‘ಸ್ತ್ರೀ 2’ ರೀತಿ ಸೂಪರ್​ ಹಿಟ್​ ಆಗಲಿದೆ ‘ಜಿಗ್ರಾ’; ಟೀಸರ್​ ನೋಡಿ ಭವಿಷ್ಯ ನುಡಿದ ಸಿನಿಪ್ರಿಯರು

ಆಲಿಯಾ ಭಟ್​ ನಟನೆಯ ಹೊಸ ಸಿನಿಮಾ ‘ಜಿಗ್ರಾ’ ಅ.11ರಂದು ಬಿಡುಗಡೆ ಆಗಲಿದೆ. ಈಗ ಟೀಸರ್​ ಮೂಲಕ ಕೌತುಕ ಮೂಡಿಸಲಾಗಿದೆ. ವೇದಂಗ್​ ರೈನಾ ಅವರು ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಟಿ ಶ್ರದ್ಧಾ ಕಪೂರ್​ ಸೇರಿದಂತೆ ಅನೇಕರು ಈ ಸಿನಿಮಾದ ಟೀಸರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಹಿಟ್ ಆಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

‘ಸ್ತ್ರೀ 2’ ರೀತಿ ಸೂಪರ್​ ಹಿಟ್​ ಆಗಲಿದೆ ‘ಜಿಗ್ರಾ’; ಟೀಸರ್​ ನೋಡಿ ಭವಿಷ್ಯ ನುಡಿದ ಸಿನಿಪ್ರಿಯರು
‘ಜಿಗ್ರಾ’ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Sep 08, 2024 | 11:21 PM

ನಟಿ ಆಲಿಯಾ ಭಟ್​ ಅವರು ಯಾವಾಗಲೂ ಗಟ್ಟಿ ಕಥಾಹಂದರದ ಸಿನಿಮಾಗಳನ್ನು ಮಾಡುತ್ತಾರೆ. ಈಗ ಅವರು ನಟಿಸಿರುವ ‘ಜಿಗ್ರಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಟೀಸರ್​ ನೋಡಿದ ಅಭಿಮಾನಿಗಳು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈ ವರ್ಷ ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅದೇ ರೀತಿ ‘ಜಿಗ್ರಾ’ ಚಿತ್ರ ಕೂಡ ಹಿಟ್​ ಆಗಲಿದೆ ಎಂದು ಸಿನಿಪ್ರಿಯರು ಭವಿಷ್ಯ ನುಡಿಯುತ್ತಿದ್ದಾರೆ. ಆಲಿಯಾ ಭಟ್​ ಅವರ ಅಭಿಮಾನಿಗಳ ವಲಯದಲ್ಲಿ ‘ಜಿಗ್ರಾ’ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಿದೆ.

‘ಜಿಗ್ರಾ’ ಸಿನಿಮಾಗೆ ವಾಸನ್ ಬಾಲ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಕಥೆ ಏನು ಎಂಬ ಬಗ್ಗೆ ಟೀಸರ್​ನಲ್ಲಿ ಸುಳಿವು ಬಿಟ್ಟುಕೊಡಲಾಗಿದೆ. ಪೊಲೀಸರ ವಶದಲ್ಲಿ ಇರುವ ತಮ್ಮನನ್ನು ಬಿಡಿಸಿಕೊಂಡು ಬರಲು ಕಷ್ಟಪಡುವ ಅಕ್ಕನ ಪಾತ್ರದಲ್ಲಿ ಆಲಿಯಾ ಭಟ್​ ಅವರು ನಟಿಸಿದ್ದಾರೆ. ಅಕ್ಕ-ತಮ್ಮನ ನಡುವಿನ ಭಾಂದವ್ಯದ ಕಥೆ ಈ ಸಿನಿಮಾದಲ್ಲಿ ಇದೆ. ಆ ಕಾರಣಕ್ಕಾಗಿ ಆಲಿಯಾ ಭಟ್​ ಪಾಲಿಗೆ ಇದು ವಿಶೇಷ ಸಿನಿಮಾ ಆಗಲಿದೆ. ವೇದಂಗ್​ ರೈನಾ ಅವರು ಈ ಚಿತ್ರದಲ್ಲಿ ಆಲಿಯಾ ಭಟ್​ ಸಹೋದರನ ಪಾತ್ರವನ್ನು ಮಾಡಿದ್ದಾರೆ.

ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಜಿಗ್ರಾ’ ಸಿನಿಮಾದ ಟೀಸರ್​ ನೋಡಿ ಫಿದಾ ಆಗಿದ್ದಾರೆ. ನಟಿ ಶ್ರದ್ಧಾ ಕಪೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಟೀಸರ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಈ ಸಿನಿಮಾವನ್ನು ಥಿಯೇಟರ್​ನಲ್ಲಿ ಅಣ್ಣ-ತಮ್ಮನ ಜೊತೆ ನೋಡಬೇಕು. ಆಲಿಯಾ ಭಟ್​ ಎಂಥ ಅದ್ಭುತ ಹುಡುಗಿ. ಈ ಟ್ರೇಲರ್​ ಅದ್ಭುತವಾಗಿದೆ’ ಎಂದು ಶ್ರದ್ಧಾ ಕಪೂರ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಪಾಪರಾಜಿಗಳಿಗೆ ಕ್ಯೂಟ್​ ಆಗಿ ಪೋಸ್​ ನೀಡುವುದು ಕಲಿತ ಆಲಿಯಾ ಭಟ್​ ಮಗಳು ರಹಾ ಕಪೂರ್​

2023ರಲ್ಲಿ ಆಲಿಯಾ ಭಟ್​ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಯಶಸ್ಸು ಕಂಡಿದ್ದರು. ಆ ಸಿನಿಮಾದ ಬಳಿಕ ಅವರು ಸಣ್ಣ ಬ್ರೇಕ್​ ತೆಗೆದುಕೊಂಡರು. 2024ರಲ್ಲಿ ಬಿಡುಗಡೆ ಆಗುತ್ತಿರುವ ಆಲಿಯಾ ಭಟ್​ ಅವರ ಮೊದಲ ಸಿನಿಮಾ ‘ಜಿಗ್ರಾ’. ಈ ಸಿನಿಮಾ ಅಕ್ಟೋಬರ್​ 11ರಂದು ತೆರೆಕಾಣಲಿದೆ. ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಆಲಿಯಾ ಭಟ್​ ಅವರು ಸಹ-ನಿರ್ಮಾಪಕಿ ಕೂಡ ಹೌದು. ಕರಣ್​ ಜೋಹರ್​ ಅವರು ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!