Alia Bhatt: ಮಾನಸಿಕವಾಗಿ ರಣಬೀರ್​ ಜತೆ ನನ್ನ ಮದುವೆ ಆಗಿದೆ ಎಂದ ಆಲಿಯಾ ಭಟ್​  

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅನೇಕ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅತ್ತ, ರಣಬೀರ್​ ಕಪೂರ್​ ಕೂಡ ಈಗಾಗಲೇ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡು ಕಾರ್ಯನಿರತರಾಗಿದ್ದಾರೆ.

Alia Bhatt: ಮಾನಸಿಕವಾಗಿ ರಣಬೀರ್​ ಜತೆ ನನ್ನ ಮದುವೆ ಆಗಿದೆ ಎಂದ ಆಲಿಯಾ ಭಟ್​  
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 11, 2022 | 1:56 PM

ರಣಬೀರ್​ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ (Alia Bhatt)​ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವಿಚಾರವನ್ನು ಅವರು ಈಗ ಗುಟ್ಟಾಗಿ ಇಟ್ಟಿಲ್ಲ. ಮದುವೆ ಆಗುವ ಆಲೋಚನೆಯಲ್ಲಿರುವ ಈ ಜೋಡಿ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಆಲಿಯಾ ಈ ಬಗ್ಗೆ ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ರಣಬೀರ್​ ಜತೆಗೆ ಕಳೆದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ (Social Media) ಅನೇಕ ಬಾರಿ ಹಂಚಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿ ಈಗಾಗಲೇ ಮದುವೆ ಆಗಿರಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಇವರ ವಿವಾಹ ಮುಂದೂಡಲ್ಪಡುತ್ತಲೇ ಇದೆ. ಈಗ ಆಲಿಯಾ ಅಚ್ಚರಿ ವಿಚಾರ ಒಂದನ್ನು ಹೇಳಿಕೊಂಡಿದ್ದಾರೆ. ಮಾನಸಿಕವಾಗಿ ಈಗಾಗಲೇ ರಣಬೀರ್​ ಅವರನ್ನು ಆಲಿಯಾ ವಿವಾಹ ಆಗಿದ್ದಾರೆ! ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಎನ್​ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಆಲಿಯಾ ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ರಣಬೀರ್​ ಅವರನ್ನು ಈಗಾಗಲೇ ನನ್ನ ಮನಸ್ಸಿನಲ್ಲಿ ಮದುವೆ ಆಗಿದ್ದೇನೆ. ಯಾವುದೇ ಘಟನೆ ಸಂಭವಿಸಿದರೂ ಅದಕ್ಕೊಂದು ಕಾರಣ ಇರುತ್ತದೆ. ಸಮಯ ಕೂಡಿ ಬಂದಾಗ ನಮ್ಮ ಮದುವೆ ಆಗುತ್ತದೆ’ ಎಂದಿದ್ದಾರೆ ಆಲಿಯಾ​.

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅನೇಕ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅತ್ತ, ರಣಬೀರ್​ ಕಪೂರ್​ ಕೂಡ ಈಗಾಗಲೇ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡು ಕಾರ್ಯನಿರತರಾಗಿದ್ದಾರೆ. ಒಪ್ಪಿಕೊಂಡಿರುವ ಎಲ್ಲ ಸಿನಿಮಾಗಳ ಕೆಲಸಗಳನ್ನು ಮುಗಿಸಲು ಈ ಜೋಡಿಗೆ ಸ್ವಲ್ಪ ಸಮಯ ಹಿಡಿಯಲಿದೆ. ಹಾಗಾಗಿ ಕಳೆದ ವರ್ಷ ಇವರು ಮದುವೆ ಆಗಿಲ್ಲ. ಈ ವರ್ಷ ಈ ಜೋಡಿ ಸಪ್ತಪದಿ ತುಳಿಯಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಅವರು ಹೇಳಿಕೊಂಡಿಲ್ಲ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್​ನಲ್ಲಿತ್ತು. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆದಿದೆ.   ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ಅವರು ಸೀತಾ ಎಂಬ ಪಾತ್ರವನ್ನು ನಿಭಾಯಿಸಿದ್ದಾರೆ. ಆದರೆ ಅದೊಂದು ಚಿಕ್ಕ ಪಾತ್ರ ಎಂಬ ಮಾಹಿತಿ ಈಗ ತಿಳಿದುಬಂದಿದೆ. ಆ ಬಗ್ಗೆ ರಾಜಮೌಳಿ ಕೂಡ ಯಾವುದೇ ಮುಚ್ಚುಮರೆ ಮಾಡಿಲ್ಲ. ‘ಆಲಿಯಾ ಮತ್ತು ಅಜಯ್​ ದೇವಗನ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅದನ್ನು ಮುಚ್ಚಿಟ್ಟು ನಾನು ಪ್ರೇಕ್ಷಕರಿಗೆ ಮೋಸ ಮಾಡುವುದಿಲ್ಲ. ಆದರೆ ಆ ಪಾತ್ರಗಳಿಗೆ ಹೀರೋಗಳಷ್ಟೇ ಮಹತ್ವ ಇದೆ’ ಎಂದು ರಾಜಮೌಳಿ ಹೇಳಿದ್ದರು.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ-ಆಲಿಯಾ ಭಟ್​; ಇದರ ಹಿಂದಿದೆ ಅಚ್ಚರಿಯ ಕಥೆ 

80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ