AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಆಪರೇಷನ್ ಆಗಿಲ್ಲ, ನಾನು ಚೆನ್ನಾಗಿದ್ದೇನೆ; ವದಂತಿಗೆ ಬ್ರೇಕ್ ಹಾಕಿದ ಅಮಿತಾಭ್ ಬಚ್ಚನ್

ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಸರ್ಜರಿ ಆಗಿದೆ ಮತ್ತು ಐಸಿಯುಗೆ ದಾಖಲಾಗಿದ್ದಾರೆ ಎಂಬ ವದಂತಿಗಳಿಗೆ ಸ್ವತಃ ಬಿಗ್ ಬಿ ಬ್ರೇಕ್ ಹಾಕಿದ್ದಾರೆ. ತಾವು ಬರೆದಿದ್ದ ಬ್ಲಾಗ್ ಪೋಸ್ಟ್ ಅನ್ನು ಜನರು ತಪ್ಪು ತಿಳಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿರುವ 83 ವರ್ಷದ ನಟ, ತಾವು ಸಂಪೂರ್ಣ ಆರಾಮಾಗಿ ಇರುವುದಾಗಿ ತಿಳಿಸಿದ್ದಾರೆ. ಇದು ಫಿಫಾ ವಿಶ್ವಕಪ್‌ನಲ್ಲಿ ಅರ್ಜೆಂಟೀನಾ ಸೋಲಿನ ಕುರಿತಾದ ಪೋಸ್ಟ್ ಆಗಿತ್ತು ಎಂದು ಹೇಳುವ ಮೂಲಕ ಅಭಿಮಾನಿಗಳು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

ನನಗೆ ಆಪರೇಷನ್ ಆಗಿಲ್ಲ, ನಾನು ಚೆನ್ನಾಗಿದ್ದೇನೆ; ವದಂತಿಗೆ ಬ್ರೇಕ್ ಹಾಕಿದ ಅಮಿತಾಭ್ ಬಚ್ಚನ್
ಅಮಿತಾಭ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 23, 2026 | 11:08 AM

Share

ಮುಖ್ಯಾಂಶಗಳು

  • ಮೆಸ್ಸಿ ಮತ್ತು ಅರ್ಜೆಂಟೀನಾ ಸೋಲಿಗೆ ಆಸ್ಪತ್ರೆಯ ಉದಾಹರಣೆ
  • ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದ ನಿಗೂಢ ಬ್ಲಾಗ್ ಪೋಸ್ಟ್
  • ಕಬಿಸಿ 18 ಹಾಗೂ ಕಲ್ಕಿ ಸೀಕ್ವೆಲ್‌ನಲ್ಲಿ ಬಿಗ್ ಬಿ ದರ್ಬಾರ್

ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ (Amitabh Bachchan) ಸರ್ಜರಿ ಆಗಿದೆ ಮತ್ತು ಐಸಿಯುಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಭಾರೀ ಆತಂಕ ಮೂಡಿಸಿತ್ತು. ಆದರೆ ಈಗ ಸ್ವತಃ ಬಿಗ್ ಬಿ ಅವರೇ ಈ ಎಲ್ಲಾ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಬ್ಲಾಗ್ ಪೋಸ್ಟ್ ಅನ್ನು ಜನರು ತಪ್ಪು ತಿಳಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಅರ್ಜೆಂಟೀನಾ ಸೋಲಿನ ಬಗ್ಗೆ ಬರೆದಿದ್ದ ಬಿಗ್ ಬಿ

ಅಮಿತಾಭ್ ಬಚ್ಚನ್ ಅವರಿಗೆ ಈಗ 83 ವರ್ಷ ವಯಸ್ಸು. ಅವರು ತಾವು ಸಂಪೂರ್ಣವಾಗಿ ಆರಾಮಾಗಿ ಇರುವುದಾಗಿ ತಿಳಿಸಿದ್ದಾರೆ. ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾ ಸೋತಿದ್ದರ ಬಗ್ಗೆ ಅವರು ಬ್ಲಾಗ್‌ನಲ್ಲಿ ಬರೆದಿದ್ದರು. ಚಾಂಪಿಯನ್ ಮೆಸ್ಸಿ ಸೋತಾಗ ಆಗುವ ಮಾನಸಿಕ ಸ್ಥಿತಿಯನ್ನು ವಿವರಿಸಲು ಅವರು ಆಸ್ಪತ್ರೆಯ ಉದಾಹರಣೆ ನೀಡಿದ್ದರು. ಆದರೆ ಜನರು ಅದನ್ನು ತಮಗೆ ಸಂಬಂಧಿಸಿದ್ದು ಎಂದು ತಪ್ಪಾಗಿ ಭಾವಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗೊಂದಲ ಮೂಡಿಸಿದ ಬ್ಲಾಗ್ ಪೋಸ್ಟ್

ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ‘ಆಸ್ಪತ್ರೆ, ಸರ್ಜರಿ ಮತ್ತು ಐಸಿಯು ಮುಗಿಸಿ ಮನೆಗೆ ಮರಳುವ ಸಮಯ ಅತ್ಯಂತ ಕಷ್ಟಕರ ಹಂತ’ ಎಂದು ಬರೆದುಕೊಂಡಿದ್ದರು. ’ನೀವು ದೊಡ್ಡ ಚಾಂಪಿಯನ್ ಆಗಿದ್ದಾಗ ಒಂದು ದಿನ ಸೋಲು ಎದುರಾಗುತ್ತದೆ. ಅದು ಜೀವನದ ಕಠಿಣ ಹಂತ’ ಎಂದೂ ಉಲ್ಲೇಖಿಸಿದ್ದರು. ಈ ಸಾಲುಗಳನ್ನು ನೋಡಿ ಅಭಿಮಾನಿಗಳು ಅಮಿತಾಭ್ ಅವರ ಆರೋಗ್ಯ ಕೈಕೊಟ್ಟಿದೆ ಎಂದು ಗಾಬರಿಯಾಗಿದ್ದರು.

ಇದನ್ನೂ ಓದಿ: 83ನೇ ವಯಸ್ಸಲ್ಲಿ ಅಮಿತಾಭ್ ಬಚ್ಚನ್​ಗೆ ಸರ್ಜರಿ? ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಪೋಸ್ಟ್

ಸಿನಿಮಾಗಳಲ್ಲಿ ಬ್ಯುಸಿ ಇರುವ ನಟ

ತಮ್ಮ ಆರೋಗ್ಯದ ವದಂತಿಗಳಿಗೆ ಪೂರ್ಣ ವಿರಾಮ ಇಟ್ಟಿರುವ ಬಿಗ್ ಬಿ ಸದ್ಯ ತಮ್ಮ ಶೂಟಿಂಗ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರು ಶೀಘ್ರದಲ್ಲೇ ‘ಕೌನ್ ಬನೇಗಾ ಕರೋಡ್‌ಪತಿ’ ಸೀಸನ್ 18 ರ ಹೋಸ್ಟಿಂಗ್ ಆರಂಭಿಸಲಿದ್ದಾರೆ. ಇದರೊಂದಿಗೆ ಸೂಪರ್ ಹಿಟ್ ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್‌ನಲ್ಲಿ ಅಶ್ವತ್ಥಾಮ ಪಾತ್ರದಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ‘ಸೆಕ್ಷನ್ 84’ ಮತ್ತು ‘ಸರ್ಕಾರ್ 4’ ಚಿತ್ರಗಳ ಕೆಲಸಗಳೂ ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್