ಅಮಿತಾಭ್ ಬಚ್ಚನ್ ಎದುರೇ ಕುಸಿದು ಬಿದ್ದ ಅಭಿಮಾನಿ; ಆಗಿದ್ದೇನು?

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಮುಂಬೈನ ಜುಹು ನಿವಾಸ 'ಜಲ್ಸಾ'ದ ಮುಂದೆ ಭಾನುವಾರ ನಡೆದ ಘಟನೆಯೊಂದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಬಿಗ್ ಬಿ ಅವರನ್ನು ನೋಡಲು ಬಂದ ಅಭಿಮಾನಿಯೊಬ್ಬರು ವಿಪರೀತ ಬಿಸಿಲು ಮತ್ತು ಜನದಟ್ಟಣೆಯಿಂದ ಪ್ರಜ್ಞೆ ಕಳೆದುಕೊಂಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಿದೆ.

ಅಮಿತಾಭ್ ಬಚ್ಚನ್ ಎದುರೇ ಕುಸಿದು ಬಿದ್ದ ಅಭಿಮಾನಿ; ಆಗಿದ್ದೇನು?
ಅಮಿತಾಭ್
Image Credit source: Viral Bhayani

Updated on: May 25, 2026 | 11:11 AM

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಮುಂಬೈನಲ್ಲಿರುವ ತಮ್ಮ ಜುಹು ನಿವಾಸದ ಹೊರ ಭಾಗದಲ್ಲಿ ನೆರೆಯೋ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಕೆಲವೊಮ್ಮೆ ಗಿಫ್ಟ್ ಕೂಡ ನೀಡುತ್ತಾರೆ. ಆದರೆ, ಕಳೆದ ಭಾನುವಾರ (ಮೇ 24) ಒಂದು ದುಃಖಕರ ಘಟನೆ ನಡೆದಿದೆ. ತೀವ್ರ ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಅಮಿತಾಭ್ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಯೋರ್ವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆತಂಕ ಮೂಡಿಸಿದೆ.

1. ಅಭಿಮಾನಿಗಳ ಭೇಟಿ ವೇಳೆ ಬಿಗ್ ಬಿ ಶಾಕ್

2. ನಟನ ಎದುರೇ ಕುಸಿದು ಬಿದ್ದ ಅಭಿಮಾನಿ

3. ಬಿಸಿಲಿಗೆ ತಲೆಸುತ್ತಿ ಬಿದ್ದ ಫ್ಯಾನ್ 

ಅಮಿತಾಭ್ ಬಚ್ಚನ್ ಅವರು ಮುಂಬೈನಲ್ಲಿದ್ದರೆ ಪ್ರತಿ ಭಾನುವಾರ ತಮ್ಮ ‘ಜಲ್ಸಾ’ ನಿವಾಸದ ಹೊರಗೆ ಬಂದು ಅಭಿಮಾನಿಗಳಿಗೆ ದರ್ಶನ ನೀಡುವುದನ್ನು ವಾಡಿಕೆಯಾಗಿಸಿಕೊಂಡಿದ್ದಾರೆ. ಭಾನುವಾರವೂ ಬಿಗ್ ಬಿ ಬಿಳಿ ಬಣ್ಣದ ಉಡುಪಿನಲ್ಲಿ ಬಂದು ಕೈಬೀಸುತ್ತಿದ್ದಂತೆ, ಅವರನ್ನು ನೋಡಲು ಮುಗಿಬಿದ್ದಿದ್ದ ಜನಸಾಗರದಲ್ಲಿ ಒಬ್ಬ ಅಭಿಮಾನಿ ಪ್ರಜ್ಞೆ ಕಳೆದುಕೊಂಡಿದ್ದಾನೆ. ತಕ್ಷಣವೇ ಅಲ್ಲಿದ್ದ ಇತರ ಅಭಿಮಾನಿಗಳು ಅವರನ್ನು ಹಿಡಿದುಕೊಂಡು, ನೀರು ನೀಡಿ ಉಪಚರಿಸಿದ್ದಾರೆ. ನಂತರ ಆಸ್ಪತ್ರೆಗೆ ಕರೆದಯೊಯ್ಯಲಾಗಿದೆ ಎನ್ನಲಾಗಿದೆ. ಸದ್ಯ ಆ ಅಭಿಮಾನಿಯ ಆರೋಗ್ಯ ಪರಿಸ್ಥಿತಿ ಹೇಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ‘ಕಾಗೆಗಳು ಕೂಗುತ್ತಿವೆ’; ಅನಾರೋಗ್ಯ ವದಂತಿ ಹಬ್ಬಿಸಿದವರಿಗೆ ಅಮಿತಾಭ್ ಖಡಕ್ ತಿರುಗೇಟು

ಇತ್ತೀಚೆಗಷ್ಟೇ ಅಮಿತಾಭ್ ಬಚ್ಚನ್ ಅವರು ಮುಂಬೈನ ವಿಐಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದರೆ ಈ ಸುದ್ದಿಯನ್ನು ಅವರ ಆಪ್ತ ಮೂಲಗಳು ಸಂಪೂರ್ಣವಾಗಿ ನಿರಾಕರಿಸಿವೆ. ಅಮಿತಾಭ್ ಅವರು ಪ್ರತಿ ತಿಂಗಳು ನಡೆಸುವ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ನಾನಾವತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ತಪಾಸಣೆ ಮುಗಿಸಿ ಅಂದೇ ಮನೆಗೆ ಮರಳಿದ್ದಾರೆ ಎಂಬ ಸ್ಪಷ್ಟನೆ ಸಿಕ್ಕಿತ್ತು. ಇದನ್ನು ಕೇಳಿದ ಬಳಿಕ ಅಭಿಮಾನಿಗಳು ನಿರಾಳರಾಗಿದ್ದರು.

‘ಕಲ್ಕಿ’ ಸೀಕ್ವೆಲ್‌ನಲ್ಲಿ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರಿಗೆ ಈಗ ವಯಸ್ಸಾಗುತ್ತಿರುವುದರಿಂದ, ಅವರು ಮೊದಲಿನಂತೆ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ತಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ಕೆಲಸಗಳನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರದ ಸೀಕ್ವೆಲ್‌ನಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Mon, 25 May 26

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us