AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಮುಂಬೈ ಪ್ರೀಮಿಯರ್: ಸನ್ನಿ ಡಿಯೋಲ್ ಕಾಲು ಮುಟ್ಟಿ ನಮಸ್ಕರಿಸಿದ ರವಿ ದುಬೆ

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಮುಂಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಆಲಿಯಾ ಭಟ್ ಹಾಗೂ ನೀತು ಕಪೂರ್ ಆಗಮಿಸಿ ರಣಬೀರ್ ಕಪೂರ್‌ಗೆ ಶುಭ ಹಾರೈಸಿದರು. ಇನ್ನು ಸನ್ನಿ ಡಿಯೋಲ್ ಕಾಲು ಮುಟ್ಟಿ ನಮಸ್ಕರಿಸಿದ ಲಕ್ಷ್ಮಣನ ಪಾತ್ರಧಾರಿ ರವಿ ದುಬೆ ಅವರ ವಿನಮ್ರ ನಡೆ ವೀಕ್ಷಕರ ಮನಗೆದ್ದಿದೆ.

‘ರಾಮಾಯಣ’ ಮುಂಬೈ ಪ್ರೀಮಿಯರ್: ಸನ್ನಿ ಡಿಯೋಲ್ ಕಾಲು ಮುಟ್ಟಿ ನಮಸ್ಕರಿಸಿದ ರವಿ ದುಬೆ
ರಾಮಾಯಣ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 04, 2026 | 8:07 AM

Share

ಮುಖ್ಯಾಂಶಗಳು

  • ರಣಬೀರ್‌ಗೆ ಸಾಥ್ ನೀಡಿದ ಆಲಿಯಾ, ನೀತು
  • ಸ್ಟೈಲಿಶ್ ಆಗಿ ಮಿಂಚಿದ ಅತ್ತೆ-ಸೊಸೆ
  • ರೆಡ್ ಕಾರ್ಪೆಟ್‌ನಲ್ಲಿ ಹಿರಿಯರಿಗೆ ಗೌರವ

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ ಒನ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಮಹಾಕಾವ್ಯ ಆಧಾರಿತ ಚಿತ್ರದ ಮೇಲೆ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿದೆ. ಬಿಡುಗಡೆಗೂ ಮುನ್ನ ಚಿತ್ರತಂಡ ಮುಂಬೈನ ಲೋವರ್ ಪರೇಲ್‌ನಲ್ಲಿರುವ ಐಮ್ಯಾಕ್ಸ್ ಥಿಯೇಟರ್‌ನಲ್ಲಿ ಸಿನಿಮಾ ತಾರೆಯರಿಗಾಗಿ ವಿಶೇಷ ಪ್ರದರ್ಶನ ಆಯೋಜಿಸಿತ್ತು. ಶ್ರೀರಾಮನ ಪಾತ್ರದಲ್ಲಿ ನಟಿಸಿರುವ ರಣಬೀರ್ ಕಪೂರ್ ಅವರನ್ನು ಹುರಿದುಂಬಿಸಲು ಅವರ ಕುಟುಂಬಸ್ಥರು ಮತ್ತು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು.

ಈ ಪ್ರೀಮಿಯರ್ ಶೋಗೆ ನಟಿ ಆಲಿಯಾ ಭಟ್ ಹಾಗೂ ಅತ್ತೆ ನೀತು ಕಪೂರ್ ಜೊತೆಯಾಗಿ ಆಗಮಿಸಿ ಎಲ್ಲರ ಗಮನ ಸೆಳೆದರು. ಆಲಿಯಾ ಭಟ್ ನೀಲಿ ಬಣ್ಣದ ಸೀರೆಯಲ್ಲಿ ಅತ್ಯಂತ ಸುಂದರವಾಗಿ ಕಂಗೊಳಿಸಿದರು. ನೀತು ಕಪೂರ್ ಬ್ರೌನ್ ಬಣ್ಣದ ಮಾಡರ್ನ್ ಉಡುಪಿನಲ್ಲಿ ಮಿಂಚಿದರು. ರಣಬೀರ್ ಕಪೂರ್ ಕೂಡ ಮರೂನ್ ಕುರ್ತಾ ಧರಿಸಿ ಮಿಂಚಿದರು.

ಚಿತ್ರದಲ್ಲಿ ಹನುಮಂತನ ಪಾತ್ರದಲ್ಲಿ ನಟಿಸಿರುವ ಬಾಲಿವುಡ್ ಹಿರಿಯ ನಟ ಸನ್ನಿ ಡಿಯೋಲ್ ಶ್ವೇತವರ್ಣದ ಸೂಟ್ ಧರಿಸಿ ರೆಡ್ ಕಾರ್ಪೆಟ್ ಮೇಲೆ ಆಗಮಿಸಿದರು. ಈ ವೇಳೆ ಲಕ್ಷ್ಮಣನ ಪಾತ್ರ ಮಾಡಿರುವ ರವಿ ದುಬೆ ಅವರು ಸನ್ನಿ ಡಿಯೋಲ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ರವಿ ದುಬೆ ಅವರ ಈ ಗೌರವದ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಪ್ರೀಮಿಯರ್ ಪ್ರದರ್ಶನದಲ್ಲಿ ಸಿನಿಮಾದ ಇತರ ಪ್ರಮುಖ ನಟರಾದ ವಿವೇಕ್ ಒಬೆರಾಯ್, ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್ ಹಾಗೂ ಲಾರಾ ದತ್ತ ತಮ್ಮ ಕುಟುಂಬಸ್ಥರೊಂದಿಗೆ ಭಾಗವಹಿಸಿದ್ದರು. ನಿರ್ದೇಶಕ ನಿತೇಶ್ ತಿವಾರಿ ಅವರು ಹೆಂಡತಿ ಅಶ್ವಿನ್ ಅಯ್ಯರ್ ತಿವಾರಿ ಹಾಗೂ ಮಕ್ಕಳೊಂದಿಗೆ ಆಗಮಿಸಿದ್ದರು.

ಇದನ್ನೂ ಓದಿ: ‘ತಲೆಕೆಡಿಸಿಕೊಳ್ಳಲ್ಲ’; ‘ರಾಮಾಯಣ’ ವಿಮರ್ಶೆ ಮತ್ತು ಟ್ರೋಲಿಂಗ್‌ಗೆ ರಣಬೀರ್ ಕಪೂರ್ ಉತ್ತರ

ರಣಬೀರ್ ಕಪೂರ್ ಅವರ ಅತ್ತೆ ಸೋನಿ ರಜ್ದಾನ್ ಹಾಗೂ ಆಲಿಯಾ ಸಹೋದರಿ ಶಾಹೀನ್ ಭಟ್ ಕೂಡ ಪ್ರದರ್ಶನಕ್ಕೆ ಸಾಕ್ಷಿಯಾದರು. ರಣಬೀರ್ ಸಹೋದರರಾದ ಆದರ್ ಜೈನ್ ಮತ್ತು ಅರ್ಮಾನ್ ಜೈನ್ ತಮ್ಮ ಪತ್ನಿಯರೊಂದಿಗೆ ಆಗಮಿಸಿ ಚಿತ್ರಕ್ಕೆ ಶುಭ ಹಾರೈಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಕಾಮರ್ಸ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಫ್ರೀಲ್ಯಾನ್ಸಿಂಗ್ ಮಾಡುತ್ತಿದ್ದು, ಟಿವಿ9 ಕನ್ನಡದಲ್ಲಿಯೂ ಬರೆಯುತ್ತಿದ್ದೇನೆ.

Read More
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ