AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅಮೀಷಾ ಪಟೇಲ್ ಪೋಷಕರ ಮನೆಯಲ್ಲಿ 5 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ

ಖ್ಯಾತ ನಟಿ ಅಮೀಷಾ ಪಟೇಲ್ ಪೋಷಕರ ಮನೆಯಲ್ಲಿ ಆದ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಚಿನ್ನದ ಬಳೆ ಕದ್ದ ಆರೋಪದ ಮೇಲೆ 40ರ ಪ್ರಾಯದ ಮಹಿಳೆಯನ್ನು ಬಂಧಿಸಲಾಗಿದೆ. ಕಳ್ಳತನ ಮತ್ತು ಬಂಧನದ ಬಗ್ಗೆ ನಟಿಯ ಮ್ಯಾನೇಜರ್ ಕಡೆಯಿಂದ ಪ್ರತಿಕ್ರಿಯೆ ಸಿಕ್ಕಿದೆ.

ನಟಿ ಅಮೀಷಾ ಪಟೇಲ್ ಪೋಷಕರ ಮನೆಯಲ್ಲಿ 5 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ
Ameesha Patel Image Credit source: instagram/ameeshapatel9
ಮದನ್​ ಕುಮಾರ್​
|

Updated on: Sep 14, 2026 | 10:10 AM

Share

ಬಾಲಿವುಡ್ ನಟಿ ಅಮೀಷಾ ಪಟೇಲ್ ಅವರ ಪೋಷಕರ ಮನೆಯಲ್ಲಿ ಕಳ್ಳತನ ಆಗಿದೆ. ಮುಂಬೈನ ಚರ್ಚ್‌ಗೇಟ್‌ನಲ್ಲಿರುವ ನಿವಾಸದಲ್ಲಿ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ವಜ್ರ ಖಚಿತ ಚಿನ್ನದ ಬಳೆ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮರೀನ್ ಡ್ರೈವ್ ಪೊಲೀಸರಿಗೆ ನಟಿಯ ತಾಯಿ ಆಶಾ ಪಟೇಲ್ ಅವರು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ, ಮನೆಯಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪಾಲ್ಘರ್ ಮೂಲದ ಸೀಮಾ ಘಾಟೆ ಎಂದು ಗುರುತಿಸಲಾಗಿದೆ. ಈಕೆ ಅಮೀಷಾ ಪಟೇಲ್ ಅವರ ತಾಯಿ ಆಶಾ ಪಟೇಲ್ ಅವರ ಮನೆಯಲ್ಲಿ ಕಳೆದ ಒಂದೂವರೆಯಿಂದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಳು.

ಪೋಲಿಸರ ಮಾಹಿತಿಯ ಪ್ರಕಾರ, ಜನವರಿ ತಿಂಗಳಲ್ಲಿ ಆಶಾ ಪಟೇಲ್ ಅವರ ನಿವಾಸದಲ್ಲಿದ್ದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ವಜ್ರ ಖಚಿತ ಚಿನ್ನದ ಬಳೆಯೊಂದು ನಾಪತ್ತೆಯಾಗಿತ್ತು. ಮನೆಯಲ್ಲಿ ಕೆಲಸಕ್ಕಿದ್ದ ಸೀಮಾ ಘಾಟೆ ಮೇಲೆಯೇ ಆಶಾ ಪಟೇಲ್ ಅವರಿಗೆ ಅನುಮಾನವಿತ್ತು. ಹೀಗಾಗಿ, ಪೊಲೀಸರಿಗೆ ದೂರು ನೀಡುವ ಮುನ್ನ ಕಳೆದ 5-6 ತಿಂಗಳುಗಳಿಂದ ಆಕೆಯನ್ನು ಕರೆದು ಕಳವು ಮಾಡಿದ್ದನ್ನು ಒಪ್ಪಿಕೊಂಡು ಆಭರಣವನ್ನು ಹಿಂತಿರುಗಿಸುವಂತೆ ಕೇಳಿಕೊಳ್ಳುತ್ತಿದ್ದರು.

ಆದರೆ, ಆರೋಪಿ ಸೀಮಾ ಬಳೆಯನ್ನು ಹಿಂದಿರುಗಿಸದಿದ್ದಾಗ ಮತ್ತು ಆಕೆಯಿಂದ ಸೂಕ್ತ ಉತ್ತರ ಬಾರದಿದ್ದಾಗ, ಆಶಾ ಪಟೇಲ್ ಅವರು ಅಂತಿಮವಾಗಿ ಮರೀನ್ ಡ್ರೈವ್ ಪೊಲೀಸ್ ಠಾಣೆಗೆ ತೆರಳಿ ಅಧಿಕೃತವಾಗಿ ದೂರು ದಾಖಲಿಸಿದರು. ದೂರು ಸ್ವೀಕರಿಸಿದ ಮರೀನ್ ಡ್ರೈವ್ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೂಕ್ತ ಕಾಯ್ದೆಗಳಡಿ ಅಪರಿಚಿತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಹಿರಿಯ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದ ಕ್ರೈಂ ಡಿಟೆಕ್ಷನ್ ತಂಡವು ಆರೋಪಿಯ ಚಲನವಲನದ ಜಾಡು ಹಿಡಿದು, ಆಕೆಯನ್ನು ವಿರಾರ್‌ನಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಸೀಮಾ ಘಾಟೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 15ರವರೆಗೆ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಸದ್ಯ ಕಳುವಾಗಿರುವ ವಜ್ರದ ಬಳೆಯನ್ನು ವಶಪಡಿಸಿಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಇದರ ಜೊತೆಗೆ, ಆರೋಪಿ ಸೀಮಾಗೆ ಈ ಹಿಂದೆ ಯಾವುದೇ ಅಪರಾಧ ಹಿನ್ನೆಲೆ ಇದೆಯೇ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಜತೆ ಡೇಟಿಂಗ್ ವದಂತಿ: ಖಡಕ್ ತಿರುಗೇಟು ನೀಡಿದ ನಟಿ ಅಮೀಷಾ ಪಟೇಲ್

ಈ ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಮೀಷಾ ಪಟೇಲ್ ಅವರ ಮ್ಯಾನೇಜರ್, ‘ಹೌದು, ಕಳವು ನಡೆದಿದ್ದು ನಿಜ. ಮನೆಯ ಕೆಲಸದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಆಕೆ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿದ್ದಾಳೆ’ ಎಂದು ಖಚಿತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!