Amitabh Bachchan: ಶೂಟಿಂಗ್​ ವೇಳೆ ಅಮಿತಾಭ್​ ಬಚ್ಚನ್​ ಕಾಲಿಗೆ ಗಾಯ; ನಡೆಯಲೇಬೇಡಿ ಅಂತ ಸಲಹೆ ನೀಡಿದ ವೈದ್ಯರು

| Updated By: ಮದನ್​ ಕುಮಾರ್​

Updated on: Oct 24, 2022 | 7:50 AM

Amitabh Bachchan Hospitalized: ಕಾಲಿಗೆ ಪೆಟ್ಟಾಗಿರುವ ಬಗ್ಗೆ ತಮ್ಮ ಬ್ಲಾಗ್​ ಮೂಲಕ ಅಮಿತಾಭ್​ ಬಚ್ಚನ್ ಅವರು ಮಾಹಿತಿ ನೀಡಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಪ್ರಾರ್ಥಿಸಿದ್ದಾರೆ.

Amitabh Bachchan: ಶೂಟಿಂಗ್​ ವೇಳೆ ಅಮಿತಾಭ್​ ಬಚ್ಚನ್​ ಕಾಲಿಗೆ ಗಾಯ; ನಡೆಯಲೇಬೇಡಿ ಅಂತ ಸಲಹೆ ನೀಡಿದ ವೈದ್ಯರು
ಅಮಿತಾಭ್ ಬಚ್ಚನ್
Follow us on

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ಇತ್ತೀಚೆಗಷ್ಟೇ 80ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅದರ ಬೆನ್ನಲ್ಲೇ ಒಂದು ಕಹಿ ಸುದ್ದಿ ಕೇಳಿಬಂದಿದೆ. ಶೂಟಿಂಗ್​ ವೇಳೆ ಅವರು ಎಡಗಾಲಿಗೆ ಪೆಟ್ಟು (Amitabh Bachchan Injury) ಮಾಡಿಕೊಂಡಿದ್ದಾರೆ. ರಕ್ತನಾಳ ಕಟ್​ ಆಗಿದ್ದರಿಂದ ವಿಪರೀತ ರಕ್ತ ಹೋಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೊಲಿಗೆ ಹಾಕಿಸಲಾಯಿತು. ಈಗ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಒತ್ತಡ ಹಾಕುವಂತಿಲ್ಲ, ನಡೆಯುವಂತಿಲ್ಲ ಎಂದು ಕೂಡ ವೈದ್ಯರು ಸಲಹೆ ನೀಡಿದ್ದಾರೆ ಎಂದು ಸ್ವತಃ ಅಮಿತಾಭ್​ ಬಚ್ಚನ್​ ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಅಮಿತಾಭ್​ ಬಚ್ಚನ್​ ಅವರ ಅನುಭವ ಅಪಾರ. 53 ವರ್ಷಗಳಿಗಿಂತಲೂ ಹೆಚ್ಚು ಕಾಲ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ದಣಿವರಿಯದ ಯುವಕನಂತೆ ಈಗಲೂ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಎಷ್ಟೋ ಜನರಿಗೆ ಅವರು ಮಾದರಿ ಆಗಿದ್ದಾರೆ. ತಮ್ಮದೇ ಬ್ಲಾಗ್​ ಹೊಂದಿರುವ ಅವರು ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಈಗ ಕಾಲಿಗೆ ಪೆಟ್ಟಾಗಿರುವ ಬಗ್ಗೆಯೂ ಬ್ಲಾಗ್​ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಅಮಿತಾಭ್​ ಬಚ್ಚನ್​ ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಪ್ರಾರ್ಥಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅಮಿತಾಭ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಈಗ ಕಾಲಿಗೆ ಪೆಟ್ಟು ಮಾಡಿಕೊಂಡಿರುವುದು ಬೇಸರದ ಸಂಗತಿ. ಇಂಥ ಎಷ್ಟೇ ಅಡೆತಡೆಗಳು ಬಂದರೂ ಅಮಿತಾಭ್​ ಅವರು ಕುಗ್ಗುವುದಿಲ್ಲ. ಪ್ರತಿ ಬಾರಿಯೂ ಅವರು ಹೊಸ ಹುಮ್ಮಸ್ಸಿನೊಂದಿಗೆ ಕೆಲಸಕ್ಕೆ ಮರಳುತ್ತಾರೆ. ಅದು ಅನೇಕರಿಗೆ ಸ್ಫೂರ್ತಿ ತುಂಬುತ್ತದೆ.

ಇದನ್ನೂ ಓದಿ
ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
ಅಮಿತಾಭ್​ ಬಚ್ಚನ್​ ಸಿನಿಮಾಗೆ ತಡೆಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್​
79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ
ಅಮಿತಾಭ್​ ಬಚ್ಚನ್​ ವ್ಯಕ್ತಿತ್ವ ಎಂಥದ್ದು? ಇಂಚಿಂಚು ವಿವರಿಸಿದ ರಶ್ಮಿಕಾ ಮಂದಣ್ಣ

ಇತ್ತೀಚೆಗೆ ಅದ್ದೂರಿಯಾಗಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಿತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಕಾರ್ಯಕ್ರಮಕ್ಕೆ ಅಮಿತಾಭ್​ ಬಚ್ಚನ್​ ಆಗಮಿಸಬೇಕಿತ್ತು. ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅವರಿಗೆ ಉತ್ತಮ ಒಡನಾಟ ಇದೆ. ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲು ಅವರಿಗೂ ಆಮಂತ್ರಣ ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಅವರಿಗೆ ಬರಲು ಸಾಧ್ಯವಾಗಲಿಲ್ಲ. ವಿಡಿಯೋ ಸಂದೇಶದ ಮೂಲಕ ಪುನೀತ್​ ರಾಜ್​ಕುಮಾರ್​ ಅವರನ್ನು ಅಮಿತಾಭ್​ ಸ್ಮರಿಸಿದರು. ‘ಗಂಧದ ಗುಡಿ’ ಸಾಕ್ಷ್ಯಚಿತ್ರಕ್ಕೆ ಶುಭವಾಗಲಿ ಎಂದು ಹರಸಿದರು.

80ರ ಹರೆಯದಲ್ಲೂ ಅಮಿತಾಭ್​ ಬಚ್ಚನ್​ ಅವರು ಸಖತ್ ಬ್ಯುಸಿ ಆಗಿದ್ದಾರೆ. ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮ ನಡೆಸಿಕೊಡುವುದರ ಜೊತೆಗೆ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಅವರನ್ನು ಗಮನದಲ್ಲಿ ಇಟ್ಟುಕೊಂಡೇ ಅನೇಕ ನಿರ್ದೇಶಕರು ಕಥೆ ಬರೆಯುತ್ತಿದ್ದಾರೆ. ಅವರು ಮುಖ್ಯ ಭೂಮಿಕೆ ನಿಭಾಯಿಸಿದ ‘ಗುಡ್​ಬೈ’ ಸಿನಿಮಾ ಇತ್ತೀಚೆಗೆ ತೆರೆಕಂಡಿತು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ಆ ಚಿತ್ರಕ್ಕೆ ಸಾಧ್ಯವಾಗಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:34 am, Mon, 24 October 22