಗ್ಯಾಪ್​ ತೆಗೆದುಕೊಳ್ಳುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಪ್ರೆಗ್ನೆಂಟ್ ಆದ ನಂತರ ನಟನೆ ಸಾಧ್ಯವಿಲ್ಲ. ಮಗು ಜನಿಸಿದ ನಂತರ ಒಂದಷ್ಟು ಕಾಲ ಅದರ ಆರೈಕೆಯಲ್ಲಿ ತೊಡಗಿಕೊಳ್ಳಬೇಕಾಗುತ್ತದೆ. ಹೀಗಾಗಿ, ಒಂದಷ್ಟು ವರ್ಷ ಚಿತ್ರರಂಗದಿಂದ ಗ್ಯಾಪ್ ಆಗೋದು ಪಕ್ಕಾ. ಆಲಿಯಾ ಮದುವೆ ಆದ ನಂತರ ತಕ್ಷಣಕ್ಕೆ ಮಗು ಮಾಡಿಕೊಳ್ಳುವ ಆಲೋಚನೆಯಲ್ಲಿ ಇದ್ದ ಕಾರಣಕ್ಕೆ ಜ್ಯೂ.ಎನ್​ಟಿಆರ್​ 30ನೇ ಚಿತ್ರದಲ್ಲಿ ನಟಿಸಲು ಆಲಿಯಾ ನೋ ಎಂದಿದ್ದಾರೆ.

ಇದನ್ನೂ ಓದಿ
Image
‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’: ವೈರಲ್​ ಆಯ್ತು ಕಾಂಡೋಮ್ ಕಂಪನಿಯ ಟ್ವೀಟ್
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ನಟಿಸಿದ್ದರು. ಈ ಸಿನಿಮಾ ತೆರೆಗೆ ಬರುವ ಸಂದರ್ಭದಲ್ಲಿಯೇ ಹೊಸ ವದಂತಿ ಹುಟ್ಟಿತ್ತು. ಜ್ಯೂ.ಎನ್​ಟಿಆರ್ 30ನೇ ಚಿತ್ರಕ್ಕಾಗಿ ನಿರ್ದೇಶಕ ಕೊರಟಾಲ ಶಿವ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಆಲಿಯಾ ನಾಯಕಿ ಎನ್ನಲಾಗಿತ್ತು. ಆದರೆ, ಅವರು ಪ್ರೆಗ್ನೆನ್ಸಿ ಪ್ಲ್ಯಾನ್​ನಿಂದ ಈ ಚಿತ್ರದ ಆಫರ್​ ಕೈ ಬಿಟ್ಟಿದ್ದಾರೆ ಎಂದು ವರದಿ ಆಗಿದೆ.

ಆಲಿಯಾ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದ ಶೂಟಿಂಗ್ ಮುಗಿದಿದ್ದು, ಸೆಪ್ಟೆಂಬರ್​ನಲ್ಲಿ ಚಿತ್ರ ತೆರೆಗೆ ಬರಲಿದೆ. ‘ಡಾರ್ಲಿಂಗ್ಸ್’ ಚಿತ್ರದಲ್ಲಿ ಆಲಿಯಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರು ನಿರ್ಮಾಪಕಿಯೂ ಹೌದು. ‘ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ನಟಿಸುತ್ತಿದ್ದಾರೆ. ‘ಹಾರ್ಟ್ ಆಫ್​ ಸ್ಟೋನ್​’ ಹೆಸರಿನ ಹಾಲಿವುಡ್​ ಚಿತ್ರದ ಕೆಲಸದಲ್ಲೂ ಆಲಿಯಾ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ:  ‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’: ವೈರಲ್​ ಆಯ್ತು ಕಾಂಡೋಮ್ ಕಂಪನಿಯ ಟ್ವೀಟ್

 ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ