AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​​ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದಾರೆ ಕೃತಿ ಸನೋನ್​; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Amitabh Bachchan: ‘ಮಿಮಿ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಕೃತಿ ಸನೋನ್​ ಸಂಭಾವನೆ ಹೆಚ್ಚಿದೆ. ಆದರೂ ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.

ಅಮಿತಾಭ್​​ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದಾರೆ ಕೃತಿ ಸನೋನ್​; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?
ಅಮಿತಾಭ್ ಬಚ್ಚನ್, ಕೃತಿ ಸನೋನ್
TV9 Web
| Edited By: |

Updated on: Dec 11, 2021 | 12:48 PM

Share

ಬಾಲಿವುಡ್​ ನಟಿ ಕೃತಿ ಸನೋನ್​ (Kriti Sanon) ಅವರಿಗೆ ಭರ್ಜರಿ ಬೇಡಿಕೆ ಇದೆ. ಪ್ರತಿ ಸಿನಿಮಾಗೆ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಗ್ಲಾಮರ್​ ಜತೆಗೆ ಅವರು ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಡಿಫರೆಂಟ್​ ಸಿನಿಮಾಗಳನ್ನು ಮಾಡಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಇದೆಲ್ಲದರ ಪರಿಣಾಮ ದಿನದಿಂದ ದಿನಕ್ಕೆ ಅವರ ಆದಾಯವೂ ಹೆಚ್ಚುತ್ತಿದೆ. ಇಷ್ಟೆಲ್ಲ ಇದ್ದರೂ ಕೂಡ ಅವರ ಬಾಡಿಗೆ ಮನೆಯಲ್ಲಿದ್ದಾರೆ! ಹೌದು, ಮುಂಬೈನ ಒಂದು ಅಪಾರ್ಟ್​ಮೆಂಟ್​ನಲ್ಲಿ ಅಮಿತಾಭ್​ ಬಚ್ಚನ್​ (Amitabh Bachchan) ಅವರಿಗೆ ಸೇರಿದ ಎರಡು ಫ್ಲೋರ್​ ಅನ್ನು ಕೃತಿ ಸನೋನ್​ ಬಾಡಿಗೆಗೆ ಪಡೆದಿದ್ದಾರೆ. ಸದ್ಯ ಅವರು ಅಲ್ಲಿಯೇ ವಾಸವಾಗಿದ್ದಾರೆ. ಪ್ರತಿ ತಿಂಗಳು ಅವರು ಅದಕ್ಕೆ ದುಬಾರಿ ಮೊತ್ತದ ಬಾಡಿಗೆ ಕಟ್ಟುತ್ತಾರೆ.

ಕೃತಿ ಸನೋನ್​ ಮೂಲತಃ ದೆಹಲಿಯವರು. ಬಾಲಿವುಡ್​ ಸಿನಿಮಾಗಳಲ್ಲಿ ಅವಕಾಶ ಹುಡುಕಿಕೊಂಡು ಅವರು ಹಲವು ವರ್ಷಗಳ ಹಿಂದೆ ಮುಂಬೈಗೆ ಬಂದರು. ಅನೇಕ ಸಿನಿಮಾಗಳಲ್ಲಿ ನಟಿಸಿ ಈಗ ಬಹುಬೇಡಿಕೆಯ ಕಲಾವಿದೆ ಆಗಿದ್ದಾರೆ. ಈ ವರ್ಷ ಅವರು ನಟಿಸಿದ ‘ಮಿಮಿ’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಬಳಿಕ ಕೃತಿ ಸನೋನ್​ ಸಂಭಾವನೆ ಕೂಡ ಹೆಚ್ಚಿದೆ. ಆದರೂ ಅವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.

ಎರಡೂ ಫ್ಲೋರ್​ ಸೇರಿ ಪ್ರತಿ ತಿಂಗಳು ಕೃತಿ ಸನೋನ್​ ಅವರು ಬರೋಬ್ಬರಿ 10 ಲಕ್ಷ ರೂ. ಬಾಡಿಗೆ ಕಟ್ಟುತ್ತಾರೆ! ಮುಂದಿನ ಎರಡು ವರ್ಷಗಳಿಗೆ ಅವರು ಇದನ್ನು ಬಾಡಿಗೆಗೆ ಪಡೆದಿದ್ದು, ಒಪ್ಪಂದ ಮಾಡಿಕೊಂಡಿದ್ದಾರೆ. ಸೆಕ್ಯೂರಿಟಿ ಡಿಪಾಸಿಟ್​ ಆಗಿ 60 ಲಕ್ಷ ರೂ.ಗಳನ್ನು ಕಟ್ಟಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೃತಿ ಸನೋನ್​ ಕೈಯಲ್ಲಿ ಈಗ ಅನೇಕ ಸಿನಿಮಾಗಳಿವೆ. ಆ ಪೈಕಿ ಅತಿ ಹೆಚ್ಚು ನಿರೀಕ್ಷೆ ಮೂಡಿಸಿರುವುದು ‘ಆದಿಪುರುಷ್​​’ ಸಿನಿಮಾ. ಈ ಚಿತ್ರದಲ್ಲಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಹಲವು ದಶಕಗಳಿಂದ ಅಮಿತಾಭ್​ ಬಚ್ಚನ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ದೇಶದ ಅನೇಕ ಕಡೆಗಳಲ್ಲಿ ಅವರು ಆಸ್ತಿ ಹೊಂದಿದ್ದಾರೆ. ಮುಂಬೈನಲ್ಲಿರುವ ಇನ್ನೊಂದು ಕಟ್ಟಡವನ್ನು ಅವರು ಎಸ್​ಬಿಐ ಬ್ಯಾಂಕ್​ಗೆ ಬಾಡಿಗೆ ನೀಡಿದ್ದಾರೆ.

ಇದನ್ನೂ ಓದಿ:

‘ಕೌನ್​ ಬನೇಗಾ ಕರೋಡ್​​ಪತಿ’ ಶೋನಲ್ಲಿ ಕನ್ನಡ ಸಿನಿಮಾ ಮಾತು; ಅಮಿತಾಭ್​ ಕಡೆಯಿಂದ ಶುಭ ಹಾರೈಕೆ

‘ಕೌನ್​ ಬನೇಗಾ ಕರೋಡ್​ಪತಿ’ 1000ನೇ ಎಪಿಸೋಡ್​; ಮಗಳ ಎದುರು ಕಣ್ಣೀರು ಹಾಕಿದ ಅಮಿತಾಭ್​ ಬಚ್ಚನ್​

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!