ಮದುವೆ ದಿನಾಂಕ ಮುಂದೂಡಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಈ ನಿರ್ಧಾರಕ್ಕಿದೆ ಮುಖ್ಯ ಕಾರಣ

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಭಟ್​ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅತ್ತ, ರಣಬೀರ್ ಕಪೂರ್ ಕೂಡ ಅನೇಕ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಮದುವೆ ದಿನಾಂಕ ಮುಂದೂಡಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಈ ನಿರ್ಧಾರಕ್ಕಿದೆ ಮುಖ್ಯ ಕಾರಣ
ರಣಬೀರ್​ ಕಪೂರ್​, ಆಲಿಯಾ ಭಟ್​
Follow us
| Updated By: ಮದನ್​ ಕುಮಾರ್​

Updated on: Nov 10, 2021 | 1:40 PM

ನಟಿ ಆಲಿಯಾ ಭಟ್​ (Alia Bhatt) ಮತ್ತು ನಟ ರಣಬೀರ್​ ಕಪೂರ್​ (Ranbir Kapoor ) ಶೀಘ್ರದಲ್ಲೇ ಮದುವೆ ಆಗುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿಬರುತ್ತಲೇ ಇದೆ. ಈ ವರ್ಷ ಡಿಸೆಂಬರ್​ನಲ್ಲಿ ಈ ಜೋಡಿ ಹಸೆಮಣೆ ಏರಿಲಿದೆ ಎನ್ನಲಾಗಿತ್ತು. ಆದರೆ ಈಗ ಹೊಸದೊಂದು ಸುದ್ದಿ ಹರಡಿದೆ. ಸದ್ಯಕ್ಕೆ ಆಲಿಯಾ ಮತ್ತು ರಣಬೀರ್​ ಮದುವೆ ದಿನಾಂಕ ಮುಂದೂಡಿಕೊಂಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಎರಡು ಮುಖ್ಯ ಕಾರಣಗಳಿವೆ. ಈ ಬಗ್ಗೆ ಅವರ ಆಪ್ತ ಮೂಲಗಳು ಮಾಧ್ಯಮವೊಂದಕ್ಕೆ ಮಾಹಿತಿ ಬಿಟ್ಟುಕೊಟ್ಟಿವೆ. ಆದರೆ ಆಲಿಯಾ ಆಗಲಿ, ರಣಬೀರ್​ ಆಗಲಿ ಯಾವುದೇ ಹೇಳಿಕೆ ನೀಡಿಲ್ಲ.

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅನೇಕ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅತ್ತ, ರಣಬೀರ್​ ಕಪೂರ್​ ಕೂಡ ಈಗಾಗಲೇ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡು ಕಾರ್ಯನಿರತರಾಗಿದ್ದಾರೆ. ಒಪ್ಪಿಕೊಂಡಿರುವ ಎಲ್ಲ ಸಿನಿಮಾಗಳ ಕೆಲಸಗಳನ್ನು ಮುಗಿಸಲು ಈ ಜೋಡಿಗೆ ಸ್ವಲ್ಪ ಸಮಯ ಹಿಡಿಯಲಿದೆ. ಹಾಗಾಗಿ ಈ ವರ್ಷ ಡಿಸೆಂಬರ್​ ಬದಲಿಗೆ, 2022ರ ಏಪ್ರಿಲ್​​ ತಿಂಗಳಲ್ಲಿ ಸಪ್ತಪದಿ ತುಳಿಯಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ದೀಪಾವಳಿ ಹಬ್ಬದಲ್ಲಿ ಆಲಿಯಾ-ರಣಬೀರ್​ ವಿಶೇಷ ಫೋಟೋ:

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಆಲಿಯಾ ಭಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿತ್ತು. ರಣಬೀರ್​ ಕಪೂರ್​ ಮತ್ತು ಆಲಿಯಾ ಪ್ರೀತಿಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಅವರು ಸಾರ್ವಜನಿಕವಾಗಿ ಆ ಬಗ್ಗೆ ಮಾತನಾಡುವುದು ಕಡಿಮೆ. ಹಾಗಂತ ಕದ್ದು ಮುಚ್ಚಿ ಈ ಜೋಡಿ ಹಕ್ಕಿಗಳು ಓಡಾಡುತ್ತಿಲ್ಲ. ಅವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಅನೇಕ ಫೋಟೋಗಳು ಹರಿದಾಡುತ್ತಿವೆ. ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಂಡಿಲ್ಲ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಲಿಯಾ ಭಟ್​ ಇನ್ನೊಂದು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದರು. ಬಹಳ ಸಂಭ್ರಮದಿಂದ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ದೀಪಾವಳಿ ಆಚರಿಸಿದ್ದರು. ಇಬ್ಬರು ಪರಸ್ಪರ ತಬ್ಬಿಕೊಂಡು ಕ್ಯಾಮೆರಾಗೆ ಪೋಸ್​ ಕೂಡ ನೀಡಿದ್ದರು. ‘ಒಂದಷ್ಟು ಪ್ರೀತಿ.. ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಆ ಫೋಟೋಗೆ ಆಲಿಯಾ ಭಟ್​ ಕ್ಯಾಪ್ಷನ್​ ನೀಡಿದ್ದರು. ಇನ್ನೊಂದು ಫೋಟೋದಲ್ಲಿ ದೀಪಗಳನ್ನು ಹಿಡಿದುಕೊಂಡಿರುವ ಅವರು, ‘ಒಂದಷ್ಟು ಬೆಳಕು.. ಹ್ಯಾಪಿ ದೀಪಾವಳಿ’ ಎಂದು ಕ್ಯಾಪ್ಷನ್​ ನೀಡಿದ್ದರು.

ಈ ಫೋಟೋ ನೋಡಿದ ಬಳಿಕ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ಗೆ ಎಲ್ಲರೂ ಹಬ್ಬದ ಶುಭಾಶಯ ಕೋರಿದ್ದರು. ಅಲ್ಲದೇ, ಮದುವೆ ಯಾವಾಗ ಎಂದು ಪ್ರಶ್ನೆ ಮಾಡಿದ್ದರು. ಅದಕ್ಕೆ ಈ ಜೋಡಿ ಹಕ್ಕಿಗಳಿಂದ ಉತ್ತರ ಸಿಕ್ಕಿಲ್ಲ.

ಇದನ್ನೂ ಓದಿ:

ರಣಬೀರ್​ ಕಪೂರ್​ ಹುಟ್ಟುಹಬ್ಬ: ಆಲಿಯಾ ಭಟ್​ ಜೊತೆ ಮದುವೆಗೆ ಜೋರಾಗಿದೆ ತಯಾರಿ

ಅಕ್ಕನ ಬಟ್ಟೆ ಕದ್ದು ಪ್ರೇಯಸಿಗೆ ಗಿಫ್ಟ್​ ಮಾಡುತ್ತಿದ್ದ ರಣಬೀರ್​ ಕಪೂರ್​; ಎಲ್ಲರ ಎದುರು ಸತ್ಯ ಬಾಯ್ಬಿಟ್ಟ ರಿಧಿಮಾ

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ