AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಗೆ ಅಮಿತಾಭ್​ ಬಚ್ಚನ್​ ದಾಖಲು; ಆಂಜಿಯೋಪ್ಲಾಸ್ಟಿ ಮಾಡಿದ ವೈದ್ಯರು

ಭಾರತೀಯ ಚಿತ್ರರಂಗದ ಲೆಜೆಂಡರಿ ನಟ ಅಮಿತಾಭ್​ ಬಚ್ಚನ್​ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಕುಟುಂಬದವರು ಅಥವಾ ಆಸ್ಪತ್ರೆಯವರು ಅಧಿಕೃತ ಮಾಹಿತಿ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಹೆಲ್ತ್​ ಅಪ್​ಡೇಟ್​ಗಾಗಿ ನಿರೀಕ್ಷಿಸಲಾಗಿದೆ.

ಖಾಸಗಿ ಆಸ್ಪತ್ರೆಗೆ ಅಮಿತಾಭ್​ ಬಚ್ಚನ್​ ದಾಖಲು; ಆಂಜಿಯೋಪ್ಲಾಸ್ಟಿ ಮಾಡಿದ ವೈದ್ಯರು
ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
|

Updated on:Mar 15, 2024 | 2:35 PM

Share

ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಈಗ 81 ವರ್ಷ ವಯಸ್ಸು. ಹಲವು ವರ್ಷಗಳಿಂದ ಅವರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಅಮಿತಾಭ್​ ಬಚ್ಚನ್​ ಅವರು ಆಸ್ಪತ್ರೆಗೆ ದಾಖಲಾದ (Amitabh Bachchan Hospitalised) ವಿಷಯ ತಿಳಿದು ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಆದರೆ ಬಿಗ್​ ಬಿ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಎದುರಾಗಿಲ್ಲ ಎಂದು ಹೇಳಲಾಗುತ್ತಿದೆ. ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಅವರಿಗೆ ಆಂಜಿಯೋಪ್ಲಾಸ್ಟಿ (Angioplasty) ಮಾಡಲಾಗಿದೆ. ಆದರೆ ಅವರಿಗೆ ಹೃದಯಸಂಬಂಧಿ ಅನಾರೋಗ್ಯ ಉಂಟಾಗಿಲ್ಲ ಎಂದು ವರದಿ ಆಗಿದೆ.

ಅಮಿತಾಭ್​ ಬಚ್ಚನ್​ ಅವರು ಆಸ್ಪತ್ರೆಗೆ ದಾಖಲಾದ ವಿಷಯ ಹೊರಬೀಳುವುದಕ್ಕೂ ಒಂದು ಗಂಟೆ ಮೊದಲು ಅವರ ಮಾಡಿದ ಎಕ್ಸ್​ (ಟ್ವಿಟರ್​) ಪೋಸ್ಟ್​ ಗಮನ ಸೆಳೆದಿತ್ತು. ‘ಎಂದೆಂದಿಗೂ ಚಿರಋಣಿ’ ಎಂದು ಅಮಿತಾಭ್​ ಬಚ್ಚನ್​ ಬರೆದುಕೊಂಡಿದ್ದಾರೆ. ಸರ್ಜರಿ ಆದ ಬಳಿಕ ಅವರು ಈ ರೀತಿ ಪೋಸ್ಟ್​ ಮಾಡಿರಬಹುದು ಎನ್ನಲಾಗಿದೆ. ಬೇಗ ಗುಣಮುಖರಾಗಿ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದಾಕ್ಷಣ ಅಮಿತಾಭ್​ ಬಚ್ಚನ್​ ಅವರಿಗೆ ಹೃದಯಕ್ಕೆ ಸಂಬಂಧಿಸಿದ ತೊಂದರೆ ಎದುರಾಗಿರಬಹುದಾ ಎಂಬ ಅನುಮಾನ ಮೂಡುತ್ತದೆ. ಆದರೆ ವರದಿಗಳ ಪ್ರಕಾರ, ಕಾಲಿನ ರಕ್ತನಾಳದ ಸಮಸ್ಯೆ ಇರುವುದರಿಂದ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಒಟ್ಟಿನಲ್ಲಿ ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಆಸ್ಪತ್ರೆ ಅಥವಾ ಕುಟುಂಬದವರು ಹೆಲ್ತ್​ ಅಪ್​ಡೇಟ್​ ನೀಡಲಿ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ.

ಇದನ್ನೂ ಓದಿ: ಎರಡನೇ ಬಾರಿ ಅಯೋಧ್ಯೆಗೆ ಭೇಟಿ ನೀಡಿದ ‘ಬಿಗ್​ ಬಿ’ ಅಮಿತಾಭ್​ ಬಚ್ಚನ್​

ಅಮಿತಾಭ್​ ಬಚ್ಚನ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. 81ನೇ ವಯಸ್ಸಿನಲ್ಲೂ ಅವರು ಅದೇ ಕ್ರೇಜ್​ ಉಳಿಸಿಕೊಂಡಿದ್ದಾರೆ. ಭಾರಿ ಬೇಡಿಕೆ ಹೊಂದಿರುವ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ ರೀತಿಯ ಹೈವೋಲ್ಟೇಜ್​ ಸಿನಿಮಾಗಳಲ್ಲಿ ಅಮಿತಾಭ್​ ಬಚ್ಚನ್​ ಅಭಿನಯಿಸುತ್ತಿದ್ದಾರೆ. ರಜನಿಕಾಂತ್​ ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ‘ವೆಟ್ಟೈಯಾನ್​’ ಸಿನಿಮಾದಲ್ಲೂ ಅಮಿತಾಭ್​ ಬಚ್ಚನ್​ ಅವರಿಗೆ ಒಂದು ಪ್ರಮುಖ ಪಾತ್ರಿವಿದೆ. ಆ ಸಿನಿಮಾದ ಶೂಟಿಂಗ್​ ಕೂಡ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:25 pm, Fri, 15 March 24

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?