ಯಶ್ ರಾಜ್ ಫಿಲ್ಮ್ಸ್ (Yash Raj Films) ಬಾಲಿವುಡ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದೆ. ಅದರಲ್ಲೂ ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಸ್ಪೈ ಯೂನಿವರ್ಸ್ ಫ್ಯಾನ್ಸ್ಗೆ ಸಖತ್ ಇಷ್ಟ ಆಗಿದೆ. ‘ಏಕ್ ಥಾ ಟೈಗರ್’ ಚಿತ್ರದಿಂದ ಆರಂಭ ಆಗಿ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಈಗ ಆಲಿಯಾ ಭಟ್ ಅವರು ಈ ಸ್ಪೈ ಯೂನಿವರ್ಸ್ನ ಭಾಗವಾಗಲಿದ್ದಾರೆ ಎನ್ನುವ ವಿಚಾರ ರಿವೀಲ್ ಆಗಿದೆ. ಈ ವಿಚಾರ ಆಲಿಯಾ ಭಟ್ ಫ್ಯಾನ್ಸ್ಗೆ ಖುಷಿ ನೀಡಿದೆ.
ಆಲಿಯಾ ಭಟ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳು ಕಳೆದಿವೆ. ಅವರು ತಮ್ಮದೇ ಆದ ಖ್ಯಾತಿ ಪಡೆದಿದ್ದಾರೆ. ಅವರು ಯಶ್ ರಾಜ್ ಫಿಲ್ಮ್ಸ್ ಯೂನಿವರ್ಸ್ನ ಭಾಗ ಆಗುತ್ತಿದ್ದಾರೆ. ಈ ಮೊದಲು ‘ರಾಜಿ’ ಅಂಥ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರು ಭರ್ಜರಿ ಆ್ಯಕ್ಷನ್ ಮೆರೆಯೋಕೆ ರೆಡಿ ಆಗಿದ್ದಾರೆ. ಈ ವಿಚಾರ ಅವರ ಫ್ಯಾನ್ಸ್ಗೆ ಖುಷಿ ನೀಡಿದೆ.
ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯ್ ವಿಧಾನಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಚಿತ್ರರಂಗದಲ್ಲಿ ಇಷ್ಟು ದಿನ ಮುಚ್ಚಿಟ್ಟ ವಿಚಾರವನ್ನು ನಾನು ಹೇಳುತ್ತಿದ್ದೇನೆ. ಆಲಿಯಾ ಭಟ್ ಅವರು ಸ್ಪೈ ಯೂನಿವರ್ಸ್ನ ಭಾಗವಾಗಲಿದ್ದಾರೆ. ಈ ವರ್ಷದ ಅಂತ್ಯಕ್ಕೆ ಶೂಟಿಂಗ್ ಆರಂಭ ಆಗಲಿದೆ. ನಾವು ಥ್ರಿಲ್ ಆಗಿದ್ದೇವೆ’ ಎಂದು ಅವರು ಹೇಳಿದ್ದಾರೆ.
‘ಸ್ಪೈ ಯೂನಿವರ್ಸ್ ಅಡಿಯಲ್ಲಿ ನಾವು ಹಲವು ಸಿನಿಮಾ ಮಾಡುತ್ತಿದ್ದೇವೆ. ಆದರೆ, ಎಲ್ಲವನ್ನೂ ಇಲ್ಲಿ ಹಂಚಿಕೊಳ್ಳಲಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕಾಗ ಮಾತನಾಡುತ್ತೇವೆ. ಸದ್ಯಕ್ಕೆ ಆಲಿಯಾ ಭಟ್ ಅವರು ಇದರ ಭಾಗವಾಗುತ್ತಿದ್ದಾರೆ ಎಂಬುದನ್ನಷ್ಟೇ ಹೇಳಬಹುದು’ ಎಂದಿದ್ದಾರೆ ಅವರು.
ಆಲಿಯಾ ಭಟ್ ಅವರ ಸಿನಿಮಾ ‘ಯಶ್ ರಾಜ್ ಫಿಲ್ಮ್ಸ್’ನ ಸ್ಪೈ ಯೂನಿವರ್ಸ್ನ ಆರನೇ ಚಿತ್ರ ಆಗಲಿದೆ. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ಟೈಗರ್ 3’, ‘ಪಠಾಣ್’ ಹಾಗೂ ‘ವಾರ್’ ಸಿನಿಮಾಗಳು ರಿಲೀಸ್ ಆಗಿವೆ. ಸದ್ಯ ಹೃತಿಕ್ ರೋಷನ್ ಹಾಗೂ ಜೂನಿಯರ್ ಎನ್ಟಿಆರ್ ನಟನೆಯ ‘ವಾರ್ 2’ ಕೆಲಸಗಳು ನಡೆಯುತ್ತಿವೆ. ‘ಪಠಾಣ್ 2’ ಸಿನಿಮಾ ಕೂಡ ಬರಲಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ಮರಳಲಿದ್ದಾರೆ.
ಇದನ್ನೂ ಓದಿ: ಆಲಿಯಾ ಭಟ್ ಕೈಯಲ್ಲಿ ಹಿಡಿದಿರುವ ಕಪ್ಪು ಬಣ್ಣದ ಬ್ಯಾಗಿನ ಬೆಲೆ ಲಕ್ಷಗಳಲ್ಲಿದೆ
2027ರ ವೇಳೆಗೆ ‘ಟೈಗರ್ Vs ಪಠಾಣ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಈಗಷ್ಟೇ ನಡೆಯುತ್ತಿವೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ