‘ನಾವು ಸಹೋದರರು, ಪರಸ್ಪರ ಗೌರವ ಇದೆ’; ಬಾಲಿವುಡ್​ ಬಗ್ಗೆ ಅಲ್ಲು ಅರ್ಜುನ್​ ಮಾತು

ಬಾಲಿವುಡ್​ನ ಸ್ಟಾರ್ ನಟರ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಮುಗ್ಗರಿಸಿದ್ದುಂಟು. ಅದೇ ವೇಳೆಗೆ ದಕ್ಷಿಣದ ಸಿನಿಮಾಗಳು ಉತ್ತರ ಭಾರತದಲ್ಲಿ ಭರ್ಜರಿ ಯಶಸ್ಸು ಕಂಡವು. ಆ ಬಳಿಕ ಸೌತ್​ ವರ್ಸಸ್​ ಬಾಲಿವುಡ್​ ಎಂಬ ಚರ್ಚೆ ಶುರುವಾಯಿತು. ಈ ಕುರಿತು ಎದುರಾದ ಪ್ರಶ್ನೆಗೆ ಅಲ್ಲು ಅರ್ಜುನ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

‘ನಾವು ಸಹೋದರರು, ಪರಸ್ಪರ ಗೌರವ ಇದೆ’; ಬಾಲಿವುಡ್​ ಬಗ್ಗೆ ಅಲ್ಲು ಅರ್ಜುನ್​ ಮಾತು
ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
|

Updated on: Mar 15, 2024 | 8:25 PM

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ಈಗ ಕೇವಲ ತೆಲುಗು ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರು ಹಿಂದಿ ಪ್ರೇಕ್ಷಕರಿಗೂ ಇಷ್ಟ ಆಗಿದ್ದಾರೆ. ಉತ್ತರ ಭಾರತದಲ್ಲಿ ಅವರ ಅಭಿಮಾನಿ ಬಳಗ ದೊಡ್ಡದಾಗುತ್ತಿದೆ. ಈಗ ಅವರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾ (Pushpa 2) ಹಿಂದಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದಲ್ಲಿ ಅಬ್ಬರಿಸುವ ನಿರೀಕ್ಷೆ ಇದೆ. ಅಲ್ಲು ಅರ್ಜುನ್​ ಅವರು ಬಾಲಿವುಡ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೌತ್​ ವರ್ಸಸ್​ ಬಾಲಿವುಡ್​ (Bollywood) ಎಂಬ ವಾದ ನಡೆಯುತ್ತಿದೆ. ಆದರೆ ಅಲ್ಲು ಅರ್ಜುನ್​ ಅವರು ಬೇರೆಯದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್​ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ‘ಬಾಲಿವುಡ್​ನವರಿಗೆ ಈಗ ಸ್ವಲ್ಪ ಟೈಮ್​ ಚೆನ್ನಾಗಿಲ್ಲ ಎಂಬ ಕಾರಣಕ್ಕೆ ಇಡೀ ಹಿಂದಿ ಚಿತ್ರರಂಗವನ್ನು ನಾವು ಕೆಟ್ಟ ರೀತಿಯಲ್ಲಿ ಬಿಂಬಿಸುವುದು ಸರಿಯಲ್ಲ. 6-7 ದಶಕದಿಂದ ಅವರು ನಮಗೆ ಅತ್ಯುತ್ತಮ ಸಿನಿಮಾಗಳನ್ನು ನೀಡಿದ್ದಾರೆ’ ಎಂದು ಅಲ್ಲು ಅರ್ಜುನ್​ ಅವರು ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಹಿಂದಿ ಚಿತ್ರರಂಗದ ಕೆಲವು ಸ್ಟಾರ್​ ನಟರು ಬಾಕ್ಸ್​ ಆಫೀಸ್​ನಲ್ಲಿ ಮುಗ್ಗರಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಇಂಥ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ

‘ದಕ್ಷಿಣ ಭಾರತದ ಸಿನಿಮಾಗಳ ಮೇಲೆ ಬಾಲಿವುಡ್​ ಚಿತ್ರಗಳ ಪ್ರಭಾವ ಇದೆ. ಹಾಗೆಯೇ, ಬಾಲಿವುಡ್​ ಸಿನಿಮಾಗಳ ಮೇಲೆ ದಕ್ಷಿಣ ಭಾರತದ ಸಿನಿಮಾಗಳ ಪ್ರಭಾವ ಕೂಡ ಇದೆ. ನಾವು ಸಹೋದರರಿದ್ದಂತೆ. ಬೇರೆ ಬೇರೆ ಪ್ರದೇಶಗಳಲ್ಲಿ ಇದ್ದರೂ ನಮ್ಮ ನಡುವೆ ಪರಸ್ಪರ ಗೌರವ ಇದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಅವರ ಹೇಳಿಕೆಗೆ ಉತ್ತರ ಭಾರತದ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ

ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾ ವಿಶ್ವಮಟ್ಟದಲ್ಲಿ ಸೌಂಡು ಮಾಡಬೇಕು ಎಂಬ ಗುರಿ ಚಿತ್ರತಂಡಕ್ಕೆ ಇದೆ. ಆ ಕಾರಣದಿಂದ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಅವರು ಬೇರೆ ಬೇರೆ ದೇಶಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಸ್ಟಾರ್​ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗುತ್ತಿದೆ. ಈಗಾಗಲೇ ಅನಾವರಣ ಆಗಿರುವ ಪೋಸ್ಟರ್​ಗಳು ಧೂಳೆಬ್ಬಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್