ಪ್ರೀತಿ ಒಪ್ಪಿಕೊಂಡ ಆಲಿಯಾ ಭಟ್​-ರಣಬೀರ್​ ಕಪೂರ್​; ದೀಪಾವಳಿ ಹಬ್ಬದಂದು ಗುಡ್​ ನ್ಯೂಸ್​

ಈ ಫೋಟೋ ನೋಡಿದ ಬಳಿಕ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ಗೆ ಎಲ್ಲರೂ ದೀಪಾವಳಿ ಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅಲ್ಲದೇ, ಮದುವೆ ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರೀತಿ ಒಪ್ಪಿಕೊಂಡ ಆಲಿಯಾ ಭಟ್​-ರಣಬೀರ್​ ಕಪೂರ್​; ದೀಪಾವಳಿ ಹಬ್ಬದಂದು ಗುಡ್​ ನ್ಯೂಸ್​
ರಣಬೀರ್​ ಕಪೂರ್​, ಆಲಿಯಾ ಭಟ್​
Follow us
| Edited By: ಮದನ್​ ಕುಮಾರ್​

Updated on: Nov 05, 2021 | 3:31 PM

ದೀಪದ ಹಬ್ಬದ ಈ ಶುಭ ಸಂದರ್ಭದಲ್ಲಿ ನಟಿ ಆಲಿಯಾ ಭಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ರಣಬೀರ್​ ಕಪೂರ್​ ಜೊತೆ ಆಲಿಯಾ ಪ್ರೀತಿಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಅವರು ಸಾರ್ವಜನಿಕವಾಗಿ ಆ ಬಗ್ಗೆ ಮಾತನಾಡುವುದು ಕಡಿಮೆ. ಹಾಗಂತ ಕದ್ದು ಮುಚ್ಚಿ ಈ ಜೋಡಿ ಹಕ್ಕಿಗಳು ಓಡಾಡುತ್ತಿಲ್ಲ. ಅವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಅನೇಕ ಫೋಟೋಗಳು ಹರಿದಾಡುತ್ತಿವೆ. ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಂಡಿಲ್ಲ. ಈಗ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಆಲಿಯಾ ಭಟ್​ ಇನ್ನೊಂದು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

ಬಹಳ ಸಂಭ್ರಮದಿಂದ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ದೀಪಾವಳಿ ಆಚರಿಸಿದ್ದಾರೆ. ಇಬ್ಬರು ಪರಸ್ಪರ ತಬ್ಬಿಕೊಂಡು ಕ್ಯಾಮೆರಾಗೆ ಪೋಸ್​ ಕೂಡ ನೀಡಿದ್ದಾರೆ. ‘ಒಂದಷ್ಟು ಪ್ರೀತಿ.. ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಆ ಫೋಟೋಗೆ ಆಲಿಯಾ ಭಟ್​ ಕ್ಯಾಪ್ಷನ್​ ನೀಡಿದ್ದಾರೆ. ಇನ್ನೊಂದು ಫೋಟೋದಲ್ಲಿ ದೀಪಗಳನ್ನು ಹಿಡಿದುಕೊಂಡಿರುವ ಅವರು, ‘ಒಂದಷ್ಟು ಬೆಳಕು.. ಹ್ಯಾಪಿ ದೀಪಾವಳಿ’ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಈ ಫೋಟೋ ನೋಡಿದ ಬಳಿಕ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ಗೆ ಎಲ್ಲರೂ ಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅಲ್ಲದೇ, ಮದುವೆ ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಈ ಜೋಡಿ ಹಕ್ಕಿಗಳಿಂದ ಉತ್ತರ ಸಿಕ್ಕಿಲ್ಲ. ಇಬ್ಬರ ಮದುವೆ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಇಬ್ಬರು ಹಸೆ ಮಣೆ ಏರಬೇಕಿತ್ತು. ಆದರೆ ಲಾಕ್​ಡೌನ್​ ಕಾರಣದಿಂದ ಮದುವೆ ದಿನಾಂಕ ಮುಂದಕ್ಕೆ ಹೋಗಿದೆ.

ಸೆ.28ರಂದು ರಣಬೀರ್​ ಕಪೂರ್​ ಜನ್ಮದಿನ. ಅಂದು ಅವರು ಆಲಿಯಾ ಜೊತೆಗೆ ರಾಜಸ್ಥಾನಕ್ಕೆ ತೆರಳಿದ್ದರು. ಬರ್ತ್​ಡೇ ಪಾರ್ಟಿ ಜೊತೆಯಲ್ಲಿ ಮದುವೆಗೆ ಸ್ಥಳ ನೋಡಿಕೊಂಡು ಬರುವ ಉದ್ದೇಶದಿಂದಲೇ ಅವರು ರಾಜಸ್ಥಾನಕ್ಕೆ ಹೋಗಿದ್ದರು ಎಂದು ಸುದ್ದಿ ಆಗಿತ್ತು. ಆದರೆ ಆ ಬಗ್ಗೆ ಈ ಪ್ರಯಣಪಕ್ಷಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆಲಿಯಾ ಭಟ್​ ಅವರು ಸದ್ಯ ‘ಆರ್​ಆರ್​ಆರ್​’, ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ನಟಿಸಿದ್ದು ಆ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಜೊತೆಯಾಗಿ ಅಭಿನಯಿಸಿದ್ದಾರೆ. ವೃತ್ತಿಜೀವನದಲ್ಲಿ ಇಬ್ಬರೂ ಯಶಸ್ಸಿನ ಉತ್ತುಂಗದಲ್ಲಿದ್ದು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಇದನ್ನೂ ಓದಿ:

Farhan Akhtar: ದೀಪಾವಳಿ ಆಚರಿಸಿದ ಫರ್ಹಾನ್​ ಅಖ್ತರ್​ ವಿರುದ್ಧ ದ್ವೇಷ ಕಾರುತ್ತಿರುವ ಒಂದು ವರ್ಗದ ನೆಟ್ಟಿಗರು

ಸೈಫ್​ ಅಲಿ ಖಾನ್​ ಮನೆಯಲ್ಲಿ ದೀಪಾವಳಿ; ಕರೀನಾಗೆ ಪೋಸ್​ ನೀಡಲು ಅಡ್ಡಿಪಡಿಸಿದ ಮಗ ಜೇಹ್​

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ