AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಚಿತ್ರಕ್ಕೆ ಕಾಯಬೇಡಿ’; ‘ಆಲ್ಫಾ’ ಟ್ರೇಲರ್​ಗೆ ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್

ಯಶ್ ರಾಜ್ ಫಿಲ್ಮ್ಸ್‌ನ ಬಹುನಿರೀಕ್ಷಿತ 'ಆಲ್ಫಾ' ಸಿನಿಮಾದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಪ್ರೇಕ್ಷಕರಿಂದ ಭಾರಿ ಟ್ರೋಲ್ ಮತ್ತು ನಿರಾಶೆ ವ್ಯಕ್ತವಾಗಿದೆ. ಆಲಿಯಾ ಭಟ್, ಶಾರ್ವರಿ ನಟನೆಯ ಈ ಚಿತ್ರದ ಟ್ರೇಲರ್ ಎನರ್ಜಿ ಡ್ರಿಂಕ್ಸ್ ಜಾಹೀರಾತಿನಂತೆ ಇದೆ ಎಂದು ನೆಟ್ಟಿಗರು ಲೇವಡಿ ಮಾಡಿದ್ದಾರೆ. ಹೃತಿಕ್ ರೋಷನ್ ಅತಿಥಿ ಪಾತ್ರವೂ ಟ್ರೋಲ್ ಗೆ ಒಳಗಾಗಿದೆ. ವೈಆರ್‌ಎಫ್ ಸ್ಪೈ ಯೂನಿವರ್ಸ್ ತನ್ನ ಆಕರ್ಷಣೆಯನ್ನು ಕಳೆದುಕೊಳ್ಳುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ.

‘ಈ ಚಿತ್ರಕ್ಕೆ ಕಾಯಬೇಡಿ’; 'ಆಲ್ಫಾ' ಟ್ರೇಲರ್​ಗೆ ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್
ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Jun 18, 2026 | 1:11 PM

Share

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ, ಆಲಿಯಾ ಭಟ್ ಹಾಗೂ ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಆಲ್ಫಾ’ ಸಿನಿಮಾದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಯಶ್ ರಾಜ್​​​ ಫಿಲ್ಮ್ಸ್ ಸ್ಪೈ ಯೂನಿವರ್ಸ್‌ನ ಮೊದಲ ಚಿತ್ರ ಇದಾಗಿರುವುದರಿಂದ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಟ್ರೇಲರ್ ಕಂಡ ಪ್ರೇಕ್ಷಕರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದು, ಕಾಮೆಂಟ್ ಸೆಕ್ಷನ್‌ನಲ್ಲಿ ತರಹೇವಾರಿ ಜೋಕ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಟ್ರೇಲರ್​​ನಲ್ಲಿ ಕಲರ್ ಗ್ರೇಡಿಂಗ್ ಹಾಗೂ ಆ್ಯಕ್ಷನ್ ಸೀನ್‌ಗಳನ್ನು ನೋಡಿದ ನೆಟ್ಟಿಗರು, ‘ಇದು ಸಿನಿಮಾ ಟ್ರೇಲರ್ ರೀತಿ ಕಾಣುತ್ತಿಲ್ಲ, ಬದಲಿಗೆ ಯಾವುದೋ ಎನರ್ಜಿ ಡ್ರಿಂಕ್ಸ್ ಜಾಹೀರಾತಿನಂತೆ ಕಾಣುತ್ತಿದೆ’ ಎಂದು ಕಾಲೆಳೆದಿದ್ದಾರೆ. ಇನ್ನು ಕೆಲವರು, ‘ಲೇಡೀಸ್ ಅಂಡ್ ಜೆಂಟಲ್‌ಮನ್, ಈ ಚಿತ್ರವನ್ನು ನೋಡಲು ಯಾರೂ ರೆಡಿಯಾಗುವ ಅಗತ್ಯವಿಲ್ಲ’ ಎಂದು ಲೇವಡಿ ಮಾಡಿದ್ದಾರೆ.

ಚಿತ್ರದಲ್ಲಿ ಹೃತಿಕ್ ರೋಷನ್ ಅವರ ಅತಿಥಿ ಪಾತ್ರ ಇರುವುದನ್ನು ಟ್ರೇಲರ್​​ನಲ್ಲೇ ರಿವೀಲ್ ಮಾಡಲಾಗಿದೆ. ಚಿತ್ರತಂಡ ಎಷ್ಟು ಹೆದರಿದೆ ಎಂದರೆ, ಹೈಪ್ ಕ್ರಿಯೇಟ್ ಮಾಡಲು ಈಗಲೇ ಅತಿಥಿ ಪಾತ್ರವನ್ನು ತೋರಿಸಬೇಕಾಗಿ ಬಂದಿದೆ ಎಂದು ನೆಟ್ಟಿಗರು ಕಿಚಾಯಿಸುತ್ತಿದ್ದಾರೆ. ಟೀಸರ್‌ನಲ್ಲಿ ಹೃತಿಕ್ ಲುಕ್ ನೋಡಿ, ‘ಹೃತಿಕ್ ರೋಷನ್ ಅವರು ಜಾದೂ (ಕೋಯಿ ಮಿಲ್ ಗಯಾ ಸಿನಿಮಾ ಪಾತ್ರ) ಬಟ್ಟೆಯನ್ನು ಕದ್ದು ಹಾಕಿಕೊಂಡಂತಿದೆ’ ಹಾಗೂ ‘ಹೃತಿಕ್ ಇಲ್ಲಿ ಮೌಂಟೇನ್ ಡ್ಯೂ… ಡರ್ ಕೆ ಆಗೇ ಜೀತ್ ಹೈ ಎಂದು ಹೇಳುವುದೊಂದೇ ಬಾಕಿ ಇತ್ತು’ ಎಂದು ತಮಾಷೆ ಮಾಡಿದ್ದಾರೆ.

ಇನ್ನು ಕೆಲವರು ಹಾಲಿವುಡ್‌ನ ‘ಬ್ಲ್ಯಾಕ್ ವಿಡೋ’ ಚಿತ್ರದ ಅತ್ಯಂತ ಲೋ-ಬಜೆಟ್ ಆವೃತ್ತಿಯಂತೆ ಆಲಿಯಾ ಮತ್ತು ಶಾರ್ವರಿ ಕಾಣುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ‘ಈ ಚಿತ್ರವನ್ನು ನೋಡಲು ಬಂಕ್ ಮಾಡಿ ಆರಾಮಾಗಿ ಮನೆಯಲ್ಲಿ ಓದಿಕೊಳ್ಳಬಹುದು’ ಎಂದು ವಿದ್ಯಾರ್ಥಿಗಳು ಜೋಕ್ ಮಾಡುತ್ತಿದ್ದಾರೆ.

ತೂಕ ಕಳೆದುಕೊಳ್ಳುತ್ತಿದೆಯೇ ವೈಆರ್‌ಎಫ್ ಸ್ಪೈ ಯೂನಿವರ್ಸ್?

‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ವಾರ್’ ಮತ್ತು ‘ಪಠಾಣ್’ ನಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್, ಇತ್ತೀಚಿನ ದಿನಗಳಲ್ಲಿ ತನ್ನ ತೂಕ ಮತ್ತು ಕ್ರೇಜ್ ಅನ್ನು ಕಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಇದಕ್ಕೆ ಮುಂಚೆ ಬಿಡುಗಡೆಯಾಗಿದ್ದ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ನಟನೆಯ ‘ವಾರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿತ್ತು. ‘ವಾರ್ 2’ ಸೋಲಿನ ಬೆನ್ನಲ್ಲೇ ಈಗ ‘ಆಲ್ಫಾ’ ಚಿತ್ರದ ಮೇಲೂ ನೆಗೆಟಿವ್ ಕಮೆಂಟ್‌ಗಳು ಬರುತ್ತಿರುವುದು ನಿರ್ಮಾಣ ಸಂಸ್ಥೆಗೆ ತಲೆನೋವು ತಂದಿದೆ.

ಇದರ ಜೊತೆಗೆ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಪ್ರತಿ ಸಿನಿಮಾದಲ್ಲೂ ಭಾರತದ ಮಾಜಿ ‘ರಾ’ ಏಜೆಂಟ್‌ನನ್ನೇ ವಿಲನ್ ಆಗಿ ತೋರಿಸುವ ಹಳೇ ಟ್ರೆಂಡ್ ಅನ್ನೇ ಇಲ್ಲೂ ಮುಂದುವರಿಸಲಾಗಿದೆ ಎಂದು ಪ್ರೇಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ‘ಈ ಇಡೀ ಟ್ರೇಲರ್​​ನಲ್ಲಿ ಅತ್ಯಂತ ಧೈರ್ಯದ ಕೆಲಸ ಎಂದರೆ ಯೂಟ್ಯೂಬ್‌ನಲ್ಲಿ ಕಮೆಂಟ್ ಸೆಕ್ಷನ್ ಓಪನ್ ಇಟ್ಟಿರುವುದು’ ಎಂದು ನೆಟ್ಟಿಗರು ಚಿತ್ರತಂಡಕ್ಕೆ ಟಾಂಗ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ