AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ’ ಬಾಕ್ಸ್ ಆಫೀಸ್ ಕಲೆಕ್ಷನ್; ಎರಡನೇ ದಿನವೂ ಮಂಕಾದ ಅಲಿಯಾ ಭಟ್ ಸಿನಿಮಾ

‘ಏಕ್ ಥಾ ಟೈಗರ್’ ಚಿತ್ರದಿಂದ ಆರಂಭವಾದ ವೈಆರ್‌ಎಫ್ ಸ್ಪೈ ಯೂನಿವರ್ಸ್‌ನಲ್ಲಿ ಇದುವರೆಗೆ ‘ಟೈಗರ್ ಜಿಂದಾ ಹೈ’, ‘ವಾರ್’, ‘ಪಠಾಣ್’, ‘ಟೈಗರ್ 3’ ಮತ್ತು ‘ವಾರ್ 2’ ಚಿತ್ರಗಳು ಬಂದಿವೆ. ಆದರೆ ಮೊದಲ ಬಾರಿಗೆ ಮಹಿಳಾ ಏಜೆಂಟ್‌ಗಳನ್ನು ಇಟ್ಟುಕೊಂಡು ಮಾಡಿದ ಈ ಪ್ರಯೋಗ ಸದ್ಯಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಮಂಕಾಗಿದೆ. ನಿರೀಕ್ಷಿತ ಮಟ್ಟದಲ್ಲಿ ‘ಆಲ್ಫಾ’ ಸಿನಿಮಾ ಕಲೆಕ್ಷನ್ ಮಾಡಿಲ್ಲ.

‘ಆಲ್ಫಾ’ ಬಾಕ್ಸ್ ಆಫೀಸ್ ಕಲೆಕ್ಷನ್; ಎರಡನೇ ದಿನವೂ ಮಂಕಾದ ಅಲಿಯಾ ಭಟ್ ಸಿನಿಮಾ
Sharvari, Alia Bhatt
ಮದನ್​ ಕುಮಾರ್​
|

Updated on: Jul 05, 2026 | 7:29 AM

Share

ಮುಖ್ಯಾಂಶಗಳು

  • ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಸಿನಿಮಾಗಳ ಪೈಕಿ ‘ಆಲ್ಫಾ’ ಗಳಿಕೆ ತೀರಾ ಕಡಿಮೆ.
  • ಆಲಿಯಾ ಭಟ್, ಶರ್ವರಿ ನಟನೆಯ ಈ ಚಿತ್ರಕ್ಕೆ ಎಲ್ಲೆಡೆ ಸಿಗುತ್ತಿದೆ ಮಿಶ್ರ ಪ್ರತಿಕ್ರಿಯೆ.
  • ವೀಕೆಂಡ್ ಇದ್ದರೂ ಎರಡನೇ ದಿನ ಕೇವಲ 8.67 ಕೋಟಿ ರೂಪಾಯಿ ಗಳಿಸಿದ ಚಿತ್ರ.

ಯಶ್ ರಾಜ್ ಫಿಲ್ಮ್ಸ್ (YRF) ಸ್ಪೈ ಯೂನಿವರ್ಸ್‌ನ ಮೊದಲ ಮಹಿಳಾ ಪ್ರಧಾನ ಚಿತ್ರ ಎಂದೇ ಭಾರಿ ಸದ್ದು ಮಾಡಿದ್ದ ‘ಆಲ್ಫಾ’ (Alpha) ಸಿನಿಮಾ ಜುಲೈ 3ರಂದು ಅದ್ದೂರಿಯಾಗಿ ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟಿತ್ತು. ಬಾಲಿವುಡ್ ಸ್ಟಾರ್ ನಟಿ ಆಲಿಯಾ ಭಟ್ (Alia Bhatt) ಮತ್ತು ಶರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಆ್ಯಕ್ಷನ್ ಚಿತ್ರಕ್ಕೆ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರ ನೇರ ಪರಿಣಾಮ ಈಗ ಚಿತ್ರದ ಬಾಕ್ಸ್ ಆಫೀಸ್ ಗಳಿಕೆಯ ಮೇಲೂ ಬೀರಿದೆ. ಸಾಮಾನ್ಯವಾಗಿ ವೀಕೆಂಡ್, ಅದರಲ್ಲೂ ಮೊದಲ ಶನಿವಾರದಂದು ಚಿತ್ರದ ಕಲೆಕ್ಷನ್‌ನಲ್ಲಿ ಭಾರಿ ಏರಿಕೆ ನಿರೀಕ್ಷಿಸಲಾಗಿತ್ತು. ಆದರೆ, ‘ಆಲ್ಫಾ’ ಚಿತ್ರದ ವಿಚಾರದಲ್ಲಿ ಅದು ಉಲ್ಟಾ ಹೊಡೆದಿದ್ದು, ಎರಡನೇ ದಿನದ ಗಳಿಕೆಯಲ್ಲಿ ಕುಸಿತ ಕಂಡಿದೆ.

ಎರಡನೇ ದಿನ ‘ಆಲ್ಫಾ’ ಸಿನಿಮಾದ ಗಳಿಕೆ ಎಷ್ಟು?

ಚಿತ್ರರಂಗದ ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ನೀಡಿರುವ ಮಾಹಿತಿ ಪ್ರಕಾರ, ಶನಿವಾರದಂದು ಒಟ್ಟು 5,877 ಶೋಗಳಿಂದ ಈ ಸಿನಿಮಾ ಕೇವಲ 8.67 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನ (ಶುಕ್ರವಾರ) ಭಾರತದಲ್ಲಿ 9.25 ಕೋಟಿ ರೂಪಾಯಿ ಗಳಿಸುವ ಮೂಲಕ ಸಾಧಾರಣ ಆರಂಭ ಪಡೆದುಕೊಂಡಿತ್ತು. ದೇಶಾದ್ಯಂತ ಒಟ್ಟು 7,534 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಇಷ್ಟು ದೊಡ್ಡ ಮಟ್ಟದ ಹೈಪ್ ಇತ್ತಾದರೂ, ವೈಆರ್‌ಎಫ್ ಸ್ಪೈ ಯೂನಿವರ್ಸ್​ನ ಇತರೆ ಸಿನಿಮಾಗಳಿಗೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಓಪನಿಂಗ್. ಸದ್ಯಕ್ಕೆ ಎರಡು ದಿನಗಳ ಚಿತ್ರದ ಒಟ್ಟು ಕಲೆಕ್ಷನ್ 17.92 ಕೋಟಿ ರೂಪಾಯಿಗೆ ಬಂದು ತಲುಪಿದೆ.

ವೈಆರ್‌ಎಫ್ ಸ್ಪೈ ಯೂನಿವರ್ಸ್ ಸಿನಿಮಾಗಳಿಗೆ ಹೋಲಿಕೆ:

2023ರಲ್ಲಿ ಬಿಡುಗಡೆಯಾಗಿದ್ದ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಚಿತ್ರ ‘ಪಠಾಣ್’, ತನ್ನ ಎರಡನೇ ದಿನ ಭಾರತದಲ್ಲಿ ಬರೋಬ್ಬರಿ 70.50 ಕೋಟಿ ರೂ. ನೆಟ್ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿತ್ತು. ಅದೇ ವರ್ಷ ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಸಿನಿಮಾ ದೇಶಾದ್ಯಂತ ಒಟ್ಟು 19,646 ಶೋಗಳಿಂದ ಎರಡನೇ ದಿನ 59.25 ಕೋಟಿ ರೂ. ಬಾಚಿಕೊಂಡಿತ್ತು.

ಅತ್ಯಂತ ಕಳಪೆ ಕಲೆಕ್ಷನ್ ಮಾಡಿದ ಸಿನಿಮಾ:

ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ನಟನೆಯ ಬಿಗ್ ಆ್ಯಕ್ಷನ್ ಸಿನಿಮಾ ‘ವಾರ್ 2’, ತನ್ನ ಎರಡನೇ ದಿನ 18,228 ಶೋಗಳಿಂದ 57.85 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ ಈ ಎಲ್ಲಾ ದೈತ್ಯ ಸಿನಿಮಾಗಳ ಎದುರು ಅಲಿಯಾ ಭಟ್ ಮತ್ತು ಶರ್ವರಿ ನಟನೆಯ ‘ಆಲ್ಫಾ’ ಸಿನಿಮಾ ಕೇವಲ 5,877 ಶೋಗಳಿಂದ ಕೇವಲ 8.67 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ವೈಆರ್‌ಎಫ್ ಸ್ಪೈ ಯೂನಿವರ್ಸ್ ಇತಿಹಾಸದಲ್ಲೇ ಎರಡನೇ ದಿನದ ಅತ್ಯಂತ ಕಳಪೆ ಕಲೆಕ್ಷನ್ ದಾಖಲಿಸಿದ ಚಿತ್ರ ‘ಆಲ್ಫಾ’ ಆಗಿದೆ.

ಇದನ್ನೂ ಓದಿ: ‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್

ಶಿವ ರವೈಲ್ ನಿರ್ದೇಶನದ ಈ ಚಿತ್ರದಲ್ಲಿ ಅಲಿಯಾ ಭಟ್ ಮತ್ತು ಶರ್ವರಿ ವಾಗ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ಬಾಬಿ ಡಿಯೋಲ್ ಹಾಗೂ ಅನಿಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ವಿಶೇಷವೆಂದರೆ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಸ್ಟಾರ್ ಸ್ಪೈ ‘ಕಬೀರ್’ ಪಾತ್ರದಲ್ಲಿ ಹೃತಿಕ್ ರೋಷನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದಾರೆ. ಹಾಗಿದ್ದರೂ ಚಿತ್ರದ ಕಲೆಕ್ಷನ್ ಹೆಚ್ಚುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ