ಕೊವಿಡ್ ಎರಡನೇ ಅಲೆ ತಣ್ಣಗಾಗುತ್ತಿದ್ದಂತೆ ಕಾಣಿಸಿಕೊಂಡಿದ್ದು ಮೂರನೇ ಅಲೆ (Covid Third Wave) . ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸ್ಟಾರ್ ಸಿನಿಮಾಗಳು ರಿಲೀಸ್ ಡೇಟ್ಮುಂದೂಡಲ್ಪಟ್ಟಿದೆ. ಆದರೆ, ಕೊವಿಡ್ ಮೂರನೇ ಅಲೆ ಅಷ್ಟಾಗಿ ಪ್ರಭಾವ ಬೀರುತ್ತಿಲ್ಲ. ಬಹುತೇಕರಿಗೆ ಲಸಿಕೆ ಸಿಕ್ಕಿರುವುದರಿಂದ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹೀಗಾಗಿ, ಸ್ಟಾರ್ ಸಿನಿಮಾಗಳು ಮತ್ತೆ ಹೊಸ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ಆಲಿಯಾ ಭಟ್ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಹೊಸ ರಿಲೀಸ್ ದಿನಾಂಕ ಘೋಷಣೆ ಮಾಡಿದೆ. ಸತತವಾಗಿ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಸಿನಿಮಾ 2020ರ ಮಾರ್ಚ್ನಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಬರೋಬ್ಬರಿ 2 ವರ್ಷ ತಡವಾಗಿದೆ. ಈಗ ನಿರ್ಮಾಪಕರು ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದಾರೆ.
ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್ ತಗ್ಗಬಹುದು. ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್ ಮಾಡಲು ಮುಂದೆ ಬಂದಿದೆ. ಮುಂದಿನ ತಿಂಗಳು ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿದೆ.
Witness her reign in cinemas near you on 25th February 2022. ?#GangubaiKathiawadi#SanjayLeelaBhansali @ajaydevgn @aliaa08 @prerna982 @jayantilalgada @PenMovies @saregamaglobal pic.twitter.com/SJ5myx1X3u
— BhansaliProductions (@bhansali_produc) January 28, 2022
ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾದಲ್ಲಿ ಆಲಿಯಾ ಭಟ್ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ. ಮಾರ್ಚ್ 18 ಅಥವಾ ಏಪ್ರಿಲ್ 28ರಂದು ಸಿನಿಮಾ ತೆರೆಗೆ ಬರುತ್ತಿದೆ.
‘ಆರ್ಆರ್ಆರ್’ ಸಿನಿಮಾದಲ್ಲಿ ಆಲಿಯಾ ಭಟ್ ಅವರು ಸೀತಾ ಎಂಬ ಪಾತ್ರವನ್ನು ನಿಭಾಯಿಸಿದ್ದಾರೆ. ಆದರೆ ಅದೊಂದು ಚಿಕ್ಕ ಪಾತ್ರ ಎಂಬ ಮಾಹಿತಿ ಈಗ ತಿಳಿದುಬಂದಿದೆ. ಆ ಬಗ್ಗೆ ರಾಜಮೌಳಿ ಕೂಡ ಯಾವುದೇ ಮುಚ್ಚುಮರೆ ಮಾಡಿಲ್ಲ. ‘ಆಲಿಯಾ ಮತ್ತು ಅಜಯ್ ದೇವಗನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅದನ್ನು ಮುಚ್ಚಿಟ್ಟು ನಾನು ಪ್ರೇಕ್ಷಕರಿಗೆ ಮೋಸ ಮಾಡುವುದಿಲ್ಲ. ಆದರೆ ಆ ಪಾತ್ರಗಳಿಗೆ ಹೀರೋಗಳಷ್ಟೇ ಮಹತ್ವ ಇದೆ’ ಎಂದು ರಾಜಮೌಳಿ ಹೇಳಿದ್ದರು.
‘ತೆರೆ ಮೇಲೆ ಒಂದು ಪಾತ್ರ ಎಷ್ಟು ಹೊತ್ತು ಬರುತ್ತದೆ ಎಂಬುದು ಮುಖ್ಯವಲ್ಲ. ಆ ಪಾತ್ರಕ್ಕೆ ಎಷ್ಟು ಮಹತ್ವ ಇದೆ ಎಂಬುದು ಮುಖ್ಯವಾಗುತ್ತದೆ. ಆ ದೃಷ್ಟಿಯಿಂದ ಆಲಿಯಾ ಭಟ್ ಮತ್ತು ಅಜಯ್ ದೇವಗನ್ ನಿಭಾಯಿಸಿರುವ ಈ ಪಾತ್ರಗಳಿಗೆ ತುಂಬ ಪ್ರಾಮುಖ್ಯತೆ ಇದೆ. ಈ ಸಿನಿಮಾದ ಆತ್ಮವೇ ಅಜಯ್ ದೇವಗನ್ ಪಾತ್ರ. ಇಬ್ಬರು ಹೀರೋಗಳನ್ನು ಬ್ಯಾಲೆನ್ಸ್ ಮಾಡುವಂತಹ ಪಾತ್ರ ಆಲಿಯಾ ಭಟ್ ಅವರದ್ದು’ ಎಂದು ರಾಜಮೌಳಿ ಹೇಳಿದ್ದರು.
ಇದನ್ನೂ ಓದಿ: Alia Bhatt: ಜ್ಯೂ.ಎನ್ಟಿಆರ್ ಜತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಆಲಿಯಾ ಭಟ್?
Alia Bhatt: ಸಿಂಪಲ್ ಲುಕ್ನಿಂದಲೇ ಅಭಿಮಾನಿಗಳ ಮನಗೆದ್ದ ಆಲಿಯಾ; ಇಲ್ಲಿವೆ ಫೋಟೋಗಳು