ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್; ನಿಜಕ್ಕೂ ಆಗಿದ್ದೇನು?
ಅಮಿತಾಭ್ ಬಚ್ಚನ್ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್ ಬಚ್ಚನ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ.
ಖ್ಯಾತ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಶುಕ್ರವಾರ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಹೇಳಲಾಗಿತ್ತು. ಅಮಿತಾಭ್ ಬಚ್ಚನ್ಗೆ ಈಗ ವಯಸ್ಸು 81. ಅವರಿಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾದಾಗ ಅಭಿಮಾನಿಗಳಿಗೆ ಆತಂಕ ಆಗೋದು ಸಹಜ. ಆದರೆ, ಫ್ಯಾನ್ಸ್ ಆತಂಕ ಪಡುವ ಅಗತ್ಯವಿಲ್ಲ. ಏಕೆಂದರೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಅಮಿತಾಭ್ ಬಚ್ಚನ್ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್ ಬಚ್ಚನ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ. ನಟನ ಕಾಲಿನ ರಕ್ತನಾಳದ ಸಮಸ್ಯೆ ಉಂಟಾಗಿತ್ತು. ಇದಕ್ಕಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಅಮಿತಾಭ್ ಶುಕ್ರವಾರ ಸಂಜೆಯೇ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಅವರ ಹೆಲ್ತ್ ಅಪ್ಡೇಟ್ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಅವರು ಬೇಗ ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹೇಳಿದ್ದಾರೆ.
ಟ್ವಿಟರ್ನಲ್ಲಿ ಪೋಸ್ಟ್
ಅಮಿತಾಭ್ ಟ್ವಿಟರ್ನಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಸದಾ ಒಂದಲ್ಲಾ ಒಂದು ವಿಚಾರದ ಬಗ್ಗೆ ಟ್ವೀಟ್ ಮಾಡುತ್ತಾ ಇರುತ್ತಾರೆ. ಆಸ್ಪತ್ರೆಗೆ ಅಡ್ಮಿಟ್ ಆಗುವ ಸುದ್ದಿ ಹೊರ ಬೀಳುವುದಕ್ಕೂ ಮೊದಲು ಟ್ವಿಟರ್ನಲ್ಲಿ ಒಂದು ಲೈನ್ ಹಾಕಿದ್ದರು. ‘ಎಂದೆಂದಿಗೂ ಚಿರಋಣಿ’ ಎಂದು ಅವರು ಪೋಸ್ಟ್ ಮಾಡಿದ್ದರು. ಸರ್ಜರಿ ಆದ ಬಳಿಕ ಅವರು ಈ ರೀತಿ ಪೋಸ್ಟ್ ಮಾಡಿರಬಹುದು ಎಂದು ಊಹಿಸಲಾಗಿದೆ.
ಇದನ್ನೂ ಓದಿ: ಖಾಸಗಿ ಆಸ್ಪತ್ರೆಗೆ ಅಮಿತಾಭ್ ಬಚ್ಚನ್ ದಾಖಲು; ಆಂಜಿಯೋಪ್ಲಾಸ್ಟಿ ಮಾಡಿದ ವೈದ್ಯರು
ಚೇತರಿಕೆ ಕಂಡ ಬಿಗ್ ಬಿ
ಐಸಿಸಿ ವುಮನ್ ಟಿ20 ಮ್ಯಾಚ್ ನಡೆದಿದೆ. ಈ ಪಂದ್ಯವನ್ನು ಅಮಿತಾಭ್ ಅವರು ಖುಷಿಯಿಂದ ನೋಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ಪಾಪ್ಕಾರ್ನ್ ಕೂಡ ತಿಂದಿದ್ದಾರೆ. ಅಭಿಷೇಕ್ ಹಾಗೂ ಅಗಸ್ತ್ಯ ಕೂಡ ಅಮಿತಾಭ್ ಜೊತೆ ಸೇರಿಕೊಂಡಿದ್ದಾರೆ.
ಸಿನಿಮಾ ಬಗ್ಗೆ
ಅಮಿತಾಭ್ ಬಚ್ಚನ್ ಅವರು 81ನೇ ವಯಸ್ಸಿನಲ್ಲೂ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ‘ಗಣಪತ್’ ಸಿನಿಮಾದಲ್ಲಿ ಟೈಗರ್ ಶ್ರಾಫ್ ಮತ್ತು ಕೃತಿ ಸನೋನ್ ನಟಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಇವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಟಾಣಿ ಮೊದಲಾದವರು ನಟಿಸಿದ್ದಾರೆ. ಮೇ 9ರಂದು ಈ ಚಿತ್ರ ರಿಲೀಸ್ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ