AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan: ಶಾರುಖ್​ ಖಾನ್​ ವಿಷಯದಲ್ಲಿ ಮನಸ್ಸು ಬದಲಾಯಿಸಿದ ಅಲ್ಲು ಅರ್ಜುನ್​? ‘ಜವಾನ್​’ ಬಗ್ಗೆ ಹಬ್ಬಿದೆ ಗಾಸಿಪ್​

Allu Arjun: ಬಹುತಾರಾಗಣ ಇರುವ ಕಾರಣಕ್ಕೆ ‘ಜವಾನ್​’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಅಲ್ಲು ಅರ್ಜುನ್​ ಅವರ ಪಾತ್ರದ ಬಗ್ಗೆಯೂ ಗಾಸಿಪ್​ ಜೋರಾಗಿದೆ.

Jawan: ಶಾರುಖ್​ ಖಾನ್​ ವಿಷಯದಲ್ಲಿ ಮನಸ್ಸು ಬದಲಾಯಿಸಿದ ಅಲ್ಲು ಅರ್ಜುನ್​? ‘ಜವಾನ್​’ ಬಗ್ಗೆ ಹಬ್ಬಿದೆ ಗಾಸಿಪ್​
ಶಾರುಖ್ ಖಾನ್, ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on:Apr 10, 2023 | 7:59 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ‘ಜವಾನ್​’ ಚಿತ್ರದ ಬಗ್ಗೆ ಗಮನ ಹರಿಸಿದ್ದಾರೆ. ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾರುಖ್​ ಖಾನ್​ ಮತ್ತು ಅಟ್ಲಿ ಕುಮಾರ್​ ಕಾಂಬಿನೇಷನ್​ ಆದ್ದರಿಂದ ಈ ಪ್ರಾಜೆಕ್ಟ್​ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ‘ಜವಾನ್​’ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ‘ಪುಷ್ಪ 2’ ಚಿತ್ರದಲ್ಲಿ ಬ್ಯುಸಿ ಆಗಿರುವ ಅವರು ಡೇಟ್ಸ್​ ಕ್ಲ್ಯಾಶ್​ ಆದ ಕಾರಣದಿಂದ ಒಪ್ಪಿಕೊಳ್ಳಲಿಲ್ಲ ಎಂದು ಕೂಡ ಗುಸುಗುಸು ಹಬ್ಬಿತ್ತು. ಆದರೆ ಈಗ ಗಾಸಿಪ್​ ಮಂದಿ ಬೇರೆಯದೇ ವಿಷಯ ಹೇಳುತ್ತಿದ್ದಾರೆ. ಅಲ್ಲು ಅರ್ಜುನ್​ ಅವರು ‘ಜವಾನ್​’ (Jawan Movie) ಸಿನಿಮಾದಲ್ಲಿನ ತಮ್ಮ ಪಾತ್ರದ ಚಿತ್ರೀಕರಣವನ್ನು ಈಗಾಗಲೇ ಮುಗಿಸಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ತುಂಬ ಅದ್ದೂರಿಯಾಗಿ ಜವಾನ್​ ಸಿನಿಮಾ ಮೂಡಿಬರುತ್ತಿದೆ. ಹೀರೋ ಆಗಿ ನಟಿಸುವುದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಶಾರುಖ್​ ಖಾನ್ ವಹಿಸಿಕೊಂಡಿದ್ದಾರೆ. ಅವರ ಒಡೆತನದ ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​ ಸಂಸ್ಥೆ ಮೂಲಕ ಈ ಚಿತ್ರ ಸಿದ್ಧವಾಗುತ್ತಿದೆ. ಬಹುತಾರಾಗಣ ಇರುವ ಕಾರಣಕ್ಕೆ ‘ಜವಾನ್​’ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ನಯನತಾರಾ, ವಿಜಯ್​ ಸೇತುಪತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ, ಅಲ್ಲು ಅರ್ಜುನ್​ ಅವರು ಅತಿಥಿ ಪಾತ್ರ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ಚಿತ್ರತಂಡದಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: Pushpa 2: ಮತ್ತೊಂದು ಹಂತದ ಶೂಟಿಂಗ್​ಗೆ ಮೈ ಕೊಡವಿ ನಿಂತ ಅಲ್ಲು ಅರ್ಜುನ್​; ಇಲ್ಲಿದೆ ‘ಪುಷ್ಪ 2’ ಅಪ್​ಡೇಟ್​

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಬಾಲಿವುಡ್​ ಮತ್ತು ಸೌತ್​ ಸಿನಿಮಾ ಸೆಲೆಬ್ರಿಟಿಗಳ ನಡುವೆ ಈಗ ಬಾಂಧವ್ಯ ಚೆನ್ನಾಗಿ ಬೆಳೆದಿದೆ. ಸಲ್ಮಾನ್​ ಖಾನ್​ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಹಾಡಿನಲ್ಲಿ ಟಾಲಿವುಡ್​ನ ಸ್ಟಾರ್​ ನಟ ರಾಮ್​ ಚರಣ್​ ಅವರು ಡ್ಯಾನ್ಸ್​ ಮಾಡಿರುವುದು ಅಭಿಮಾನಿಗಳಿಗೆ ಇಷ್ಟ ಆಗಿದೆ. ಅದೇ ರೀತಿ ‘ಜವಾನ್​’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಗೆಸ್ಟ್​ ಅಪಿಯರೆನ್ಸ್​ ನೀಡಿದರೆ ಫ್ಯಾನ್ಸ್​ ಖಂಡಿತಾ ಇಷ್ಟಪಡುತ್ತಾರೆ.

ಇದನ್ನೂ ಓದಿ: Pushpa 2: ತುಟಿಗೆ ಬಣ್ಣ, ಕೈಗೆ ಬಳೆ, ಕಿವಿಗೆ ಓಲೆ ಏನಿದು ಅಲ್ಲು ಅರ್ಜುನ್ ಅವತಾರ

ಸದ್ಯಕ್ಕಂತೂ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿರುವುದರಿಂದ ಅದಕ್ಕೆ ತಕ್ಕಂತೆಯೇ ಇಡೀ ಚಿತ್ರತಂಡ ಕಾರ್ಯ ನಿರತವಾಗಿದೆ. ಈ ಬ್ಯುಸಿ ಶೆಡ್ಯೂಲ್​ ಮಧ್ಯೆ ಅವರು ‘ಜವಾನ್​’ ಚಿತ್ರಕ್ಕಾಗಿ ಡೇಟ್ಸ್​ ನೀಡಲು ಹೇಗೆ ಸಾಧ್ಯವಾಯ್ತು ಎಂಬ ಪ್ರಶ್ನೆ ಕೂಡ ಫ್ಯಾನ್ಸ್​ ಮನದಲ್ಲಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:59 pm, Mon, 10 April 23

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ