AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಷ್ಟು ಕೆಟ್ಟ ಸಿನಿಮಾ ನೋಡಿಲ್ಲ’; ‘ಆಲ್ಫಾ’ ನೋಡಿ ನೇರ ವಿಮರ್ಶೆ ತಿಳಿಸಿದ ಫ್ಯಾನ್ಸ್

ಆಲಿಯಾ ಭಟ್ ನಟನೆಯ ಬಹುನಿರೀಕ್ಷಿತ 'ಆಲ್ಫಾ' ಸಿನಿಮಾ ಪ್ರೇಕ್ಷಕರಿಂದ ತೀವ್ರ ನಕಾರಾತ್ಮಕ ವಿಮರ್ಶೆಗಳನ್ನು ಎದುರಿಸುತ್ತಿದೆ. ಟ್ರೇಲರ್ ಹಂತದಿಂದಲೇ ಟೀಕೆಗೆ ಒಳಗಾಗಿದ್ದ ಈ ಚಿತ್ರವನ್ನು ನೋಡಿದ ಅಭಿಮಾನಿಗಳು ‘ಇದು ಅತ್ಯಂತ ಕಳಪೆ ಸಿನಿಮಾ’ ಎಂದು ಆಕ್ರೋಶ ಹೊರಹಾಕಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್ ಅಡಿಯಲ್ಲಿ ಮೂಡಿಬಂದರೂ, ಪ್ರೇಕ್ಷಕರು ಚಿತ್ರವನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ.

‘ಇಷ್ಟು ಕೆಟ್ಟ ಸಿನಿಮಾ ನೋಡಿಲ್ಲ’; ‘ಆಲ್ಫಾ’ ನೋಡಿ ನೇರ ವಿಮರ್ಶೆ ತಿಳಿಸಿದ ಫ್ಯಾನ್ಸ್
ಆಲ್ಫಾ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 03, 2026 | 3:03 PM

Share

ಮುಖ್ಯಾಂಶಗಳು

  • 'ಆಲ್ಫಾ' ಚಿತ್ರಕ್ಕೆ ಅಭಿಮಾನಿಗಳಿಂದ ಕಠಿಣ ವಿಮರ್ಶೆ
  • ಸೋಶಿಯಲ್ ಮೀಡಿಯಾದಲ್ಲಿ ಕನಿಷ್ಠ ರೇಟಿಂಗ್‌ಗಳ ಸುರಿಮಳೆ
  • ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್‌ಗೆ ಬಿಗ್ ಶಾಕ್

ನಟಿ ಆಲಿಯಾ ಭಟ್ ಅವರು (Alia Bhatt) ಅಳೆದು ತೂಗಿ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳುತ್ತಾರೆ. ರೊಮ್ಯಾಂಟಿಕ್ ಕಥೆಗಳ ಜೊತೆಗೆ ಅವರು ಒಂದಷ್ಟು ಆ್ಯಕ್ಷನ್ ಸಿನಿಮಾಗಳನ್ನು ಕೂಡ ಆಯ್ದುಕೊಳ್ಳುತ್ತಿದ್ದಾರೆ. ಅವರು ‘ಆಲ್ಫಾ’ ಸಿನಿಮಾ ಘೋಷಣೆ ಮಾಡಿದಾಗ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಆದರೆ ಟ್ರೇಲರ್ ರಿಲೀಸ್ ಆದ ಬಳಿಕ ಚಿತ್ರವನ್ನು ಎಲ್ಲರೂ ಟೀಕಿಸಿದರು. ಈಗ ಸಿನಿಮಾ ತೆರೆಕಂಡ ಬಳಿಕ ಚಿತ್ರವನ್ನು ಹೀನಾಯವಾಗಿ ಟ್ರೋಲ್ ಮಾಡಲಾಗುತ್ತಿದೆ. ಸಿನಿಮಾ ನೋಡಿದವರು ಐದಕ್ಕೆ ಒಂದು ಸ್ಟಾರ್ ಕೂಡ ನೀಡಿದ್ದಾರೆ!

ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್​ ಮೂಲಕ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು. ಆದರೆ, ಪದೇ ಪದೇ ಒಂದೇ ರೀತಿಯ ವಿಷಯವನ್ನು ಉಣಬಡಿಸಿ ಜನರಿಗೂ ಬೇಸರ ಆಗಿದೆ. ಹೀಗಾಗಿ, ಈ ಯೂನಿವರ್ಸ್ ಅಡಿಯಲ್ಲಿ ಬಂದ ‘ಫೈಟರ್’, ‘ವಾರ್ 2’ ಚಿತ್ರವನ್ನು ಜನರು ನೇರವಾಗಿ ರಿಜೆಕ್ಟ್ ಮಾಡಿದರು. ‘ಆಲ್ಫಾ’ ಸಿನಿಮಾವನ್ನು ಜನರು ತಿರಸ್ಕರಿಸುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇನ್ನು ಮುಂದೆ ಸಿನಿಮಾ ನಿರ್ದೇಶನ ಮಾಡಲ್ಲ; ನಿವೃತ್ತಿ ಘೋಷಿಸಿದ ಆಲಿಯಾ ಭಟ್ ತಂದೆ

‘ನನ್ನ ಅಪ್ಪ, ಅಮ್ಮನ ಜೊತೆ ಆಲ್ಫಾ ವೀಕ್ಷಿಸಲು ತೆರಳಿದ್ದೆ. ಅವರು ಎಂದಿಗೂ ನನ್ನನ್ನು ಅರ್ಧಕ್ಕೆ ಬಿಟ್ಟು ಹೋಗಿರಲಿಲ್ಲ. ಆದರೆ, ಥಿಯೇಟರ್​​ನಲ್ಲಿ ನನ್ನನ್ನು ಅವರು ಅರ್ಧಕ್ಕೆ ಬಿಟ್ಟು ಹೋದರು’ ಎಂದು ಹೇಳಿದ್ದಾರೆ. ಇನ್ನೂ ಕೆಲವರು ‘ಟ್ವಿಸ್ಟ್ ಕೊಡೋ ಚಿತ್ರ ನಮ್ಮ ದೇಶದ ಸೇನೆಯನ್ನು ಜೋಕ್ ರೀತಿ ತೋರಿಸಿದೆ’ ಎಂದು ಕೆಲವರು ಹೇಳಿದ್ದಾರೆ.ಇನ್ನೂ ಕೆಲವರು ಇದಕ್ಕಿಂತ ಕೆಟ್ಟ ಸಿನಿಮಾ ಮತ್ತೊಂದು ಬರಲು ಸಾಧ್ಯವಿಲ್ಲ ಎಂದಿದ್ದಾರೆ. ಕೆಲವರು ಚಿತ್ರವನ್ನು ಕ್ರಿಂಜ್ ಎಂದು ಕರೆದಿದ್ದಾರೆ.

ಆಲ್ಫಾ ಟ್ವಿಟರ್ ವಿಮರ್ಶೆ

ಯಶ್ ರಾಜ್ ಫಿಲ್ಮ್ಸ್​​ನವರು ಸ್ಪೈ ಯೂನಿವರ್ಸ್​​ನಿಂದ ಸಾಕಷ್ಟು ಹಣ ಕಳೆದುಕೊಂಡಿದ್ದಾರೆ. ಈಗ ಬಹುನಿರೀಕ್ಷಿತ ‘ಆಲ್ಫಾ’ ಕೂಡ ನೆಲಕಚ್ಚಿದರೆ ಮುಂದಿನ ದಿನಗಳಲ್ಲಿ ಈ ರೀತಿಯ ಚಿತ್ರಗಳನ್ನು ಅವರು ಕೈ ಬಿಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
2 ನಿಮಿಷದಲ್ಲಿ 12 ಇಡ್ಲಿ ತಿಂದು ಕಮಾಲ್ ಮಾಡಿದ ಸಂಚಾರಿ ಪೊಲೀಸ್ ಪ್ರವೀಣ್
2 ನಿಮಿಷದಲ್ಲಿ 12 ಇಡ್ಲಿ ತಿಂದು ಕಮಾಲ್ ಮಾಡಿದ ಸಂಚಾರಿ ಪೊಲೀಸ್ ಪ್ರವೀಣ್
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳ ಕಾರಬಾರು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಬೆಂಗಳೂರಿನಲ್ಲಿ ಎಐ ಕ್ಯಾಮರಾಗಳ ಸರಣಿ ಎಡವಟ್ಟು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ಮೂರು ಆಯಾಮಗಳಲ್ಲಿ ಸಿದ್ದರಾಮಯ್ಯ ದೂರಿನ ತನಿಖೆ ಶುರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ರಾಯಚೂರಿನಲ್ಲಿ ಈರುಳ್ಳಿ ತುಂಬಿದ ಲಾರಿ ಪಲ್ಟಿ: ಈರುಳ್ಳಿ ಹೊತ್ತೊಯ್ದ ಜನರು
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್​ಡಿಕೆ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಕಬ್ಬು ಬೆಳೆಗೆ ಎಂಎಸ್​ಪಿ ನಿಗದಿ ಬಗ್ಗೆ ರೈತರಿಗೆ ಗುಡ್​ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್‌ಗಳ ಮೇಲೆ ದಾಳಿ ಮುಂದುವರಿಕೆ