Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

Alia Bhatt | Ranbir Kapoor: ಆಲಿಯಾ ಭಟ್​ ತಾಯಿ ಆಗುತ್ತಿದ್ದಾರೆ. ವಿಶೇಷ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಈ ವಿಚಾರವನ್ನು ಖಚಿತಪಡಿಸಿದ್ದಾರೆ.

Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
ರಣಬೀರ್ ಕಪೂರ್, ಆಲಿಯಾ ಭಟ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 27, 2022 | 12:14 PM

ನಟಿ ಆಲಿಯಾ ಭಟ್​ (Alia Bhatt) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್​ (Alia Bhatt Pregnant) ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಎರಡೂವರೆ ತಿಂಗಳ ಹಿಂದೆ, ಅಂದರೆ ಏಪ್ರಿಲ್​ 14ರಂದು ಪ್ರಿಯಕರ ರಣಬೀರ್​ ಕಪೂರ್​ (Ranbir Kapoor) ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಾವು ತಾಯಿ ಆಗುತ್ತಿರುವ ಬಗ್ಗೆ ಅವರು ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ. ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಶುಭ ಕೋರಿದ್ದಾರೆ.

ಬಾಲಿವುಡ್​ನಲ್ಲಿ ಆಲಿಯಾ ಭಟ್​ ಅವರು ಸಖತ್​ ಬೇಡಿಕೆ ಹೊಂದಿದ್ದಾರೆ. ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಇಷ್ಟೆಲ್ಲ ಬೇಡಿಕೆ ಇರುವಾಗಲೇ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಈಗ ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್​ ಇನ್ನಷ್ಟು ಅಚ್ಚರಿಪಟ್ಟಿದ್ದಾರೆ.

ಇದನ್ನೂ ಓದಿ
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?
Image
ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

ಚಿತ್ರರಂಗದಲ್ಲಿ ಬ್ಯುಸಿ ಇರುವಾಗ ಸಾಮಾನ್ಯವಾಗಿ ನಟ-ನಟಿಯರು ಮದುವೆ-ಮಕ್ಕಳ ಬಗ್ಗೆ ಆಲೋಚನೆ ಮಾಡುವುದಿಲ್ಲ. ಆದರೆ ಆಲಿಯಾ ಭಟ್​ ಅವರು ಈ ವಿಚಾರದಲ್ಲಿ ಭಿನ್ನವಾಗಿ ನಿಂತಿದ್ದಾರೆ. ಈಗ ಅವರು ಪ್ರೆಗ್ನೆಂಟ್​ ಆಗಿರುವುದರಿಂದ ಸಹಜವಾಗಿಯೇ ಒಂದಷ್ಟು ಸಮಯ ನಟನೆಯಿಂದ ದೂರ ಉಳಿದುಕೊಳ್ಳಬೇಕಿದೆ. ಬಳಿಕ ಮಗುವಿನ ಆರೈಕೆಗೆ ಗಮನ ಹರಿಸಬೇಕಾಗುತ್ತದೆ. ಈ ಎಲ್ಲ ಕಾರಣಗಳಿಂದಾಗಿ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುವುದು ಕೊಂಚ ತಡವಾಗಬಹುದು.

ಆಲಿಯಾ ಭಟ್​ ನಟಿಸಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಮತ್ತು ‘ಆರ್​ಆರ್​ಆರ್​’ ಚಿತ್ರಗಳು ಈ ವರ್ಷ ಬಿಡುಗಡೆ ಆಗಿ ಸೂಪರ್​ ಹಿಟ್​ ಎನಿಸಿಕೊಂಡವು. ಈಗ ಅವರು ನಟಿಸಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಕೂಡ ರಿಲೀಸ್​ಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಅವರಿಗೆ ರಣಬೀರ್​ ಕಪೂರ್​ ಜೋಡಿಯಾಗಿದ್ದಾರೆ. ಇತ್ತೀಚೆಗಷ್ಟೇ ಇದರ ಟ್ರೇಲರ್​ ಬಿಡುಗಡೆ ಆಗಿದೆ. ಸೆಪ್ಟೆಂಬರ್​ 9ರಂದು ‘ಬ್ರಹ್ಮಾಸ್ತ್ರ’ ರಿಲೀಸ್​ ಆಗಲಿದೆ.

ಇದನ್ನೂ ಓದಿ: ​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​

ಬಿಳಿ ಬಣ್ಣದ ಬಟ್ಟೆಯಲ್ಲಿ ಮಿಂಚಿದ ಆಲಿಯಾ ಭಟ್; ಇಲ್ಲಿದೆ ಫೋಟೋ

Published On - 11:12 am, Mon, 27 June 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ