AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೈ ಯೂನಿವರ್ಸ್​ನಲ್ಲಿ ನಟಿಸ್ತಾರೆ ಆಲಿಯಾ ಭಟ್; ಮಾಹಿತಿ ಬಿಟ್ಟಿಕೊಟ್ಟ ಯಶ್ ರಾಜ್ ಫಿಲ್ಮ್ಸ್

ಆಲಿಯಾ ಭಟ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳು ಕಳೆದಿವೆ. ಅವರು ತಮ್ಮದೇ ಆದ ಖ್ಯಾತಿ ಪಡೆದಿದ್ದಾರೆ. ಅವರು ಯಶ್ ರಾಜ್ ಫಿಲ್ಮ್ಸ್ ಯೂನಿವರ್ಸ್​ನ ಭಾಗ ಆಗುತ್ತಿದ್ದಾರೆ. ಈ ಮೊದಲು ‘ರಾಜಿ’ ಅಂಥ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರು ಭರ್ಜರಿ ಆ್ಯಕ್ಷನ್ ಮೆರೆಯೋಕೆ ರೆಡಿ ಆಗಿದ್ದಾರೆ.

ಸ್ಪೈ ಯೂನಿವರ್ಸ್​ನಲ್ಲಿ ನಟಿಸ್ತಾರೆ ಆಲಿಯಾ ಭಟ್; ಮಾಹಿತಿ ಬಿಟ್ಟಿಕೊಟ್ಟ ಯಶ್ ರಾಜ್ ಫಿಲ್ಮ್ಸ್
ಆಲಿಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 06, 2024 | 10:02 AM

Share

ಯಶ್ ರಾಜ್ ಫಿಲ್ಮ್ಸ್ (Yash Raj Films) ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದೆ. ಅದರಲ್ಲೂ ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಸ್ಪೈ ಯೂನಿವರ್ಸ್​ ಫ್ಯಾನ್ಸ್​ಗೆ ಸಖತ್ ಇಷ್ಟ ಆಗಿದೆ. ‘ಏಕ್ ಥಾ ಟೈಗರ್’ ಚಿತ್ರದಿಂದ ಆರಂಭ ಆಗಿ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಈಗ ಆಲಿಯಾ ಭಟ್ ಅವರು ಈ ಸ್ಪೈ ಯೂನಿವರ್ಸ್​ನ ಭಾಗವಾಗಲಿದ್ದಾರೆ ಎನ್ನುವ ವಿಚಾರ ರಿವೀಲ್ ಆಗಿದೆ. ಈ ವಿಚಾರ ಆಲಿಯಾ ಭಟ್ ಫ್ಯಾನ್ಸ್​ಗೆ ಖುಷಿ ನೀಡಿದೆ.

ಆಲಿಯಾ ಭಟ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳು ಕಳೆದಿವೆ. ಅವರು ತಮ್ಮದೇ ಆದ ಖ್ಯಾತಿ ಪಡೆದಿದ್ದಾರೆ. ಅವರು ಯಶ್ ರಾಜ್ ಫಿಲ್ಮ್ಸ್ ಯೂನಿವರ್ಸ್​ನ ಭಾಗ ಆಗುತ್ತಿದ್ದಾರೆ. ಈ ಮೊದಲು ‘ರಾಜಿ’ ಅಂಥ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರು ಭರ್ಜರಿ ಆ್ಯಕ್ಷನ್ ಮೆರೆಯೋಕೆ ರೆಡಿ ಆಗಿದ್ದಾರೆ. ಈ ವಿಚಾರ ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯ್ ವಿಧಾನಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಚಿತ್ರರಂಗದಲ್ಲಿ ಇಷ್ಟು ದಿನ ಮುಚ್ಚಿಟ್ಟ ವಿಚಾರವನ್ನು ನಾನು ಹೇಳುತ್ತಿದ್ದೇನೆ. ಆಲಿಯಾ ಭಟ್ ಅವರು ಸ್ಪೈ ಯೂನಿವರ್ಸ್​ನ ಭಾಗವಾಗಲಿದ್ದಾರೆ. ಈ ವರ್ಷದ ಅಂತ್ಯಕ್ಕೆ ಶೂಟಿಂಗ್ ಆರಂಭ ಆಗಲಿದೆ. ನಾವು ಥ್ರಿಲ್ ಆಗಿದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸ್ಪೈ ಯೂನಿವರ್ಸ್ ಅಡಿಯಲ್ಲಿ ನಾವು ಹಲವು ಸಿನಿಮಾ ಮಾಡುತ್ತಿದ್ದೇವೆ. ಆದರೆ, ಎಲ್ಲವನ್ನೂ ಇಲ್ಲಿ ಹಂಚಿಕೊಳ್ಳಲಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕಾಗ ಮಾತನಾಡುತ್ತೇವೆ. ಸದ್ಯಕ್ಕೆ ಆಲಿಯಾ ಭಟ್ ಅವರು ಇದರ ಭಾಗವಾಗುತ್ತಿದ್ದಾರೆ ಎಂಬುದನ್ನಷ್ಟೇ ಹೇಳಬಹುದು’ ಎಂದಿದ್ದಾರೆ ಅವರು.

ಆಲಿಯಾ ಭಟ್ ಅವರ ಸಿನಿಮಾ ‘ಯಶ್ ರಾಜ್ ಫಿಲ್ಮ್ಸ್’ನ ಸ್ಪೈ ಯೂನಿವರ್ಸ್​ನ ಆರನೇ ಚಿತ್ರ ಆಗಲಿದೆ. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ಟೈಗರ್ 3’, ‘ಪಠಾಣ್’ ಹಾಗೂ ‘ವಾರ್’ ಸಿನಿಮಾಗಳು ರಿಲೀಸ್ ಆಗಿವೆ. ಸದ್ಯ ಹೃತಿಕ್ ರೋಷನ್ ಹಾಗೂ ಜೂನಿಯರ್ ಎನ್​ಟಿಆರ್ ನಟನೆಯ ‘ವಾರ್ 2’ ಕೆಲಸಗಳು ನಡೆಯುತ್ತಿವೆ. ‘ಪಠಾಣ್ 2’ ಸಿನಿಮಾ ಕೂಡ ಬರಲಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ಮರಳಲಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್ ಕೈಯಲ್ಲಿ ಹಿಡಿದಿರುವ ಕಪ್ಪು ಬಣ್ಣದ ಬ್ಯಾಗಿನ ಬೆಲೆ ಲಕ್ಷಗಳಲ್ಲಿದೆ

2027ರ ವೇಳೆಗೆ ‘ಟೈಗರ್ Vs ಪಠಾಣ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಈಗಷ್ಟೇ ನಡೆಯುತ್ತಿವೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ