AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ

ಪ್ರತಿ ಭಾನುವಾರ ತಮ್ಮನ್ನು ನೋಡಲು ಬರುವ ಅಭಿಮಾನಿಗಳನ್ನು ಭೇಟಿಯಾಗುವ ದಶಕಗಳ ಹಳೆಯ ಸಂಪ್ರದಾಯವನ್ನು ಬಿಗ್ ಬಿ ಈ ಭಾನುವಾರವೂ ಮುಂದುವರಿಸಿದ್ದಾರೆ. ಜುಹುನಲ್ಲಿರುವ ತಮ್ಮ ಬಂಗಲೆ ‘ಜಲ್ಸಾ’ದ ಗೇಟ್ ಬಳಿ ನೆರೆದಿದ್ದ ನೂರಾರು ಅಭಿಮಾನಿಗಳನ್ನು ಕಂಡು ಅತ್ಯಂತ ಉತ್ಸಾಹ ಮತ್ತು ಆತ್ಮೀಯತೆಯಿಂದ ಕೈಬೀಸಿದರು.

ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ
Amitabh Bachchan
ಮದನ್​ ಕುಮಾರ್​
|

Updated on: May 25, 2026 | 3:52 PM

Share

ಬಾಲಿವುಡ್‌ನ ಹಿರಿಯ ನಟ, ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಆರೋಗ್ಯದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹ ಹಾಗೂ ವದಂತಿಗಳಿಗೆ ಸ್ವತಃ ಬಿಗ್ ಬಿ ಅವರು ಭಾನುವಾರ (ಮೇ 24) ಪೂರ್ಣ ವಿರಾಮ ಇಟ್ಟಿದ್ದಾರೆ. 83 ವರ್ಷದ ಅಮಿತಾಭ್ ಬಚ್ಚನ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಅವರು ಮುಂಬೈನ ತಮ್ಮ ನಿವಾಸದ ಹೊರಗೆ ಬಂದು ಎಂದಿನಂತೆ ಅಭಿಮಾನಿಗಳಿಗೆ ದರ್ಶನ (Sunday Darshan) ನೀಡುವ ಮೂಲಕ ತಾವು ಸಂಪೂರ್ಣ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.

ಸಾಂಪ್ರದಾಯಿಕ ಕುರ್ತಾ ಪೈಜಾಮ ಧರಿಸಿ ಬಂದಿದ್ದ ಅಮಿತಾಭ್ ಬಚ್ಚನ್, ತಮ್ಮನ್ನು ನೋಡಲು ಕಾದು ನಿಂತಿದ್ದ ಜನಸಾಗರವನ್ನು ಕಂಡು ಹಸನ್ಮುಖಿಯಾಗಿ ಕೈಮುಗಿದು ವಂದಿಸಿದರು. ಅಲ್ಲದೆ, ನೆರೆದಿದ್ದ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ತಮ್ಮ ಮೇಲಿನ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು. ಇದಕ್ಕಾಗಿಯೇ ವಿಶೇಷವಾಗಿ ನಿರ್ಮಿಸಲಾದ ವೇದಿಕೆಯ ಮೇಲೆ ನಿಂತು ಸುಮಾರು ಹತ್ತು ನಿಮಿಷಗಳ ಕಾಲ ಅತ್ಯಂತ ಚಟುವಟಿಕೆಯಿಂದ ಅಭಿಮಾನಿಗಳಿಗೆ ಬಿಗ್ ಬಿ ಕೈಬೀಸಿದರು. ಈ ದೃಶ್ಯಗಳನ್ನು ಕಂಡು ಅಭಿಮಾನಿಗಳ ಆನಂದ ಮುಗಿಲು ಮುಟ್ಟಿತ್ತು.

ಆದರೆ, ಮುಂಬೈನ ಕಠಿಣ ಬಿಸಿಲು ಮತ್ತು ತಾಪಮಾನದ ನಡುವೆ ಅಮಿತಾಭ್ ಬಚ್ಚನ್ ಅವರನ್ನು ನೋಡಲು ಗಂಟೆಗಟ್ಟಲೆ ಕಾಯುತ್ತಿದ್ದ ಅಭಿಮಾನಿಯೊಬ್ಬರು ತೀವ್ರ ಆಯಾಸದಿಂದ ಪ್ರಜ್ಞೆ ತಪ್ಪಿ ಬಿದ್ದ ಘಟನೆಯೂ ನಡೆಯಿತು. ತಕ್ಷಣವೇ ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಂಡರು. ಉಳಿದಂತೆ ಎಲ್ಲವೂ ಸರಿಯಾಗಿಯೇ ನಡೆಯಿತು.

ಕೋವಿಡ್ ಲಾಕ್‌ಡೌನ್ ಅವಧಿಯನ್ನು ಹೊರತುಪಡಿಸಿದರೆ, ಅಮಿತಾಭ್ ಬಚ್ಚನ್ ಅವರು ಕಳೆದ ಹಲವು ವರ್ಷಗಳಿಂದ ಪ್ರತಿ ಭಾನುವಾರ ತಪ್ಪದೇ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾ ಬಂದಿದ್ದಾರೆ. ಇತ್ತೀಚೆಗೆ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹರಡಿದ್ದರಿಂದ, ಈ ಭಾನುವಾರ ಅವರು ಅಭಿಮಾನಿಗಳ ಮುಂದೆ ಬರುವುದಿಲ್ಲ ಎಂದೇ ಭಾವಿಸಲಾಗಿತ್ತು. ಆದರೆ, ಆರೋಗ್ಯವಂತರಾಗಿ, ಮುಗುಳ್ನಗೆಯೊಂದಿಗೆ ಹೊರಬಂದ ಬಿಗ್ ಬಿ ಅವರು ವದಂತಿ ಹರಡುತ್ತಿದ್ದವರಿಗೆ ತಮ್ಮ ನಗುವಿನ ಮೂಲಕವೇ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್

ವಯಸ್ಸು 83 ಆಗಿದ್ದರೂ ಕೂಡ ಅಮಿತಾಭ್ ಬಚ್ಚನ್ ಅವರು ಉತ್ಸಾಹ ಕಳೆದುಕೊಂಡಿಲ್ಲ. ಈಗಲೂ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿ ಆಗುತ್ತಾರೆ. ಸಿನಿಮಾ, ಜಾಹೀರಾತು, ಕಿರುತೆರೆ ಶೋಗಳ ಚಿತ್ರೀಕರಣದಲ್ಲಿ ಅವರು ತೊಡಗಿಕೊಳ್ಳುತ್ತಾರೆ. ಈ ಮೂಲಕ ಅವರು ಬೇರೆ ಎಲ್ಲರಿಗೂ ಮಾದರಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು