AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್​ನ ಚಾಕೊಲೇಟ್​ ತಂದು ಬಾಲಿವುಡ್​ನಲ್ಲಿ ಗೋಲ್​ಗಪ್ಪ ಮಾಡಿದ ಆಮಿರ್​ ಖಾನ್​; ಸಖತ್​ ಟ್ರೋಲ್​

Laal Singh Chaddha: ‘ಫಾರೆಸ್ಟ್​ ಗಂಪ್​’ ಸಿನಿಮಾದ ಕಥೆಯನ್ನು ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ಯಥಾವತ್ತು ನಕಲು ಮಾಡಿದ್ದು ಕೆಲವರಿಗೆ ಸರಿ ಎನಿಸಿಲ್ಲ. ಈ ಕಾರಣಕ್ಕಾಗಿ ಆಮಿರ್​ ಖಾನ್​ ಟ್ರೋಲ್​ ಆಗುತ್ತಿದ್ದಾರೆ.

ಹಾಲಿವುಡ್​ನ ಚಾಕೊಲೇಟ್​ ತಂದು ಬಾಲಿವುಡ್​ನಲ್ಲಿ ಗೋಲ್​ಗಪ್ಪ ಮಾಡಿದ ಆಮಿರ್​ ಖಾನ್​; ಸಖತ್​ ಟ್ರೋಲ್​
ಆಮಿರ್ ಖಾನ್
TV9 Web
| Edited By: |

Updated on: Jun 01, 2022 | 1:54 PM

Share

ಹಿಂದಿ ಸಿನಿಪ್ರಿಯರ ವಲಯದಲ್ಲಿ ಸಖತ್​ ನಿರೀಕ್ಷೆ ಮೂಡಿಸಿರುವ ಸಿನಿಮಾಗಳ ಪೈಕಿ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ಕೂಡ ಪ್ರಮುಖವಾಗಿದೆ. ಈ ಸಿನಿಮಾದಲ್ಲಿ ಆಮಿರ್​ ಖಾನ್​ (Aamir Khan) ಪ್ರಮುಖ ಪಾತ್ರ ಮಾಡಿದ್ದು, ಅವರಿಗೆ ಜೋಡಿಯಾಗಿ ಕರೀನಾ ಕಪೂರ್ ಖಾನ್ (Kareena Kapoor Khan)​​ ನಟಿಸಿದ್ದಾರೆ. ಟಾಲಿವುಡ್​ ನಟ ನಾಗ ಚೈತನ್ಯ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ರಿಲೀಸ್​ ವಿಳಂಬ ಆಯಿತು. ಆಗಸ್ಟ್​ 11ರಂದು ಚಿತ್ರ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಪ್ರಚಾರ ಕಾರ್ಯವೂ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಸಿನಿಮಾದ ಟ್ರೇಲರ್​ ಬಿಡುಗಡೆ ಆಯಿತು. ಅದನ್ನು ಕಂಡ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇದೊಂದು ಕಾಪಿ ಸಿನಿಮಾ ಎಂದು ಅನೇಕರು ಟೀಕೆ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆಮಿರ್​ ಖಾನ್​ ಅವರನ್ನು ಸಖತ್​ ಟ್ರೋಲ್​ ಮಾಡಲಾಗುತ್ತಿದೆ. ಆ ಕುರಿತು ಇಲ್ಲಿದೆ ಮಾಹಿತಿ..

ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಡಿಬರುತ್ತಿದೆ. ಮೂಲ ಸಿನಿಮಾದಲ್ಲಿ ಟಾಮ್​ ಹ್ಯಾಂಕ್ಸ್​ ಮಾಡಿದ್ದ ಪಾತ್ರವನ್ನು ಬಾಲಿವುಡ್​ನಲ್ಲಿ ಆಮಿರ್​ ಖಾನ್​ ಮಾಡಿದ್ದಾರೆ. ‘ಸೀಕ್ರೆಟ್​ ಸೂಪರ್​ ಸ್ಟಾರ್​’ ಖ್ಯಾತಿಯ ಅದ್ವೈತ್​ ಚಂದನ್​ ಅವರು ​ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಫಾರೆಸ್ಟ್​ ಗಂಪ್​’ ಸಿನಿಮಾದ ಕಥೆಯನ್ನು ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ಯಥಾವತ್ತು ನಕಲು ಮಾಡಿರುವುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಅದರಲ್ಲೂ ಒಂದು ಫೇಮಸ್​ ಡೈಲಾಗ್​ ಅನ್ನು ತಮ್ಮದೇ ರೀತಿಯಲ್ಲಿ ಬದಲಾವಣೆ ಮಾಡಿಕೊಂಡಿರುವ ಕಾರಣದಿಂದಲೂ ಈ ಸಿನಿಮಾ ಟ್ರೋಲ್​ ಆಗುತ್ತಿದೆ.

‘ಬದುಕು ಒಂದು ಚಾಕೊಲೇಟ್​ ಬಾಕ್ಸ್​ ಇದ್ದಂತೆ. ಯಾವಾಗ ಏನು ಸಿಗತ್ತೋ ಗೊತ್ತಾಗಲ್ಲ ಅಂತ ನಮ್ಮ ಅಮ್ಮ ಯಾವಾಗಲೂ ಹೇಳುತ್ತಿದ್ದರು’ ಎಂಬ ಡೈಲಾಗ್​ ‘ಫಾರೆಸ್ಟ್​ ಗಂಪ್​’ ಚಿತ್ರದಲ್ಲಿ ಇದೆ. ‘ಜೀವನ ಎಂಬುದು ಗೋಲ್​ಗಪ್ಪಾ ರೀತಿ ಇರುತ್ತದೆ. ಹೊಟ್ಟೆ ತುಂಬಿದರೂ ಮನಸ್ಸು ತುಂಬುವುದಿಲ್ಲ ಅಂತ ಅಮ್ಮ ಹೇಳುತ್ತಿದ್ದರು’ ಎಂಬ ಡೈಲಾಗ್​ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾದ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ.

ಇದನ್ನೂ ಓದಿ
Image
ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ
Image
Aamir Khan: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಹಿಷ್ಕಾರಕ್ಕೆ ನೆಟ್ಟಿಗರ ಒತ್ತಾಯ; ಆಮಿರ್​ ಖಾನ್​ ಮಾಡಿದ ತಪ್ಪೇನು?
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
‘ಲಾಲ್​ ಸಿಂಗ್​ ಚಡ್ಡಾ’ ಚಿತ್ರಕ್ಕೆ ಆಮಿರ್​, ಕರೀನಾ, ನಾಗ ಚೈತನ್ಯ ಪಡೆದ ಸಂಭಾವನೆ ಎಷ್ಟು ಕೋಟಿ?

ಈ ರೀತಿ ಡೈಲಾಗ್​ ಬದಲಾಯಿಸಿರುವುದನ್ನು ಕ್ರಿಯೇಟಿವಿಟಿ ಎಂದು ಕೆಲವರು ಬಣ್ಣಿಸಿದ್ದಾರೆ. ಆದರೆ ಇದು ಸರಿಯಾದ ರೀತಿಯ ಬಳಕೆ ಅಲ್ಲ ಎಂದು ಕೆಲವರು ಟ್ರೋಲ್​ ಮಾಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಸುದ್ದಿ ಆಗುತ್ತಿದೆ. ‘ಪಿಕೆ’ ಸಿನಿಮಾದಲ್ಲಿ ಕಾಣಿಸಿಕೊಂಡ ರೀತಿಯಲ್ಲೇ ಆಮಿರ್​ ಖಾನ್​ ಮತ್ತೊಮ್ಮೆ ನಟಿಸಿದ್ದಾರೆ ಎಂಬ ಕಮೆಂಟ್​ಗಳು ಕೂಡ ಬಂದಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ