AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್ ಬಚ್ಚನ್‌ಗೆ ಮತ್ತೆ ಜೀವ ಬೆದರಿಕೆ; ಜಲ್ಸಾ ಬಂಗಲೆ ಸ್ಫೋಟಿಸುವುದಾಗಿ ಇ-ಮೇಲ್

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದ್ದು, ಮುಂಬೈನ ಜಲ್ಸಾ ಬಂಗಲೆ ಹಾಗೂ ಮೇಯರ್ ರಿತು ತಾವ್ಡೆ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಕಳುಹಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ಬೆದರಿಕೆ ಸಂದೇಶ ಕಳುಹಿಸಿದ ದುಷ್ಕರ್ಮಿಗಳ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ.

ಅಮಿತಾಭ್ ಬಚ್ಚನ್‌ಗೆ ಮತ್ತೆ ಜೀವ ಬೆದರಿಕೆ; ಜಲ್ಸಾ ಬಂಗಲೆ ಸ್ಫೋಟಿಸುವುದಾಗಿ ಇ-ಮೇಲ್
ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Nov 26, 2026 | 2:10 PM

Share

ಮುಖ್ಯಾಂಶಗಳು

  • ಬಿಗ್ ಬಿ ನಿವಾಸಕ್ಕೆ ಬಾಂಬ್ ಬೆದರಿಕೆ
  • ಜಲ್ಸಾ ಬಂಗಲೆ ಸುತ್ತಮುತ್ತ ಹೈ ಅಲರ್ಟ್
  • ಮುಂಬೈ ಮೇಯರ್ ಕಚೇರಿಗೂ ಬಂತು ಸ್ಫೋಟದ ಇ-ಮೇಲ್

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಎದುರಾಗಿದೆ. ಮುಂಬೈನ ಜುಹು ಪ್ರದೇಶದಲ್ಲಿರುವ ಅವರ ಐಷಾರಾಮಿ ನಿವಾಸ ಜಲ್ಸಾ ಬಂಗಲೆಯನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಅನಾಮಧೇಯ ಇ-ಮೇಲ್ ಸಂದೇಶವು ಬಾಲಿವುಡ್ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಬೆದರಿಕೆ ಬಳಿಕ ನಟನಿಗೆ ಮತ್ತಷ್ಟು ಭದ್ರತೆ ನೀಡಲಾಗಿದೆ.

ಮೇಯರ್ ಕಚೇರಿಗೂ ಬಾಂಬ್ ಬೆದರಿಕೆ

ಕೇವಲ ಅಮಿತಾಭ್ ಬಚ್ಚನ್ ಅವರ ನಿವಾಸಕ್ಕೆ ಮಾತ್ರವಲ್ಲದೆ, ಮುಂಬೈ ಮೇಯರ್ ರಿತು ತಾವ್ಡೆ ಅವರ ಕಚೇರಿಗೂ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಈ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದ್ದು, ಎರಡೂ ಕಡೆ ಬಾಂಬ್ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.

ಭದ್ರತೆ ಹೆಚ್ಚಳ, ತನಿಖೆ ಚುರುಕು

ಬೆದರಿಕೆ ಇ-ಮೇಲ್ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಅಮಿತಾಭ್ ಅವರ ‘ಜಲ್ಸಾ’ ಬಂಗಲೆ ಹಾಗೂ ಮೇಯರ್ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಗಿದೆ. ಇ-ಮೇಲ್ ಎಲ್ಲಿಂದ ಬಂದಿದೆ ಮತ್ತು ಕಳುಹಿಸಿದವರು ಯಾರು ಎಂಬುದನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ಹಾಗೂ ಮುಂಬೈ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬಾಂಬ್ ಬೆದರಿಕೆ: ಬುಲೆಟ್‌ಪ್ರೂಫ್ ಗ್ಲಾಸ್ ಕವರ್‌ನೊಂದಿಗೆ ಅಭಿಮಾನಿಗಳನ್ನು ಭೇಟಿಯಾದ ಅಮಿತಾಭ್ 

ಬುಲೆಟ್ ಪ್ರೂಫ್ ಗ್ಲಾಸ್ ಭದ್ರತೆ

ಅಮಿತಾಭ್ ಬಚ್ಚನ್ ಅವರ ಬಂಗಲೆಗೆ ಈ ರೀತಿಯ ಬಾಂಬ್ ಬೆದರಿಕೆ ಬರುತ್ತಿರುವುದು ಇದೇ ಮೊದಲೇನಲ್ಲ, ಈ ಹಿಂದೆಯೂ ಇಂತಹ ಬೆದರಿಕೆ ಕರೆಗಳು ಬಂದಿದ್ದವು. ಭದ್ರತಾ ದೃಷ್ಟಿಯಿಂದ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಅಮಿತಾಭ್ ಬಚ್ಚನ್, ಪ್ರತಿ ಭಾನುವಾರ ಮನೆಯ ಹೊರಗೆ ಅಭಿಮಾನಿಗಳನ್ನು ಭೇಟಿಯಾಗುವ ವೇಳೆ ವಿಶೇಷವಾಗಿ ಬುಲೆಟ್ ಪ್ರೂಫ್ ಗ್ಲಾಸ್ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More