‘ಗಂಗೂಬಾಯಿ ಕಾಠಿಯಾವಾಡಿ’ ರಿಲೀಸ್​ ದಿನಾಂಕ ಘೋಷಣೆ; ಕೊವಿಡ್​ ಮಧ್ಯೆ ಗೆಲ್ಲಲಿದೆಯೇ ಆಲಿಯಾ ಚಿತ್ರ?

‘ಗಂಗೂಬಾಯಿ ಕಾಠಿಯಾವಾಡಿ’ ರಿಲೀಸ್​ ದಿನಾಂಕ ಘೋಷಣೆ; ಕೊವಿಡ್​ ಮಧ್ಯೆ ಗೆಲ್ಲಲಿದೆಯೇ ಆಲಿಯಾ ಚಿತ್ರ?
ಆಲಿಯಾ ಭಟ್​

ಸಿನಿಮಾ 2020ರ ಮಾರ್ಚ್​ನಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಬರೋಬ್ಬರಿ 2 ವರ್ಷ ತಡವಾಗಿದೆ. ಈಗ ನಿರ್ಮಾಪಕರು ಸಿನಿಮಾ ರಿಲೀಸ್​ ಮಾಡಲು ಮುಂದಾಗಿದ್ದಾರೆ.

TV9kannada Web Team

| Edited By: Rajesh Duggumane

Jan 28, 2022 | 4:02 PM

ಕೊವಿಡ್​ ಎರಡನೇ ಅಲೆ ತಣ್ಣಗಾಗುತ್ತಿದ್ದಂತೆ ಕಾಣಿಸಿಕೊಂಡಿದ್ದು ಮೂರನೇ ಅಲೆ (Covid Third Wave) . ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ಮುಂದೂಡಲ್ಪಟ್ಟಿದೆ. ಆದರೆ, ಕೊವಿಡ್​ ಮೂರನೇ ಅಲೆ ಅಷ್ಟಾಗಿ ಪ್ರಭಾವ ಬೀರುತ್ತಿಲ್ಲ. ಬಹುತೇಕರಿಗೆ ಲಸಿಕೆ ಸಿಕ್ಕಿರುವುದರಿಂದ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹೀಗಾಗಿ, ಸ್ಟಾರ್​ ಸಿನಿಮಾಗಳು ಮತ್ತೆ ಹೊಸ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ಆಲಿಯಾ ಭಟ್​ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಹೊಸ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಸಿನಿಮಾ 2020ರ ಮಾರ್ಚ್​ನಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಬರೋಬ್ಬರಿ 2 ವರ್ಷ ತಡವಾಗಿದೆ. ಈಗ ನಿರ್ಮಾಪಕರು ಸಿನಿಮಾ ರಿಲೀಸ್​ ಮಾಡಲು ಮುಂದಾಗಿದ್ದಾರೆ.

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು. ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಮುಂದಿನ ತಿಂಗಳು ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಮಾರ್ಚ್​ 18 ಅಥವಾ ಏಪ್ರಿಲ್​ 28ರಂದು ಸಿನಿಮಾ ತೆರೆಗೆ ಬರುತ್ತಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ಅವರು ಸೀತಾ ಎಂಬ ಪಾತ್ರವನ್ನು ನಿಭಾಯಿಸಿದ್ದಾರೆ. ಆದರೆ ಅದೊಂದು ಚಿಕ್ಕ ಪಾತ್ರ ಎಂಬ ಮಾಹಿತಿ ಈಗ ತಿಳಿದುಬಂದಿದೆ. ಆ ಬಗ್ಗೆ ರಾಜಮೌಳಿ ಕೂಡ ಯಾವುದೇ ಮುಚ್ಚುಮರೆ ಮಾಡಿಲ್ಲ. ‘ಆಲಿಯಾ ಮತ್ತು ಅಜಯ್​ ದೇವಗನ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅದನ್ನು ಮುಚ್ಚಿಟ್ಟು ನಾನು ಪ್ರೇಕ್ಷಕರಿಗೆ ಮೋಸ ಮಾಡುವುದಿಲ್ಲ. ಆದರೆ ಆ ಪಾತ್ರಗಳಿಗೆ ಹೀರೋಗಳಷ್ಟೇ ಮಹತ್ವ ಇದೆ’ ಎಂದು ರಾಜಮೌಳಿ ಹೇಳಿದ್ದರು.

‘ತೆರೆ ಮೇಲೆ ಒಂದು ಪಾತ್ರ ಎಷ್ಟು ಹೊತ್ತು ಬರುತ್ತದೆ ಎಂಬುದು ಮುಖ್ಯವಲ್ಲ. ಆ ಪಾತ್ರಕ್ಕೆ ಎಷ್ಟು ಮಹತ್ವ ಇದೆ ಎಂಬುದು ಮುಖ್ಯವಾಗುತ್ತದೆ. ಆ ದೃಷ್ಟಿಯಿಂದ ಆಲಿಯಾ ಭಟ್​ ಮತ್ತು ಅಜಯ್​ ದೇವಗನ್​ ನಿಭಾಯಿಸಿರುವ ಈ ಪಾತ್ರಗಳಿಗೆ ತುಂಬ ಪ್ರಾಮುಖ್ಯತೆ ಇದೆ. ಈ ಸಿನಿಮಾದ ಆತ್ಮವೇ ಅಜಯ್​ ದೇವಗನ್​ ಪಾತ್ರ. ಇಬ್ಬರು ಹೀರೋಗಳನ್ನು ಬ್ಯಾಲೆನ್ಸ್​ ಮಾಡುವಂತಹ ಪಾತ್ರ ಆಲಿಯಾ ಭಟ್​ ಅವರದ್ದು’ ಎಂದು ರಾಜಮೌಳಿ ಹೇಳಿದ್ದರು.

ಇದನ್ನೂ ಓದಿ: Alia Bhatt: ಜ್ಯೂ.ಎನ್​ಟಿಆರ್ ಜತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಆಲಿಯಾ ಭಟ್?

Alia Bhatt: ಸಿಂಪಲ್ ಲುಕ್​ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು

Follow us on

Related Stories

Most Read Stories

Click on your DTH Provider to Add TV9 Kannada