‘ಜವಾನ್​’ ಚಿತ್ರದ ವಿಮರ್ಶೆ ತಿಳಿಸಿದ ಅಲ್ಲು ಅರ್ಜುನ್​; ಪ್ರತಿಯೊಬ್ಬರಿಗೂ ಮೆಚ್ಚುಗೆ ಸೂಚಿಸಿದ ನಟ

ಬಿಡುಗಡೆಯಾಗಿ 7 ದಿನ ಕಳೆದಿದ್ದರೂ ಕೂಡ ‘ಜವಾನ್​’ ಸಿನಿಮಾ ಅಬ್ಬರಿಸುತ್ತಿದೆ. ಈ ಚಿತ್ರದಲ್ಲಿ ಬಾಲಿವುಡ್​ ಮತ್ತು ಸೌತ್​ ಸಿನಿಮಾ ಇಂಡಸ್ಟ್ರಿಯ ಸಂಗಮ ಆಗಿದೆ. ದಕ್ಷಿಣ ಭಾರತದ ಅನೇಕ ಸ್ಟಾರ್​ ನಟರು ಈ ಸಿನಿಮಾದ ಗೆಲುವಿಗೆ ಅಭಿನಂದನೆ ತಿಳಿಸಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ‘ಜವಾನ್’ ನೋಡಿ ವಿಮರ್ಶೆ ಹಂಚಿಕೊಂಡಿದ್ದಾರೆ.​

‘ಜವಾನ್​’ ಚಿತ್ರದ ವಿಮರ್ಶೆ ತಿಳಿಸಿದ ಅಲ್ಲು ಅರ್ಜುನ್​; ಪ್ರತಿಯೊಬ್ಬರಿಗೂ ಮೆಚ್ಚುಗೆ ಸೂಚಿಸಿದ ನಟ
ಶಾರುಖ್​ ಖಾನ್​, ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
|

Updated on: Sep 14, 2023 | 12:10 PM

ದಕ್ಷಿಣ ಭಾರತದ ಚಿತ್ರರಂಗದ ಜೊತೆ ಬಾಲಿವುಡ್​ ಮಂದಿಗೆ ಸ್ನೇಹ ಬೆಳೆದಿದೆ. ಅದರಲ್ಲೂ ಪ್ಯಾನ್​ ಇಂಡಿಯಾ ಸಿನಿಮಾಗಳ ಟ್ರೆಂಡ್​ ಶುರುವಾದ ಬಳಿಕ ಈ ಬಂಧ ಇನ್ನಷ್ಟು ಗಟ್ಟಿಯಾಗಿದೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್​ ಉದಾಹರಣೆ ಇದೆ. ಶಾರುಖ್​ ಖಾನ್​ (Shah Rukh Khan) ನಟನೆಯ ‘ಜವಾನ್​’ ಸಿನಿಮಾ ಬಹುದೊಡ್ಡ ಯಶಸ್ಸು ಕಂಡಿರುವುದಕ್ಕೆ ದಕ್ಷಿಣ ಭಾರತದ ಅನೇಕ ಸ್ಟಾರ್​ ನಟರು ಅಭಿನಂದನೆ ತಿಳಿಸುತ್ತಿದ್ದಾರೆ. ಟಾಲಿವುಡ್​ನ ಖ್ಯಾತ ನಟ ಅಲ್ಲು ಅರ್ಜುನ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಜವಾನ್​’ (Jawan) ಸಿನಿಮಾದಲ್ಲಿ ನಟಿಸಿದ ಪ್ರಮುಖ ಕಲಾವಿದರೆಲ್ಲರಿಗೂ ಅವರು ಮೆಚ್ಚುಗೆ ಸೂಚಿಸಿದ್ದಾರೆ. ನಿರ್ದೇಶಕ ಅಟ್ಲಿ ಬಗ್ಗೆ ಅಲ್ಲು ಅರ್ಜುನ್​ (Allu Arjun) ಅವರು ಹೆಮ್ಮೆಯ ಮಾತುಗಳನ್ನು ಪೋಸ್ಟ್​ ಮಾಡಿದ್ದಾರೆ. ಬಿಡುಗಡೆಯಾಗಿ 7 ದಿನ ಕಳೆದಿದ್ದರೂ ಕೂಡ ‘ಜವಾನ್​’ ಸಿನಿಮಾ ಅಬ್ಬರಿಸುತ್ತಿದೆ.

‘ಜವಾನ್​’ ಚಿತ್ರದಲ್ಲಿ ಬಾಲಿವುಡ್​ ಮತ್ತು ಸೌತ್​ ಸಿನಿಮಾ ಇಂಡಸ್ಟ್ರಿಯ ಸಂಗಮ ಆಗಿದೆ. ಕಾಲಿವುಡ್​ನ ನಿರ್ದೇಶಕ ಅಟ್ಲಿ ಅವರು ‘ಜವಾನ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಚೊಚ್ಚಲ ಪ್ರಯತ್ನದಲ್ಲೇ ಅವರಿಗೆ ಗೆಲುವು ಸಿಕ್ಕಿದೆ. ದಕ್ಷಿಣ ಕಲಾವಿದರಾದ ಪ್ರಿಯಾಮಣಿ, ನಯನತಾರಾ, ವಿಜಯ್​ ಸೇತುಪತಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ತಮಿಳಿನ ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದಕ್ಷಿಣ ಭಾರತದ ಅನೇಕ ಸ್ಟಾರ್​ ನಟರು ‘ಜವಾನ್​’ ಸಿನಿಮಾದ ಗೆಲುವಿಗೆ ಅಭಿನಂದನೆ ತಿಳಿಸಿದ್ದಾರೆ.

‘ಈ ದೊಡ್ಡ ಯಶಸ್ಸಿಗಾಗಿ ಜವಾನ್​ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಶಾರುಖ್​ ಖಾನ್​ ಅವರು ಮಾಸ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಮಗೆ ಈ ಗೆಲುವು ಸಿಗಲಿ ಎಂದು ನಾವೆಲ್ಲ ಪ್ರಾರ್ಥಿಸಿದ್ದೆವು. ಎಂದಿನಂತೆ ವಿಜಯ್​ ಸೇತುಪತಿ ಅವರು ಭಯಂಕರವಾಗಿ ನಟಿಸಿದ್ದಾರೆ. ದೀಪಿಕಾ ಪಡುಕೋಣೆ ಅವರು ಕೂಡ ನಿರಾಯಾಸವಾಗಿ ಅಭಿನಯಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಯನತಾರಾ ಅವರು ಮಿಂಚುತ್ತಿದ್ದಾರೆ. ಹಾಡುಗಳನ್ನು ಪದೇ ಪದೇ ಕೇಳುವಂತೆ ಮಾಡಿದ್ದಾರೆ ಅನಿರುದ್ಧ್​ ರವಿಚಂದರ್​. ನಮಗೆಲ್ಲ ನಿರ್ದೇಶಕ ಅಟ್ಲಿ ಅವರು ಹೆಮ್ಮೆ ತಂದಿದ್ದಾರೆ. ಆಲೋಚನೆಗೆ ಪ್ರೇರೇಪಿಸುವಂತಹ ಕಮರ್ಷಿಯಲ್​ ಸಿನಿಮಾ ಮಾಡಿ, ಭಾರತದ ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ನಿರ್ಮಿಸಿದ್ದಕ್ಕೆ ಅಟ್ಲಿ ಅವರಿಗೆ ದೊಡ್ಡ ಅಭಿನಂದನೆಗಳು’ ಎಂದು ಅಲ್ಲು ಅರ್ಜುನ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: 7 ದಿನಕ್ಕೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ 368 ಕೋಟಿ ರೂಪಾಯಿ ಗಳಿಸಿದ ‘ಜವಾನ್​’ ಚಿತ್ರ

ಅಲ್ಲು ಅರ್ಜುನ್​ ಅವರು ಸದ್ಯ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಪುಷ್ಪ’ ಚಿತ್ರದಲ್ಲಿನ ನಟನೆಗೆ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಹಾಗಾಗಿ ಇದರ ಸೀಕ್ವೆಲ್​ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈ ಚಿತ್ರಕ್ಕೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 2024ರ ಆಗಸ್ಟ್​ 15ರಂದು ‘ಪುಷ್ಪ 2’ ಚಿತ್ರ ಬಿಡುಗಡೆ ಆಗಲಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ